AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಗೆಲುವನ್ನು ಇಬ್ಬರಿಗೆ ಅರ್ಪಿಸಿದ ಗೌತಮ್ ಗಂಭೀರ್

IND vs NZ: 2026 ಟಿ20 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. 2007, 2024 ರಲ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಭಾರತ ಇದೀಗ ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಈ ಸಾಧನೆ ಮಾಡಿದೆ.

ಟಿ20 ವಿಶ್ವಕಪ್ ಗೆಲುವನ್ನು ಇಬ್ಬರಿಗೆ ಅರ್ಪಿಸಿದ ಗೌತಮ್ ಗಂಭೀರ್
Gautam Gambhir
ಝಾಹಿರ್ ಯೂಸುಫ್
|

Updated on: Mar 09, 2026 | 9:23 AM

Share

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಟೀಮ್ ಇಂಡಿಯಾ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದು ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ. ಅದು ಸಹ ಬರೋಬ್ಬರಿ 96 ರನ್​ಗಳ ಅಂತರದಿಂದ.

ಅಹಮದಾಬಾದ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 159 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿ ವಿಶ್ವಕಪ್ ತನ್ನದಾಗಿಸಿಕೊಂಡಿದೆ.

ಈ ವಿಶ್ವಕಪ್ ಗೆಲುವಿನ ಬಳಿಕ ಸುದ್ಧಿಗೋಷ್ಠಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಈ ಐತಿಹಾಸಿಕ ಜಯವನ್ನು ಭಾರತೀಯ ಕ್ರಿಕೆಟ್‌ನ ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಅವರಿಗೆ ಅರ್ಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಗಂಭೀರ್, “ಭಾರತೀಯ ಕ್ರಿಕೆಟ್ ಅನ್ನು ಇಷ್ಟು ಉತ್ತಮ ಸ್ಥಿತಿಯಲ್ಲಿ ಇರಿಸಿದ್ದಕ್ಕಾಗಿ” ಮಾಜಿ ತರಬೇತುದಾರ ದ್ರಾವಿಡ್ ಅವರಿಗೆ ಈ ಟ್ರೋಪಿಯನ್ನು ನಾನು ಅರ್ಪಿಸುತ್ತೇನೆ.

ಹಾಗೆಯೇ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾಗಿ ಲಕ್ಷ್ಮಣ್ ಅವರು ತೆರೆಯ ಮರೆಯಲ್ಲಿ ಮಾಡುತ್ತಿರುವ “ಬೇಷರತ್ ಕೆಲಸ” ಮತ್ತು ಪ್ರತಿಭೆಗಳನ್ನು ಬೆಳೆಸುವ ಕಾರ್ಯವನ್ನು ಮೆಚ್ಚಲೇಬೇಕು. ಹೀಗಾಗಿ ಈ ಚಾಂಪಿಯನ್ ಪಟ್ಟ ಅವರಿಗೂ ಕೂಡ ಸಲ್ಲುತ್ತದೆ ಎಂದರು.

ಇವರಲ್ಲದೇ, ಟೀಕೆಗಳ ನಡುವೆಯೂ ಪ್ರಾಮಾಣಿಕವಾಗಿ ತಂಡವನ್ನು ಆಯ್ಕೆ ಮಾಡುವ ಮುಖ್ಯ ಆಯ್ಕೆಗಾರ ಅಗರ್ಕರ್ ಅವರಿಗೂ ಈ ಜಯ ಶ್ರೇಯಸ್ಸು ಸಿಗಬೇಕು.

ಹಾಗೆಯೇ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಸಮಯದಲ್ಲಿ ತಮಗೆ ವೈಯಕ್ತಿಕವಾಗಿ ಬೆಂಬಲ ನೀಡಿದ್ದಕ್ಕಾಗಿ ಐಸಿಸಿ ಅಧ್ಯಕ್ಷ ಜೈ ಶಾ ಅವರಿಗೂ ಈ ವೇಳೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಇದನ್ನೂ ಓದಿ: ಫೈನಲ್ ಮ್ಯಾಚ್​ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ..!

ಈ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಗೆಲುವನ್ನು ಗೌತಮ್ ಗಂಭೀರ್ ತೆರೆಮರೆಯಲ್ಲಿ ಕಾರ್ಯ ನಿರ್ವಹಿಸಿದವರಿಗೆ ಹಾಗೂ ಬಲಿಷ್ಠ ತಂಡ ಕಟ್ಟಲು ಆಡಿಪಾಯ ಹಾಕಿಕೊಟ್ಟ ಮಾಜಿ ಕೋಚ್ ರಾಹುಲ್ ದ್ರಾವಿಡ್ ಹಾಗೂ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ಪ್ರತಿಭೆಗಳನ್ನು ಬೆಳೆಸುವ ಕಾರ್ಯ ಮಾಡುತ್ತಿರುವ ವಿವಿಎಸ್ ಲಕ್ಷ್ಮಣ್ ಅವರಿಗೆ ಅರ್ಪಿಸಿದ್ದಾರೆ.

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು