AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moeen Ali: ನಾನಾಗಿದ್ರೆ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡುತ್ತಿದ್ದೆ: ಮೊಯೀನ್ ಅಲಿ

India Test Squad: ಭಾರತ ಟೆಸ್ಟ್​ ತಂಡ: ರೋಹಿತ್‌ ಶರ್ಮ (ನಾಯಕ), ಶುಭ್ಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ಚೇತೇಶ್ವರ್‌ ಪೂಜಾರ, ರಿಷಭ್‌ ಪಂತ್‌, ಕೆಎಸ್‌. ಭರತ್‌, ರವೀಂದ್ರ ಜಡೇಜಾ, ಆರ್‌. ಅಶ್ವಿ‌ನ್‌, ಶಾರ್ದೂಲ್‌ ಠಾಕೂರ್‌

Moeen Ali: ನಾನಾಗಿದ್ರೆ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡುತ್ತಿದ್ದೆ: ಮೊಯೀನ್ ಅಲಿ
Virat Kohli
TV9 Web
| Edited By: |

Updated on: Jun 29, 2022 | 2:57 PM

Share

ಭಾರತ ಮತ್ತು ಇಂಗ್ಲೆಂಡ್ (India vs England Test) ನಡುವಿನ 2021 ರ ಟೆಸ್ಟ್ ಸರಣಿಯ ಐದನೇ ಮತ್ತು ಅಂತಿಮ ಪಂದ್ಯವು ಜುಲೈ 1 ರಿಂದ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ನಾಯಕರಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಕೊರೋನಾ ಪಾಸಿಟಿವ್ ಆಗಿರುವ ಕಾರಣ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಈ ಪಂದ್ಯದಲ್ಲಿ ಆಡುವುದು ಅನುಮಾನ. ಹೀಗಾಗಿ ಹಂಗಾಮಿ ನಾಯಕ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಉಪನಾಯಕ ಜಸ್​ಪ್ರೀತ್ ಬುಮ್ರಾ ನಾಯಕರಾಗಿ ಕಾಣಿಸಿಕೊಳ್ಳಬಹುದು. ಆದರೆ ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಗೆ (Virat Kohli) ನಾಯಕತ್ವವನ್ನು ವಹಿಸಬೇಕೆಂದು ಇಂಗ್ಲೆಂಡ್ ಆಟಗಾರ ಮೊಯೀನ್ ಅಲಿ ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೆ ನಾನಾಗಿದ್ರೆ, ಈ ಪಂದ್ಯದಲ್ಲಿ ಕೊಹ್ಲಿಗೆ ನಾಯಕತ್ವನ್ನು ಹಸ್ತಾಂತರಿಸುತ್ತಿದ್ದೆ ಎಂದು ಇಂಗ್ಲೆಂಡ್ ಆಟಗಾರ ಹೇಳಿದ್ದಾರೆ.

ಇದಕ್ಕೆ ಸ್ಪಷ್ಟ ಕಾರಣಗಳನ್ನೂ ಕೂಡ ಮೊಯೀನ್ ಅಲಿ ನೀಡಿದ್ದಾರೆ. ಏಕೆಂದರೆ ಈ ಸರಣಿಯು ಕಳೆದ ವರ್ಷದ ನಡೆದ ಸರಣಿಯ ಕೊನೆಯ ಪಂದ್ಯ. ಕೊರೋನಾ ಕಾರಣದಿಂದಾಗಿ ಈ ಪಂದ್ಯವನ್ನು ಮುಂದೂಡಲಾಗಿತ್ತು. ಅಂದರೆ ಸರಣಿಯ ಮೊದಲ 4 ಪಂದ್ಯಗಳನ್ನು ವಿರಾಟ್ ಕೊಹ್ಲಿ ಮುನ್ನಡೆಸಿದ್ದರು. ಇದೀಗ ವಿರಾಟ್ ಕೊಹ್ಲಿ ನಾಯಕತ್ವ ತೊರೆದಿರುವ ಕಾರಣ ರೋಹಿತ್ ಶರ್ಮಾ 1 ಟೆಸ್ಟ್ ಪಂದ್ಯವನ್ನು ಮುನ್ನಡೆಸಬೇಕಿದೆ. ಇದೀಗ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಬೇಕೆಂದು ನಾನು ಬಯಸುತ್ತೇನೆ ಎಂದು ಮೊಯೀನ್ ಅಲಿ ತಿಳಿಸಿದ್ದಾರೆ.

ಈ ಹಿಂದೆ ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ನಾಯಕರಾಗಿದ್ದರಿಂದ ಅವರಿಗೆ ನಾಯಕತ್ವವನ್ನು ನೀಡುವುದು ಸೂಕ್ತ. ಆದರೆ ನಾಯಕತ್ವವನ್ನು ತೆಗೆದುಕೊಳ್ಳಬೇಕೇ ಅಥವಾ ಬೇಡವೇ ಎಂಬುದು ಅಂತಿಮವಾಗಿ ವಿರಾಟ್ ಕೊಹ್ಲಿಯೇ ನಿರ್ಧರಿಸಬೇಕಿದೆ. ಆದರೆ ಭಾರತ ತಂಡದ ನಾಯಕನ ಸ್ಥಾನದಲ್ಲಿ ನಾನು ಇದ್ದಿದ್ದರೆ ಅವರಿಗೆ ಈ ಪಂದ್ಯದ ಕ್ಯಾಪ್ಟನ್ಸಿ ನೀಡುತ್ತಿದ್ದೆ ಎಂದು ಮೊಯೀನ್ ಅಲಿ ಹೇಳಿದ್ದಾರೆ.

ಇದೇ ವೇಳೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಮೇಲುಗೈ ಸಾಧಿಸಲಿದೆ ಎಂದು ಅಭಿಪ್ರಾಯಪಟ್ಟಿರುವ ಮೊಯೀನ್ ಅಲಿ, ನಮ್ಮ ತಂಡವು ನ್ಯೂಜಿಲೆಂಡ್ ತಂಡವನ್ನು 3-0 ಅಂತರದಿಂದ ಸೋಲಿಸಿದ್ದಾರೆ. ಕಳೆದ ವರ್ಷವೇ ಈ ಸರಣಿ ಮುಗಿದಿದ್ದರೆ ಭಾರತ 3-1 ಅಂತರದಲ್ಲಿ ಸರಣಿ ಗೆಲ್ಲಬಹುದಿತ್ತು. ಆದರೆ ಇದೀಗ ಇಂಗ್ಲೆಂಡ್ ತಂಡ ಬದಲಾಗಿದೆ. ಆಟಗಾರರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಕಳೆದ 4 ತಿಂಗಳಿಂದ ಭಾರತ ಯಾವುದೇ ಟೆಸ್ಟ್ ಪಂದ್ಯವನ್ನು ಆಡಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆಲ್ಲುವ ಸಾಧ್ಯತೆಯಿದೆ ಎಂದು ಮೊಯೀನ್ ಅಲಿ ತಿಳಿಸಿದ್ದಾರೆ.

ಭಾರತ ಟೆಸ್ಟ್​ ತಂಡ: ರೋಹಿತ್‌ ಶರ್ಮ (ನಾಯಕ), ಶುಭ್ಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ಚೇತೇಶ್ವರ್‌ ಪೂಜಾರ, ರಿಷಭ್‌ ಪಂತ್‌, ಕೆಎಸ್‌. ಭರತ್‌, ರವೀಂದ್ರ ಜಡೇಜಾ, ಆರ್‌. ಅಶ್ವಿ‌ನ್‌, ಶಾರ್ದೂಲ್‌ ಠಾಕೂರ್‌, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಉಮೇಶ್‌ ಯಾದವ್‌, ಪ್ರಸಿದ್ಧ್ ಕೃಷ್ಣ, ಮಯಾಂಕ್​ ಅಗರ್ವಾಲ್.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ಅಲೆಕ್ಸ್ ಲೀಸ್, ಜ್ಯಾಕ್ ಕ್ರೌಲಿ, ಜೋ ರೂಟ್, ಓಲಿ ಪೋಪ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್, ಸ್ಯಾಮ್ ಬಿಲ್ಲಿಂಗ್ಸ್, ಹ್ಯಾರಿ ಬ್ರೂಕ್, ಜೇಮೀ ಓವರ್‌ಟನ್, ಕ್ರೇಗ್ ಓವರ್‌ಟನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್, ಮ್ಯಾಥ್ಯೂ ಪಾಟ್ಸ್ ಮತ್ತು ಜ್ಯಾಕ್ ಲೀಚ್.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ