AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಅಭಿಮಾನಿಗಳ ಕ್ಷಮೆಯಾಚಿಸಿದ ಸ್ಮೃತಿ ಮಂಧಾನ

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯಲ್ಲಿ ಆರ್​ಸಿಬಿ ತಂಡವು ಈಗಾಗಲೇ 6 ಪಂದ್ಯಗಳನ್ನಾಡಿದೆ. ಇನ್ನುಳಿದಿರುವುದು ಕೇವಲ 2 ಮ್ಯಾಚ್ ಮಾತ್ರ. ಈ ಪಂದ್ಯಗಳಲ್ಲಿ ಆರ್​ಸಿಬಿ ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳನ್ನು ಎದುರಿಸಲಿದೆ. ಈ ಎರಡು ಮ್ಯಾಚ್​ಗಳು ಪ್ಲೇಆಫ್​ಗೆ ಪ್ರವೇಶಿಸಲು ಆರ್​ಸಿಬಿ ಪಾಲಿಗೆ ನಿರ್ಣಾಯಕ.

RCB ಅಭಿಮಾನಿಗಳ ಕ್ಷಮೆಯಾಚಿಸಿದ ಸ್ಮೃತಿ ಮಂಧಾನ
Smriti Mandhana
ಝಾಹಿರ್ ಯೂಸುಫ್
|

Updated on: Mar 02, 2025 | 12:53 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಲ್ ಅಭಿಮಾನಿಗಳ ಬಳಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಕ್ಷಮೆಯಾಚಿಸಿದ್ದಾರೆ. ಇಂತಹದೊಂದು ಕ್ಷಮಾಪಣೆಗೆ ಮುಖ್ಯ ಕಾರಣ ತಂಡದ ಕಳಪೆ ಪ್ರದರ್ಶನ. ಅದರಲ್ಲೂ ಈ ಬಾರಿ ಬೆಂಗಳೂರಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದಿರುವ ಕಾರಣ ಸ್ಮೃತಿ ಮಂಧಾನ ಅಭಿಮಾನಿಗಳ ಬಳಿಕ ಕ್ಷಮಾಪಣೆ ಕೋರಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ, ಬೆಂಗಳೂರಿನಲ್ಲಿ ಈ ಬಾರಿ ನಮಗೆ ಒಂದೇ ಒಂದು ಪಂದ್ಯ ಗೆಲ್ಲಲು ಸಾಧ್ಯವಾಗಿಲ್ಲ. ಇದಾಗ್ಯೂ ಪ್ರತಿ ಬಾರಿ ಆರ್​ಸಿಬಿ ಅಭಿಮಾನಿಗಳು ನಮ್ಮ ಬೆಂಬಲಕ್ಕೆ ನಿಂತಿದ್ದರು. ಅದಕ್ಕಾಗಿಯೇ ಆರ್​ಸಿಬಿ ಫ್ಯಾನ್ಸ್ ವಿಶ್ವದ ಅತ್ಯುತ್ತಮ ಅಭಿಮಾನಿಗಳು ಎನಿಸಿಕೊಂಡಿರುವುದು.

ನಮ್ಮ ಸೋಲಿನ ಹೊರತಾಗಿಯೂ ಆರ್​ಸಿಬಿ ಅಭಿಮಾನಿಗಳು ತುಂಬಾ ಬೆಂಬಲ ನೀಡಿದ್ದಾರೆ. ಇದಾಗ್ಯೂ ನಮಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಒಂದು ಮ್ಯಾಚ್ ಕೂಡ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ನಾನು ಆರ್​ಸಿಬಿ ಅಭಿಮಾನಿಗಳಿಗೆ ಕ್ಷಮೆಯಾಚಿಸುತ್ತೇನೆ ಎಂದು ಸ್ಮೃತಿ ಮಂಧಾನ ಹೇಳಿದ್ದಾರೆ.

ವಡೋದರಾದಲ್ಲಿ ನಡೆದ ಈ ಬಾರಿಯ ಐಪಿಎಲ್​ನ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆ ಬಳಿಕ ಬ್ಯಾಕ್ ಟು ಬ್ಯಾಕ್ 4 ಸೋಲುಗಳನ್ನು ಕಂಡಿದೆ. ಅದರಲ್ಲೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 4 ಮ್ಯಾಚ್​ಗಳಲ್ಲೂ ಮುಗ್ಗರಿಸುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಈ ನಿರಾಸೆಯ ಕಾರಣದಿಂದಲೇ ಇದೀಗ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ.

ಇನ್ನು ಆರ್​ಸಿಬಿ ತಂಡಕ್ಕೆ ಎರಡು ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್​ಗೆ ಪ್ರವೇಶಿಸಬಹುದು. ಈ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸುವ ನಾವು ಆರ್​ಸಿಬಿ ಅಭಿಮಾನಿಗಳು ಹೆಮ್ಮೆಪಡುವಂತೆ ಮಾಡುತ್ತೇವೆ ಎಂದು ಸ್ಮೃತಿ ಮಂಧಾನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Champions Trophy 2025: ಅದೇ ನಾಲ್ಕು… ನಾಲ್ಕರಲ್ಲಿ ಎರಡು… ಹಿಸ್ಟರಿ ರಿಪೀಟ್

RCB ತನ್ನ ಮುಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಮಾರ್ಚ್ 8 ರಂದು ನಡೆಯಲಿರುವ ಈ ಪಂದ್ಯಕ್ಕೆ ಲಕ್ನೋನ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಮಾರ್ಚ್ 11 ರಂದು ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಮುಂಬೈನ ಬ್ರಬೋರ್ನ್​ ಸ್ಟೇಡಿಯಂನಲ್ಲಿ ಜರುಗಲಿದೆ.

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್