IBSA ವರ್ಲ್ಡ್ ಗೇಮ್ಸ್ನಲ್ಲಿ ಭಾರತ ಮಹಿಳಾ ಅಂಧರ ಕ್ರಿಕೆಟ್ ತಂಡ ಚಾಂಪಿಯನ್ಸ್
IBSA World Games 2023: ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ಮಹಿಳಾ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಪರಿಣಾಮ ಕೇವಲ 3.3 ಓವರ್ಗಳಲ್ಲಿ ಭಾರತ ತಂಡವು 1 ವಿಕೆಟ್ ಕಳೆದುಕೊಂಡು 43 ರನ್ಗಳಿಸಿ 9 ವಿಕೆಟ್ಗಳ ಅಮೋಘ ಗೆಲುವನ್ನು ತನ್ನದಾಗಿಸಿಕೊಂಡಿದೆ.
ಇಂಗ್ಲೆಂಡ್ನ ಎಡ್ಜ್ಬಾಸ್ಟನ್ನಲ್ಲಿ ನಡೆದ ಇಂಟರ್ನ್ಯಾಷನಲ್ ಬ್ಲೈಂಡ್ ಸ್ಪೋರ್ಟ್ ಫೆಡರೇಶನ್ (IBSA) ವರ್ಲ್ಡ್ ಗೇಮ್ಸ್ನ ಮಹಿಳಾ ಅಂಧರ ಕ್ರಿಕೆಟ್ ಫೈನಲ್ನಲ್ಲಿ ಭರ್ಜರಿ ಜಯ ಸಾಧಿಸಿ ಭಾರತೀಯ ವನಿತೆಯರು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 9 ವಿಕೆಟ್ಗಳಿಂದ ಗೆಲ್ಲುವ ಮೂಲಕ ಭಾರತ ತಂಡ ಈ ಸಾಧನೆ ಮಾಡಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ VI ಮಹಿಳಾ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 114 ರನ್ ಕಲೆಹಾಕಿತು. ದ್ವಿತೀಯ ಇನಿಂಗ್ಸ್ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು 9 ಓವರ್ಗಳಿಗೆ ಸೀಮಿತಗೊಳಿಸಲಾಯಿತು. ಅಲ್ಲದೆ ಭಾರತ VI ಮಹಿಳಾ ತಂಡಕ್ಕೆ 9 ಓವರ್ಗಳಲ್ಲಿ 43 ರನ್ಗಳ ಗುರಿ ನೀಡಲಾಗಿತ್ತು.
ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ಮಹಿಳಾ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಪರಿಣಾಮ ಕೇವಲ 3.3 ಓವರ್ಗಳಲ್ಲಿ ಭಾರತ ತಂಡವು 1 ವಿಕೆಟ್ ಕಳೆದುಕೊಂಡು 43 ರನ್ಗಳಿಸಿ, 9 ವಿಕೆಟ್ಗಳ ಅಮೋಘ ಗೆಲುವನ್ನು ತನ್ನದಾಗಿಸಿಕೊಂಡಿದೆ.
History made at @Edgbaston! India are our first ever cricket winners at the IBSA World Games!
Australia VI Women 114/8 India VI Women 43/1 (3.3/9)
India VI Women win by 9 wickets.
📸 Will Cheshire pic.twitter.com/1Iqx1N1OCW
— IBSA World Games 2023 (@IBSAGames2023) August 26, 2023
ಈ ಮೂಲಕ ಇಂಟರ್ನ್ಯಾಷನಲ್ ಬ್ಲೈಂಡ್ ಸ್ಪೋರ್ಟ್ ಫೆಡರೇಶನ್ (IBSA) ವರ್ಲ್ಡ್ ಗೇಮ್ಸ್ನ ಅಂಧರ ಕ್ರಿಕೆಟ್ನಲ್ಲಿ ಭಾರತ ಮಹಿಳಾ ತಂಡವು ಐತಿಹಾಸಿಕ ಸಾಧನೆ ಮಾಡಿದೆ.
Published On - 7:06 pm, Sat, 26 August 23