AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್ ದರ್ಬಾರ್ ಶುರು..!

T20 World Cup 2024: ಮುಂಬರುವ ಟಿ20 ವಿಶ್ವಕಪ್​ನಲ್ಲಿ ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ಈ ಕಾಮೆಂಟರಿ ಪ್ಯಾನೆಲ್‌ನಲ್ಲಿ 40 ಅನುಭವಿಗಳು ಸ್ಥಾನ ಪಡೆದಿದ್ದಾರೆ. ಇದರಲ್ಲಿ ನಾಲ್ವರು ಮಾಜಿ ಟೀಂ ಇಂಡಿಯಾ ಆಟಗಾರರು ಸ್ಥಾನ ಪಡೆದಿದ್ದಾರೆ.

T20 World Cup 2024: ಟಿ20 ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್ ದರ್ಬಾರ್ ಶುರು..!
ಟಿ20 ವಿಶ್ವಕಪ್ 2024
ಪೃಥ್ವಿಶಂಕರ
|

Updated on: May 24, 2024 | 6:08 PM

Share

ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup 2024) ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಐಸಿಸಿ (ICC) ಇಂದು ಬಿಡುಗಡೆ ಮಾಡಿದೆ. ಈ ಕಾಮೆಂಟರಿ ಪ್ಯಾನೆಲ್‌ನಲ್ಲಿ 40 ಅನುಭವಿಗಳು ಸ್ಥಾನ ಪಡೆದಿದ್ದಾರೆ. ಇದರಲ್ಲಿ ನಾಲ್ವರು ಮಾಜಿ ಟೀಂ ಇಂಡಿಯಾ (Team India) ಆಟಗಾರರು ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ ಈಗಷ್ಟೇ ಐಪಿಎಲ್​ಗೆ (IPL) ವಿದಾಯ ಹೇಳಿದ ಆರ್​ಸಿಬಿಯ (RCB) ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ (Dinesh Karthik) ಕೂಡ ವೀಕ್ಷಕ ವಿವರಣೆಗಾರನಾಗಿ ಟಿ20 ವಿಶ್ವಕಪ್​ನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಇವರನ್ನು ಹೊರತುಪಡಿಸಿ ಲೆಜೆಂಡರಿ ವೀಕ್ಷಕ ವಿವರಣೆಗಾರರಾದ ರವಿಶಾಸ್ತ್ರಿ, ನಾಸರ್ ಹುಸೇನ್, ಇಯಾನ್ ಸ್ಮಿತ್, ಮೆಲ್ ಜೋನ್ಸ್, ಹರ್ಷಾ ಭೋಗ್ಲೆ ಮತ್ತು ಇಯಾನ್ ಬಿಷಪ್ ಕೂಡ ಈ ಪಟ್ಟಿಯಲ್ಲಿದ್ದಾರೆ.

ವೀಕ್ಷಕ ವಿವರಣೆಗಾರರ ಪಟ್ಟಿ ರಿಲೀಸ್

ಭಾರತದ ಕಾಲಮಾನದ ಪ್ರಕಾರ ಜೂನ್ 2 ರಿಂದ ವಿಶ್ವಕಪ್ ಆರಂಭವಾಗಲಿದೆ. ಮೊದಲ ಪಂದ್ಯ ಅಮೆರಿಕ ಮತ್ತು ಕೆನಡಾ ನಡುವೆ ನಡೆಯಲಿದೆ. ಈ ಬಾರಿಯ ವಿಶ್ವಕಪ್ ಅನ್ನು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿವೆ. ಟೂರ್ನಿಯ ಆರಂಭಿಕ ಪಂದ್ಯಗಳು ಅಮೆರಿಕದಲ್ಲಿ ನಡೆಯಲಿವೆ. ಈ ಬಾರಿ, ಮಾಜಿ ಪುರುಷರ ಮತ್ತು ಮಹಿಳಾ ಟಿ 20 ವಿಶ್ವಕಪ್ ಚಾಂಪಿಯನ್‌ಗಳಾದ ದಿನೇಶ್ ಕಾರ್ತಿಕ್, ಎಬೊನಿ ರೈನ್‌ಫೋರ್ಡ್-ಬ್ರೆಂಟ್, ಸ್ಯಾಮ್ಯುಯೆಲ್ ಬದ್ರಿ, ಕಾರ್ಲೋಸ್ ಬ್ರಾಥ್‌ವೈಟ್, ಸ್ಟೀವ್ ಸ್ಮಿತ್, ಆರೋನ್ ಫಿಂಚ್ ಮತ್ತು ಲಿಸಾ ಸ್ಥಾಲೇಕರ್ ಅವರ ಧ್ವನಿ ಪಂದ್ಯಾವಳಿಯಲ್ಲಿ ಪಂದ್ಯದುದ್ದಕ್ಕೂ ಕೇಳಿಬರಲಿದೆ.

ನಾಲ್ವರು ಭಾರತೀಯರಿಗೆ ಸ್ಥಾನ

ಟಿ20 ವಿಶ್ವಕಪ್‌ನ ಕಾಮೆಂಟರಿ ಪ್ಯಾನೆಲ್‌ನಲ್ಲಿ ನಾಲ್ವರು ಭಾರತೀಯರಾದ ರವಿಶಾಸ್ತ್ರಿ, ಸುನಿಲ್ ಗವಾಸ್ಕರ್, ಹರ್ಷಾ ಭೋಗ್ಲೆ ಮತ್ತು ದಿನೇಶ್ ಕಾರ್ತಿಕ್ ಇದ್ದಾರೆ. ಇತ್ತೀಚೆಗಷ್ಟೇ ಐಪಿಎಲ್‌ನಿಂದ ನಿವೃತ್ತರಾದ ದಿನೇಶ್ ಕಾರ್ತಿಕ್ ಈಗ ಟಿ20 ವಿಶ್ವಕಪ್‌ನಲ್ಲಿ ಕಾಮೆಂಟ್ ಮಾಡಲಿದ್ದಾರೆ.

ಮಾಜಿ ದಂತಕಥೆಗಳ ಉಪಸ್ಥಿತಿ

ಇವರನ್ನು ಹೊರತುಪಡಿಸಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಸುನಿಲ್ ಗವಾಸ್ಕರ್, ಮ್ಯಾಥ್ಯೂ ಹೇಡನ್, ರಮಿಜ್ ರಾಜಾ, ಇಯಾನ್ ಮಾರ್ಗನ್, ಟಾಮ್ ಮೂಡಿ ಮತ್ತು ವಾಸಿಂ ಅಕ್ರಮ್ ಕೂಡ ಮುಂಬರುವ ಪಂದ್ಯಾವಳಿಯ ಬಗ್ಗೆ ತಮ್ಮ ಪರಿಣಿತ ವಿಶ್ಲೇಷಣೆಯನ್ನು ನೀಡಲಿದ್ದಾರೆ. ಅಮೇರಿಕನ್ ಕಾಮೆಂಟೇಟರ್ ಜೇಮ್ಸ್ ಒ’ಬ್ರೇನ್ ಕೂಡ ಕಾಮೆಂಟ್ ಮಾಡುವುದನ್ನು ಕಾಣಬಹುದು.

ಕಾಮೆಂಟರಿ ಪ್ಯಾನೆಲ್‌ನಲ್ಲಿರುವ ಇತರ ದೊಡ್ಡ ಹೆಸರುಗಳಲ್ಲಿ ಡೇಲ್ ಸ್ಟೇನ್, ಗ್ರೇಮ್ ಸ್ಮಿತ್, ಮೈಕೆಲ್ ಅಥರ್ಟನ್, ವಕಾರ್ ಯೂನಿಸ್, ಸೈಮನ್ ಡೌಲ್, ಶಾನ್ ಪೊಲಾಕ್, ಕೇಟೀ ಮಾರ್ಟಿನ್, ಎಂಪುಮೆಲೆಲೊ ಎಂಬಾಂಗ್ವಾ, ನಟಾಲಿ ಜರ್ಮನೋಸ್, ಡ್ಯಾನಿ ಮಾರಿಸನ್, ಅಲಿಸನ್ ಮಿಚೆಲ್, ಅಲನ್ ವಿಲ್ಕಿನ್ಸ್. ಬ್ರಿಯಾನ್ ಮುರ್ಗಟ್ರಾಯ್ಡ್, ಮೈಕ್ ಹೈಸ್ಮನ್, ಇಯಾನ್ ವಾರ್ಡ್, ಅಥರ್ ಅಲಿ ಖಾನ್, ರಸೆಲ್ ಅರ್ನಾಲ್ಡ್, ನಿಯಾಲ್ ಒ’ಬ್ರೇನ್, ಕ್ಲೈವ್ ನಾಯ್ಡು, ಡ್ಯಾರೆನ್ ಗಂಗಾ ಕೂಡ ಸೇರಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!