AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತದ ಮೊದಲ ಪಂದ್ಯ ಯಾವಾಗ ಗೊತ್ತಾ?

Women's T20 World Cup 2024: ವನಿತೆಯರ ವಿಶ್ವಕಪ್‌ಗೆ ಬಾಂಗ್ಲಾದೇಶ ಆತಿಥ್ಯವಹಿಸುತ್ತಿದ್ದು, ಅಕ್ಟೋಬರ್ 3 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಇದೀಗ ಈ ಮಿನಿ ವಿಶ್ವಸಮರದ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ.

ಮಹಿಳೆಯರ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತದ ಮೊದಲ ಪಂದ್ಯ ಯಾವಾಗ ಗೊತ್ತಾ?
ಮಹಿಳೆಯರ ಟಿ20 ವಿಶ್ವಕಪ್
ಪೃಥ್ವಿಶಂಕರ
| Edited By: |

Updated on:May 16, 2024 | 12:35 PM

Share

ಈ ವರ್ಷ ಕ್ರಿಕೆಟ್​ ಲೋಕದಲ್ಲಿ ಡಬಲ್ ಧಮಾಕ ಇದೆ. ಮೊದಲನೆಯದ್ದು, ಇನ್ನು ಕೆಲವೇ ದಿನಗಳಲ್ಲಿ ಪುರುಷರ ಟಿ20 ವಿಶ್ವಕಪ್ (T20 World Cup 2024) ಆರಂಭವಾಗಲಿದೆ. ಈ ಮಿನಿ ವಿಶ್ವಕಪ್ ಸರಿಸುಮಾರು 1 ತಿಂಗಳು ನಡೆಯಲ್ಲಿದೆ. ಅದಾದ ಬಳಿಕ ಮಹಿಳೆಯರ ಟಿ20 ವಿಶ್ವಕಪ್‌ (Women’s T20 World Cup 2024) ಕೂಡ ನಡೆಯಲ್ಲಿದೆ. ವನಿತೆಯರ ವಿಶ್ವಕಪ್‌ಗೆ ಬಾಂಗ್ಲಾದೇಶ ಆತಿಥ್ಯವಹಿಸುತ್ತಿದ್ದು, ಅಕ್ಟೋಬರ್ 3 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಇದೀಗ ಈ ಮಿನಿ ವಿಶ್ವಸಮರದ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ (ICC) ಇಂದು ಬಿಡುಗಡೆ ಮಾಡಿದೆ.

ಮೇಲೆ ಹೇಳಿದಂತೆ ಈ ಬಾರಿ ಬಾಂಗ್ಲಾದೇಶ ಟಿ20 ವಿಶ್ವಕಪ್‌ಗೆ ಆತಿಥ್ಯ ವಹಿಸುತ್ತಿದೆ. ಈ ಪಂದ್ಯಾವಳಿಯಲ್ಲಿ ಆಡುತ್ತಿರುವ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದರೆ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ.

PBKS vs CSK Live Score, IPL 2024: ಸಿಎಸ್​ಕೆ ಮೂರನೇ ವಿಕೆಟ್ ಪತನ

ಅಕ್ಟೋಬರ್ 3 ರಿಂದ ಪ್ರಾರಂಭ

ಮಹಿಳೆಯರ ಟಿ20 ವಿಶ್ವಕಪ್ ಈ ವರ್ಷದ ಅಕ್ಟೋಬರ್ 3 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಢಾಕಾದಲ್ಲಿ ನಡೆಯಲಿದೆ. ಎಲ್ಲಾ ತಂಡಗಳು ತಮ್ಮ ತಮ್ಮ ಗುಂಪುಗಳಲ್ಲಿ ತಲಾ 4 ಪಂದ್ಯಗಳನ್ನು ಆಡಲಿವೆ. ಈ ಟೂರ್ನಿಯ ಅಂತಿಮ ಪಂದ್ಯ ಅಕ್ಟೋಬರ್ 20 ರಂದು ನಡೆಯಲಿದೆ.

2 ಗುಂಪುಗಳು ಹೀಗಿವೆ

ಗುಂಪು ಎ- ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಕ್ವಾಲಿಫೈಯರ್ 1.

ಗುಂಪು ಬಿ- ಬಾಂಗ್ಲಾದೇಶ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಕ್ವಾಲಿಫೈಯರ್ 2.

ಟೀಂ ಇಂಡಿಯಾ ವೇಳಾಪಟ್ಟಿ

ಟಿ20 ವಿಶ್ವಕಪ್​ನಲ್ಲಿ ಭಾರತ ಮಹಿಳಾ ತಂಡವು ಅಕ್ಟೋಬರ್ 4 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇದಾದ ನಂತರ ಟೀಂ ಇಂಡಿಯಾದ ಎರಡನೇ ಪಂದ್ಯ ಅಕ್ಟೋಬರ್ 6 ರಂದು ಪಾಕಿಸ್ತಾನದ ವಿರುದ್ಧ ನಡೆಯಲಿದೆ. ಇದರ ನಂತರ, ಭಾರತ ತಂಡವು ಅಕ್ಟೋಬರ್ 9 ರಂದು ಕ್ವಾಲಿಫೈಯರ್ 1 ತಂಡದೊಂದಿಗೆ ಸೆಣಸಾಡಲಿದೆ. ಆ ನಂತರ ಅಕ್ಟೋಬರ್ 13 ರಂದು ಆಸ್ಟ್ರೇಲಿಯಾ ವಿರುದ್ಧ ಹೈವೋಲ್ಟೇಜ್ ಪಂದ್ಯ ನಡೆಯಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Sun, 5 May 24

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ