ICC: ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುವ ತಂಡಗಳ ಸಂಖ್ಯೆ ಮತ್ತಷ್ಟು ಹೆಚ್ಚಳ; ಐಸಿಸಿ ಮಹತ್ವದ ನಿರ್ಧಾರ
ICC: ಮಹಿಳೆಯರ ವಿಶ್ವಕಪ್ ಇದೇ ಅಕ್ಟೋಬರ್ 3 ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 10 ಮಹಿಳಾ ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿ ಆರಂಭಕ್ಕೂ ಮುನ್ನ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಐಸಿಸಿ, ಪುರುಷರ ಟಿ20 ವಿಶ್ವಕಪ್ನಂತೆ ಮಹಿಳೆಯರ ಟಿ20 ವಿಶ್ವಕಪ್ನಲ್ಲೂ ಭಾಗವಹಿಸುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಲು ತೀರ್ಮಾನಿಸಿದೆ.

ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ 9ನೇ ಆವೃತ್ತಿಯ ಪುರುಷರ ಟಿ20 ವಿಶ್ವಕಪ್ ಅನ್ನು ಯಶಸ್ವಿಯಾಗಿ ಆಯೋಜಿಸಿದ್ದ ಐಸಿಸಿ, ಇದೀಗ ಮಹಿಳೆಯರ ಟಿ20 ವಿಶ್ವಕಪ್ ಆಯೋಜನೆಯತ್ತ ಹೆಜ್ಜೆ ಇಟ್ಟಿದೆ. ಮಹಿಳೆಯರ ವಿಶ್ವಕಪ್ ಇದೇ ಅಕ್ಟೋಬರ್ 3 ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 10 ಮಹಿಳಾ ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿ ಆರಂಭಕ್ಕೂ ಮುನ್ನ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಐಸಿಸಿ, ಪುರುಷರ ಟಿ20 ವಿಶ್ವಕಪ್ನಂತೆ ಮಹಿಳೆಯರ ಟಿ20 ವಿಶ್ವಕಪ್ನಲ್ಲೂ ಭಾಗವಹಿಸುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಲು ತೀರ್ಮಾನಿಸಿದೆ.
ಪುರುಷರ ಟಿ20 ವಿಶ್ವಕಪ್‌ನಲ್ಲಿ 20 ತಂಡಗಳು ಭಾಗಿ
ವಾಸ್ತವವಾಗಿ ಇತ್ತಿಚೆಗೆ ಮುಕ್ತಾಯಗೊಂಡ ಪುರುಷರ ಟಿ20 ವಿಶ್ವಕಪ್‌ನಲ್ಲಿ ಬರೋಬ್ಬರಿ 20 ತಂಡಗಳು ಭಾಗವಹಿಸಿದ್ದವು. ಟಿ20 ವಿಶ್ವಕಪ್‌ನಲ್ಲಿ ಇಷ್ಟೊಂದು ತಂಡಗಳು ಭಾಗವಹಿಸಿದ್ದು, ಇದೇ ಮೊದಲು. ಇದಕ್ಕೂ ಮೊದಲು ಅಂದರೆ 2022 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ 16 ತಂಡಗಳು ಸ್ಪರ್ಧಿಸಿದ್ದವು. ಆದರೆ ಆ ಬಳಿಕ ವಿಶ್ವದಲ್ಲಿ ಹೆಚ್ಚುತ್ತಿರುವ ಟಿ20 ಕ್ರಿಕೆಟ್ನ ಕ್ರೇಜ್ ಅನ್ನು ಪರಿಗಣಿಸಿದ ಐಸಿಸಿ, 16 ತಂಡಗಳ ಬದಲು 20 ತಂಡಗಳನ್ನು ಟಿ20 ವಿಶ್ವಕಪ್‌ನಲ್ಲಿ ಕಣಕ್ಕಿಳಿಸಿತ್ತು. ಇದೀಗ ಮಹಿಳಾ ಟಿ20 ವಿಶ್ವಕಪ್ನಲ್ಲೂ ಈ ಯೋಜನೆಯನ್ನು ಜಾರಿಗೆ ತರಲು ಐಸಿಸಿ ಮುಂದಾಗಿದೆ.
2030ರ ವೇಳೆಗೆ ತಂಡಗಳ ಸಂಖ್ಯೆ ಹೆಚ್ಚಳ
ಐಸಿಸಿಯ ವಾರ್ಷಿಕ ಸಮ್ಮೇಳನವು ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ಶನಿವಾರ ಮತ್ತು ಭಾನುವಾರದಂದು ನಡೆಯಿತು. ಇದರಲ್ಲಿ ಮಂಡಳಿಯ ಸಭೆಯ ಹೊರತಾಗಿ, ವಾರ್ಷಿಕ ಸಾಮಾನ್ಯ ಸಭೆ (AGM) ಸಹ ನಡೆಯಿತು. ಈ ಸಭೆಯಲ್ಲಿ, ಎಲ್ಲಾ ಐಸಿಸಿ ಸದಸ್ಯ ಮಂಡಳಿಗಳ ಅಧಿಕಾರಿಗಳು ಉಪಸ್ಥಿತರಿದ್ದು, ಕೆಲವು ಪ್ರಮುಖ ವಿಷಯಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಅದರಲ್ಲಿ ಪ್ರಮುಖವಾದದ್ದು ಮಹಿಳಾ ಟಿ20 ವಿಶ್ವಕಪ್‌ನಲ್ಲಿ ತಂಡಗಳ ಸಂಖ್ಯೆಯನ್ನು ಹೆಚ್ಚಿಸುವುದು. ಪುರುಷರ ಮತ್ತು ಮಹಿಳಾ ಕ್ರಿಕೆಟ್‌ನಲ್ಲಿ ಸಮಾನತೆಯನ್ನು ಉತ್ತೇಜಿಸುವ ಅಭಿಯಾನದ ಭಾಗವಾಗಿ ಐಸಿಸಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.
2030 ರಲ್ಲಿ 16 ತಂಡಗಳು ಕಣಕ್ಕೆ
ಹಂತಹಂತವಾಗಿ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಅಂತಾರಾಷ್ಟ್ರೀಯ ಮಂಡಳಿ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಕಟಣೆಯಂತೆ ಈ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್‌ನಲ್ಲಿ ಮೊದಲೇ ನಿರ್ಧರಿಸಿರುವಂತೆ 10 ತಂಡಗಳು ಕಣಕ್ಕಿಳಿಯಲಿವೆ. ಆದರೆ ಮುಂದಿನ ಆವೃತ್ತಿಯಲ್ಲಿ ಅಂದರೆ, 2026ರಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಈ ತಂಡಗಳ ಸಂಖ್ಯೆ 12ಕ್ಕೆ ಏರಿಕೆಯಾಗಲಿದ್ದು, ನಂತರ 2030ರ ವೇಳೆಗೆ ಇವುಗಳ ಸಂಖ್ಯೆ 16ಕ್ಕೆ ಏರಿಕೆಯಾಗಲಿದೆ. ಒಟ್ಟಾರೆ, ಮುಂಬರುವ ವರ್ಷಗಳಲ್ಲಿ ಹೆಚ್ಚು ಹೆಚ್ಚು ದೇಶಗಳು ವಿಶ್ವಕಪ್‌ನಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯಲಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
