AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Annual Rankings: ಐಸಿಸಿ ವಾರ್ಷಿಕ ರ‍್ಯಾಂಕಿಂಗ್ ಪಟ್ಟಿಯಲ್ಲೂ ಭಾರತದ್ದೇ ಪಾರುಪತ್ಯ

ICC Annual Rankings: ಐಸಿಸಿ ಪುರುಷರ ಕ್ರಿಕೆಟ್ ತಂಡದ ವಾರ್ಷಿಕ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಭಾರತ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಮುನ್ನಡೆ ಸಾಧಿಸಿದೆ. ಪಾಕಿಸ್ತಾನ ಮೂರು ಸ್ವರೂಪಗಳಲ್ಲಿಯೂ ಕೆಳಗಿನ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಸಹ ಶ್ರೇಯಾಂಕದಲ್ಲಿ ಉತ್ತಮ ಸ್ಥಾನ ಪಡೆದಿವೆ.

ICC Annual Rankings: ಐಸಿಸಿ ವಾರ್ಷಿಕ ರ‍್ಯಾಂಕಿಂಗ್ ಪಟ್ಟಿಯಲ್ಲೂ ಭಾರತದ್ದೇ ಪಾರುಪತ್ಯ
Ind Vs Pak
ಪೃಥ್ವಿಶಂಕರ
|

Updated on:May 05, 2025 | 5:11 PM

Share

2025 ರ ಐಪಿಎಲ್ (IPL 2025) ನಡುವೆ ಟೀಂ ಇಂಡಿಯಾಗೆ (Team India) ಶುಭ ಸುದ್ದಿ ಸಿಕ್ಕಿದೆ. ವಾಸ್ತವವಾಗಿ ಐಸಿಸಿ, ಪುರುಷರ ಕ್ರಿಕೆಟ್ ತಂಡದ ವಾರ್ಷಿಕ ರ‍್ಯಾಂಕಿಂಗ್ ಪಟ್ಟಿಯನ್ನು (ICC Annual Rankings) ಬಿಡುಗಡೆ ಮಾಡಿದೆ. ಬಿಡುಗಡೆಯಾಗಿರುವ ಮೂರು ಮಾದರಿಯ ಕ್ರಿಕೆಟ್​ನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ತಂಡ ಎರಡು ಮಾದರಿಗಳಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಉಳಿದಂತೆ ಆಸ್ಟ್ರೇಲಿಯಾ ಒಂದು ಸ್ವರೂಪದಲ್ಲಿ ನಂಬರ್-1 ಸ್ಥಾನ ಪಡೆದುಕೊಂಡಿದೆ. ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ.

ಟೀಂ ಇಂಡಿಯಾಗೆ ಅಗ್ರಸ್ಥಾನ

ಬಿಳಿ ಚೆಂಡಿನ ಸ್ವರೂಪದಲ್ಲಿ ಟೀಂ ಇಂಡಿಯಾ ತನ್ನ ಪ್ರಾಬಲ್ಯವನ್ನು ಕಾಯ್ದುಕೊಂಡಿದೆ. ಅಂದರೆ ಭಾರತ ತಂಡ ಏಕದಿನ ಮತ್ತು ಟಿ20 ಮಾದರಿಗಳಲ್ಲಿ ನಂಬರ್-1 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಉಳಿದಂತೆ ಟೆಸ್ಟ್ ಮಾದರಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನ ಪಡೆದುಕೊಂಡಿದೆ. ಏಕದಿನ ಶ್ರೇಯಾಂಕದಲ್ಲಿ ಭಾರತಕ್ಕೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಲಾಭ ಸಿಕ್ಕಿದ್ದು ಇದರೊಂದಿಗೆ ತಂಡದ ರೇಟಿಂಗ್ ಪಾಯಿಂಟ್ಸ್ 122 ರಿಂದ 124 ಕ್ಕೆ ಏರಿದೆ. ಹಾಗೆಯೇ ಟಿ20 ವಿಶ್ವಕಪ್‌ ಗೆದ್ದಿದ್ದ ಭಾರತ ಟಿ20 ಮಾದರಿಯಲ್ಲೂ ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾಕ್ಕಿಂತ ಅದರ ಮುನ್ನಡೆ 10 ರಿಂದ ಒಂಬತ್ತು ಪಾಯಿಂಟ್‌ಗಳಿಗೆ ಇಳಿದಿದೆ. ಇದಲ್ಲದೆ, ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್ ಆಸ್ಟ್ರೇಲಿಯಾ ಟೆಸ್ಟ್ ತಂಡದ ಶ್ರೇಯಾಂಕದಲ್ಲಿ ತನ್ನ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದು, ಅದರ ಮುನ್ನಡೆ 15 ರಿಂದ 13 ಅಂಕಗಳಿಗೆ ಇಳಿದಿದೆ. ಆಸ್ಟ್ರೇಲಿಯಾ 126 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದೆ.

ಪಾತಳಕ್ಕೆ ಕುಸಿದ ಪಾಕಿಸ್ತಾನ

ಪಾಕಿಸ್ತಾನದ ಬಗ್ಗೆ ಹೇಳುವುದಾದರೆ ಈ ತಂಡ ಮೂರು ಸ್ವರೂಪಗಳಲ್ಲಿಯೂ ಅತ್ಯಂತ ಕೆಳ ಸ್ಥಾನದಲ್ಲಿದೆ. ಟೆಸ್ಟ್​ನಲ್ಲಿ 7 ನೇ ಶ್ರೇಯಾಂಕ ಪಡೆದಿರುವ ಪಾಕ್ ತಂಡ ಏಕದಿನದಲ್ಲಿ 5 ನೇ ಸ್ಥಾನ ಮತ್ತು ಟಿ20 ಮಾದರಿಯಲ್ಲಿ 8 ನೇ ಸ್ಥಾನದಲ್ಲಿದೆ. ಅಂದರೆ ಪಾಕ್ ತಂಡ ಯಾವುದೇ ಸ್ವರೂಪದಲ್ಲಿಯೂ ಟೀಂ ಇಂಡಿಯಾದ ಹತ್ತಿರದಲ್ಲಿಲ್ಲ. ಮೇ 2024 ರಿಂದ ಏಪ್ರಿಲ್ 2025 ರ ನಡುವೆ ಪಾಕ್ ತಂಡದ ಪ್ರದರ್ಶನ ತುಂಬಾ ಕಳಪೆಯಾಗಿದೆ. 2024 ರ ಟಿ20 ವಿಶ್ವಕಪ್‌ನಲ್ಲಿ ಲೀಗ್ ಹಂತದಿಂದಲೇ ಹೊರಬಿದ್ದದ್ದ ಪಾಕ್ ಇದಾದ ನಂತರ ಚಾಂಪಿಯನ್ಸ್ ಟ್ರೋಫಿಯಲ್ಲೂ ಇದೇ ರೀತಿಯ ಕಳಪೆ ಪ್ರದರ್ಶನ ನೀಡಿತ್ತು. ಆತಿಥೇಯ ರಾಷ್ಟ್ರವಾಗಿದ್ದರೂ, ಈ ಪಂದ್ಯಾವಳಿಯಲ್ಲಿಯೂ ಲೀಗ್ ಹಂತದಿಂದಲೇ ಹೊರಬಿತ್ತು.

IPL 2025: ಐಪಿಎಲ್ ಪ್ರಸಾರವನ್ನು ನಿಷೇಧಿಸಿದ ಪಾಕಿಸ್ತಾನಕ

ಇಂಗ್ಲೆಂಡ್-ನ್ಯೂಜಿಲೆಂಡ್ ತಂಡಗಳಿಗೆ ಲಾಭ

ಏಕದಿನ ಶ್ರೇಯಾಂಕದಲ್ಲಿ ಚಾಂಪಿಯನ್ಸ್ ಟ್ರೋಫಿ ರನ್ನರ್ ಅಪ್ ನ್ಯೂಜಿಲೆಂಡ್ ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದಿದೆ. ಹೀಗಾಗಿ ಆಸ್ಟ್ರೇಲಿಯಾ ಈಗ ಮೂರನೇ ಸ್ಥಾನದಲ್ಲಿದೆ. ಶ್ರೀಲಂಕಾ ನಾಲ್ಕನೇ ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ಟಿ20 ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಮೂರನೇ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ಕ್ರಮವಾಗಿ ನಾಲ್ಕು, ಐದು ಮತ್ತು ಆರನೇ ಸ್ಥಾನದಲ್ಲಿವೆ. ಇವುಗಳ ನಂತರ ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಐರ್ಲೆಂಡ್ ಮತ್ತು ಜಿಂಬಾಬ್ವೆ ಬರುತ್ತವೆ.

ಟೆಸ್ಟ್ ಶ್ರೇಯಾಂಕದಲ್ಲಿ ಇಂಗ್ಲೆಂಡ್ ಲಾಭ ಗಳಿಸಿದ್ದು, ದಕ್ಷಿಣ ಆಫ್ರಿಕಾ ಮತ್ತು ಭಾರತವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಬಂದಿದೆ. ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದ್ದರೆ, ಭಾರತ ನಾಲ್ಕನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ನ್ಯೂಜಿಲೆಂಡ್, ಶ್ರೀಲಂಕಾ, ಪಾಕಿಸ್ತಾನ, ವೆಸ್ಟ್ ಇಂಡೀಸ್, ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ತಂಡಗಳಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Mon, 5 May 25

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು