ICC Award: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಜಿಂಬಾಬ್ವೆ ಆಟಗಾರ..!

ICC Award: ಆಗಸ್ಟ್ ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆದ್ದ ಮೊದಲ ಜಿಂಬಾಬ್ವೆ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಸಿಕಂದರ್ ರಾಜಾ ಪಾತ್ರರಾಗಿದ್ದಾರೆ.

ICC Award: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಜಿಂಬಾಬ್ವೆ ಆಟಗಾರ..!
Sikandar Raza
Follow us
TV9 Web
| Updated By: ಪೃಥ್ವಿಶಂಕರ

Updated on:Sep 12, 2022 | 10:07 PM

ಜಿಂಬಾಬ್ವೆಯ ಸ್ಟಾರ್ ಆಲ್​ರೌಂಡರ್ ಸಿಕಂದರ್ ರಾಜಾ (Sikandar Raza) ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಆಗಸ್ಟ್ ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು (ICC Player of the Month award) ಗೆದ್ದ ಮೊದಲ ಜಿಂಬಾಬ್ವೆ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಈ ಬಾರಿ ರಾಜಾ ಜೊತೆಗೆ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ (Ben Stokes) ಮತ್ತು ನ್ಯೂಜಿಲೆಂಡ್ ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ (Mitchell Santner) ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ದರು. ಆದರೆ ಎದುರಾಳಿಯನ್ನು ಲೆಕ್ಕಿಸದೆ ರನ್ ಮಳೆ ಸುರಿಸುವ ಸಿಕಂದರ್​ಗೆ ಈ ಪ್ರಶಸ್ತಿ ಒಲಿಯತು.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಗಸ್ಟ್ ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ವಿಜೇತರನ್ನು ಪ್ರಕಟಿಸಿದ್ದು, ಪುರುಷರ ವಿಭಾಗದಲ್ಲಿ ರಾಜಾ ಪ್ರಶಸ್ತಿ ಪಡೆದರೆ ಮಹಿಳೆಯರ ವಿಭಾಗದಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಮೆಕ್​ಗ್ರಾತ್ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದರು. ಕಳೆದ ಕೆಲವು ತಿಂಗಳುಗಳಿಂದ ಸಿಕಂದರ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ತವರಿನಲ್ಲಿ ಬಾಂಗ್ಲಾದೇಶ ಹಾಗೂ ಭಾರತದ ವಿರುದ್ಧದ ಪಂದ್ಯಗಳಲ್ಲಿ ರಾಜಾ ಶತಕಗಳನ್ನು ಸಿಡಿಸಿದ್ದರು.

ಬಾಂಗ್ಲಾದೇಶದ ವಿರುದ್ಧ ಎರಡು ಶತಕ ಬಾರಿಸಿದ ಬಳಿಕ ಭಾರತದ ಬಲಿಷ್ಠ ಬೌಲರ್​ಗಳನ್ನು ಸೀಳಿ ಮತ್ತೊಂದು ಶತಕ ಬಾರಿಸಿದ್ದರು. ಬೌಲಿಂಗ್​ನಲ್ಲೂ ಮಿಂಚಿದ್ದ ಸಿಕಂದರ್ ಬಾಂಗ್ಲಾ ವಿರುದ್ಧದ ಏಕದಿನ ಸರಣಿಯನ್ನು ಕ್ವೀನ್ಸ್ ಸ್ವೀಪ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ತಿಂಗಳು ಅವರು ಒಟ್ಟಾರೆ ಏಳು ವಿಕೆಟ್‌ಗಳನ್ನು ಪಡೆದಿದ್ದರು. ಈ ಪ್ರದರ್ಶನದ ಪುರಾವೆಯಾಗಿ, ಐಸಿಸಿ ರಾಜಾ ಅವರಿಗೆ ತಿಂಗಳ ಆಟಗಾರ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ICC ಪುರುಷರ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆಯುವಲ್ಲಿ ನ್ಯೂಜಿಲೆಂಡ್‌ನ ಪ್ರಮುಖ ಆಲ್‌ರೌಂಡರ್‌ಗಳಾದ ಮಿಚೆಲ್ ಸ್ಯಾಂಟ್ನರ್ ಮತ್ತು ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಅವರನ್ನು ಹಿಂದಿಕ್ಕಿ ಪ್ರಶಸ್ತಿಯನ್ನು ಗೆದ್ದ ಮೊದಲ ಜಿಂಬಾಬ್ವೆ ಅಂತರರಾಷ್ಟ್ರೀಯ ಆಟಗಾರ ಎಂಬ ಹೆಗ್ಗಳಿಕೆಗೆ ರಾಜಾ ಪಾತ್ರರಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸದ ರಾಜಾ, ICC ಯಿಂದ ICC ಪುರುಷರ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆದ್ದಿರುವುದಕ್ಕೆ ನನಗೆ ನಂಬಲಾಗದಷ್ಟು ಸಂತೋಷವಾಗಿದೆ. ಈ ಪ್ರಶಸ್ತಿಯನ್ನು ಗೆದ್ದ ಮೊದಲ ಜಿಂಬಾಬ್ವೆ ಆಟಗಾರನಾಗಿರುವುದು ಇನ್ನಷ್ಟು ಸಂತಸ ತಂದಿದೆ ಎಂದು ರಾಜಾ ಹೇಳಿದ್ದಾರೆ.

ಕಳೆದ ಮೂರರಿಂದ ನಾಲ್ಕು ತಿಂಗಳುಗಳಲ್ಲಿ ನನ್ನೊಂದಿಗೆ ಡ್ರೇಸಿಂಗ್​ ರೂಂನಲ್ಲಿದ್ದ ಎಲ್ಲರಿಗೂ, ಅಂದರೆ ತಾಂತ್ರಿಕ ಸಿಬ್ಬಂದಿ ಮತ್ತು ಆಟಗಾರರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅವರಿಲ್ಲದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಕೊನೆಯದಾಗಿ, ನಿಮ್ಮ ಎಲ್ಲಾ ಪ್ರಾರ್ಥನೆಗಳು ಮತ್ತು ನಿಮ್ಮ ಎಲ್ಲಾ ಶುಭಾಶಯಗಳಿಗಾಗಿ ಜಿಂಬಾಬ್ವೆ ಮತ್ತು ಸಾಗರೋತ್ತರದಲ್ಲಿರುವ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ಹೇಳಲು ನಾನು ಬಯಸುತ್ತೇನೆ ಎಂದು ರಾಜಾ ಹೇಳಿಕೊಂಡಿದ್ದಾರೆ.

Published On - 10:07 pm, Mon, 12 September 22

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್