ಫೆಬ್ರವರಿ 18 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳು ಪಾಲ್ಗೊಳ್ಳುತ್ತಿವೆ. ಪಾಕಿಸ್ತಾನ ಹಾಗೂ ಯುಎಇ ಆತಿಥ್ಯದಲ್ಲಿ ನಡೆಯಲ್ಲಿರುವ ಈ ಐಸಿಸಿ ಟೂರ್ನಿಯಲ್ಲಿ ಟೀಂ ಇಂಡಿಯಾದ ಪಂದ್ಯಗಳು ಯುಎಇಯಲ್ಲಿ ನಡೆದರೆ, ಉಳಿದ ತಂಡಗಳ ಪಂದ್ಯಗಳಿಗೆ ಪಾಕಿಸ್ತಾನ ಆತಿಥ್ಯ ನೀಡಲಿದೆ. ಇನ್ನು ಈ ಟೂರ್ನಿಗೆ ತಂಡಗಳನ್ನು ಪ್ರಕಟಿಸಲು ಎಲ್ಲಾ ಕ್ರಿಕೆಟ್ ಮಂಡಳಿಗೆ ಐಸಿಸಿ, ಜನವರಿ 12 ವರೆಗೆ ಗಡುವು ನೀಡಿತ್ತು. ಆದರೆ ಗಡುವು ಮುಗಿಯುತ್ತಾ ಬಂದರೂ ಇದುವರೆಗೆ ಕೇವಲ 4 ಕ್ರಿಕೆಟ್ ಮಂಡಳಿಗಳು ಮಾತ್ರ ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿವೆ. ಉಳಿದ 4 ಕ್ರಿಕೆಟ್ ಮಂಡಳಿಗಳು ಮಾತ್ರ ಮುಂದಿನ ದಿನಗಳಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಟೀಂ ಇಂಡಿಯಾದ ವಿಚಾರಕ್ಕೆ ಬಂದರೆ, ಜನವರಿ 18 ಅಥವಾ 19 ರಂದು ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ವಾಸ್ತವವಾಗಿ ಈ ಟೂರ್ನಿಗೆ ಮೊದಲು ತಂಡವನ್ನು ಪ್ರಕಟಿಸಿದ ಕ್ರಿಕೆಟ್ ಮಂಡಳಿ ಎಂದರೆ ಅದು ಇಸಿಬಿ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಿಂಗಳ ಹಿಂದೆಯೇ ಜೋಸ್ ಬಟ್ಲರ್ ನಾಯಕತ್ವದಲ್ಲಿ ತನ್ನ ತಂಡವನ್ನು ಪ್ರಕಟಿಸಿತ್ತು. ಇಂದು ಮೂರು ಕ್ರಿಕೆಟ್ ಮಂಡಳಿಗಳು ತಮ್ಮ ತಮ್ಮ ತಂಡವನ್ನು ಪ್ರಕಟಿಸಿವೆ. ಅವುಗಳಲ್ಲಿ ನ್ಯೂಜಿಲೆಂಡ್, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗಳು ಸೇರಿವೆ. ಈ 4 ಮಂಡಳಿಗಳ ತಂಡಗಳ ವಿವರ ಹೀಗಿದೆ.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಡೆವೊನ್ ಕಾನ್ವೆ, ಟಾಮ್ ಲೇಥಮ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ವಿಲ್ ಯಂಗ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ನಾಥನ್ ಸ್ಮಿತ್, ಲಾಕಿ ಫರ್ಗುಸನ್, ಬೆನ್ ಸೀರ್ಸ್, ವಿಲಿಯಂ ಒರೋಕ್, ಮ್ಯಾಟ್ ಹೆನ್ರಿ, ಮೈಕೆಲ್ ಬ್ರೇಸ್ವೆಲ್.
ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಸೌಮ್ಯ ಸರ್ಕಾರ್, ತಂಝಿದ್ ಹಸನ್, ತಂಝಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಮಹ್ಮದುಲ್ಲಾ, ಜೇಕರ್ ಅಲಿ, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ಪರ್ವೇಜ್ ಹೊಸೈನ್, ನಸುಮ್ ಅಹ್ಮದ್, ತಂಜಿಮ್ ಹಸನ್ ಶಕೀಬ್, ನಹಿದ್ ರಾಣಾ.
ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ (ಉಪನಾಯಕ), ರೆಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ಸೇದಿಕುಲ್ಲಾ ಅಟಲ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ರಶೀದ್ ಖಾನ್, ಎಎಮ್ ಗಜನ್ಫರ್, ನೂರ್ ಅಹ್ಮದ್, ಫಜಲ್ ಹಕ್ ಫಾರೂಕಿ, ನವೀದ್ ಜದ್ರಾನ್ ಮತ್ತು ಫರೀದ್ ಅಹ್ಮದ್ ಮಲಿಕ್.
ಮೀಸಲು ಆಟಗಾರರು: ದರ್ವಿಶ್ ರಸೌಲಿ, ನಂಗ್ಯಾಲ್ ಖರೋಟಿ ಮತ್ತು ಬಿಲಾಲ್ ಸಾಮಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ