ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಯಾವಾಗ ಯಾವ ತಂಡವನ್ನು ಎದುರಿಸಲಿದೆ? ಇಲ್ಲಿದೆ ಪೂರ್ಣ ವಿವರ

ICC Champions Trophy 2025 India's Schedule: ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯುವ ಈ ಹೈಬ್ರಿಡ್ ಟೂರ್ನಿಯಲ್ಲಿ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯುವ ಈ ಟೂರ್ನಿಯ ಲೀಗ್ ಹಂತದಲ್ಲಿ ಭಾರತ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಎದುರಿಸಲಿದೆ. ಟೀಂ ಇಂಡಿಯಾ ಫೈನಲ್ ತಲುಪಿದರೆ ಫೈನಲ್ ದುಬೈನಲ್ಲಿ ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಯಾವಾಗ ಯಾವ ತಂಡವನ್ನು ಎದುರಿಸಲಿದೆ? ಇಲ್ಲಿದೆ ಪೂರ್ಣ ವಿವರ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Dec 24, 2024 | 8:00 PM

ಪಾಕಿಸ್ತಾನ ಹಾಗೂ ದುಬೈ ಆತಿಥ್ಯದಲ್ಲಿ ನಡೆಯಲ್ಲಿರುವ 2025 ರ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಹೈಬ್ರಿಡ್ ಮಾದರಿಯಲ್ಲಿ ಈ ಟೂರ್ನಿ ನಡೆಯಲಿದೆ. ಅಂದರೆ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಉಳಿದ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲ್ಲಿವೆ. ಪಂದ್ಯಾವಳಿಯು ಫೆಬ್ರವರಿ 19 ರಂದು ಕರಾಚಿಯಲ್ಲಿ ಪ್ರಾರಂಭವಾಗಲಿದ್ದು, ಮಾರ್ಚ್ 9 ರಂದು ನಡೆಯಲ್ಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯಗೊಳ್ಳಲಿದೆ. ಆದರೆ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ ಎಂಬುದು ಟೀಂ ಇಂಡಿಯಾದ ಪ್ರದರ್ಶನದ ಮೇಲೆ ಅವಲಂಬಿತವಾಗಿದೆ. ಅಂದರೆ, ಟೀಂ ಇಂಡಿಯಾ ಫೈನಲ್ ತಲುಪಿದರೆ ದುಬೈನಲ್ಲಿ ಫೈನಲ್ ಪಂದ್ಯ ನಡೆಯಲಿದೆ, ಇಲ್ಲದಿದ್ದರೆ ಪಾಕಿಸ್ತಾನ ಫೈನಲ್‌ಗೆ ಆತಿಥ್ಯ ವಹಿಸಲಿದೆ.

ಟೀಂ ಇಂಡಿಯಾ ವೇಳಾಪಟ್ಟಿ

ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಆಡಲಿದ್ದು, 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಟೀಂ ಇಂಡಿಯಾ ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶದೊಂದಿಗೆ ಎ ಗುಂಪಿನಲ್ಲಿದೆ. ಗುಂಪು ಹಂತದಲ್ಲಿ ಈ ಮೂರು ತಂಡಗಳ ವಿರುದ್ಧ ತಲಾ ಒಂದು ಪಂದ್ಯವನ್ನು ಆಡಲಿದೆ. ಇದಾದ ಬಳಿಕ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ನಡೆಯಲಿದೆ. ಫೆಬ್ರವರಿ 20 ರಿಂದ ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಅಭಿಯಾನ ಆರಂಭವಾಗಲಿದ್ದು, ರೋಹಿತ್ ಪಡೆ ತನ್ನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ನಂತರ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಪಂದ್ಯ ಫೆಬ್ರವರಿ 20 ರಂದು ನಡೆಯಲಿದೆ. ಇದರ ನಂತರ, ಗುಂಪಿನ ಕೊನೆಯ ಪಂದ್ಯದಲ್ಲಿ, ಮಾರ್ಚ್ 2 ರಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.

ಭಾರತ ಎರಡು ಬಾರಿ ಚಾಂಪಿಯನ್

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಯನ್ನು 1998 ರಲ್ಲಿ ಪ್ರಾರಂಭಿಸಲಾಯಿತು. ಆದರೆ ಕಳೆದ 8 ವರ್ಷಗಳಿಂದ ಈ ಪಂದ್ಯಾವಳಿಯನ್ನು ಆಯೋಜಿಸಿರಲಿಲ್ಲ. ಕಳೆದ ಬಾರಿ ಅಂದರೆ 2017ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್​ನಲ್ಲಿ ಪಾಕಿಸ್ತಾನ, ಟೀಂ ಇಂಡಿಯಾವನ್ನು ಸೋಲಿಸಿತ್ತು. ಇನ್ನು ಈ ಟೂರ್ನಿಯಲ್ಲಿ ಭಾರತ 2 ಬಾರಿ ಚಾಂಪಿಯನ್ ಆಗಿದ್ದು, ಮೊದಲ ಬಾರಿಗೆ 2002ರಲ್ಲಿ ಟೀಂ ಇಂಡಿಯಾ ಮತ್ತು ಶ್ರೀಲಂಕಾ ಜಂಟಿ ವಿಜೇತರಾಗಿದ್ದವು.ಆ ಬಳಿಕ 2013 ರಲ್ಲಿ ನಡೆದಿದ್ದ ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ

ಭಾರತ ಯಶಸ್ವಿ ತಂಡ

ಇದರ ಜೊತೆಗೆ ಈ ಟೂರ್ನಿಯ ಇತಿಹಾಸದಲ್ಲಿ ಟೀಂ ಇಂಡಿಯಾ ಅತ್ಯಂತ ಯಶಸ್ವಿ ತಂಡವಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಇದುವರೆಗೆ 29 ಪಂದ್ಯಗಳನ್ನು ಆಡಿದ್ದು, 18 ಪಂದ್ಯಗಳನ್ನು ಗೆದ್ದಿದೆ. 8ರಲ್ಲಿ ಸೋಲು ಕಂಡಿದೆ. ಉಳಿದ ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಈ ಟೂರ್ನಿಯಲ್ಲಿ ಭಾರತ ತಂಡ ಒಟ್ಟು 4 ಬಾರಿ ಫೈನಲ್ ತಲುಪಿದ್ದು, ಇದರಲ್ಲಿ ಎರಡು ಬಾರಿ ಫೈನಲ್ ಪಂದ್ಯದಲ್ಲಿ ಸೋಲು ಕಂಡಿದೆ. 2000ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್​ಗೇರಿದ್ದ ಭಾರತ, ನ್ಯೂಜಿಲೆಂಡ್‌ ವಿರುದ್ಧ ಸೋತಿತ್ತು. ಹಾಗೆಯೇ ಕಳೆದ ಬಾರಿಯ ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಸೋತಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Tue, 24 December 24