ಚಾಂಪಿಯನ್ಸ್ ಟ್ರೋಫಿ ಬಹುಮಾನ ಮೊತ್ತ IPL ಆಟಗಾರರ ಸಂಭಾವನೆಗಿಂತ ಕಡಿಮೆ..!
Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಫೆಬ್ರವರಿ 19 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಬಹುಮಾನ ಮೊತ್ತವನ್ನು ಪ್ರಕಟಿಸಲಾಗಿದೆ. ಫೆಬ್ರವರಿ 19 ರಿಂದ ಶುರುವಾಗಲಿರುವ ಈ ಟೂರ್ನಿಯ ಒಟ್ಟು ಬಹುಮಾನ ಮೊತ್ತ 6.9 ಮಿಲಿಯನ್ ಅಮೆರಿಕನ್ ಡಾಲರ್. ಅಂದರೆ ಭಾರತೀಯ ರೂಪಾಯಿ ಮೌಲ್ಯ 59,81,06,861 ಕೋಟಿ ರೂ. ಈ 59.81 ಕೋಟಿ ರೂ. ಬಹುಮಾನ ಮೊತ್ತವನ್ನು ವಿವಿಧ ಹಂತಗಳಲ್ಲಿ ವಿಂಗಡಿಸಲಾಗಿದೆ.
ಅಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡಕ್ಕೆ ಗರಿಷ್ಠ ಬಹುಮಾನ ಮೊತ್ತ ಸಿಗಲಿದೆ. ಇನ್ನುಳಿದ 7 ತಂಡಗಳಿಗೂ ಪ್ರೈಸ್ ಮನಿ ಸಿಗಲಿದೆ. ಇಲ್ಲಿ ಯಾವ ತಂಡಕ್ಕೆ ಎಷ್ಟು ಮೊತ್ತ ಸಿಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
- ಚಾಂಪಿಯನ್ಸ್ ತಂಡಕ್ಕೆ- 2.24 ಮಿಲಿಯನ್ ಯುಎಸ್ ಡಾಲರ್ (ಸುಮಾರು 20 ಕೋಟಿ ರೂ.)
- ರನ್ನರ್ ಅಪ್ ತಂಡಕ್ಕೆ- 1.12 ಮಿಲಿಯನ್ ಯುಎಸ್ ಡಾಲರ್ (ಸುಮಾರು 10 ಕೋಟಿ ರೂ.)
- ಸೆಮಿಫೈನಲ್ನಲ್ಲಿ ಸೋತ ತಂಡಗಳಿಗೆ- ತಲಾ 5 ಕೋಟಿ ರೂ.
- 5 ಮತ್ತು 6ನೇ ಸ್ಥಾನ ಪಡೆದ ತಂಡಗಳಿಗೆ- ತಲಾ 3 ಕೋಟಿ ರೂ.
- 7 ಮತ್ತು 8ನೇ ಸ್ಥಾನ ಪಡೆದ ತಂಡಗಳಿಗೆ- ತಲಾ 1 ಕೋಟಿ 20 ಲಕ್ಷ ರೂ. ಸಿಗಲಿದೆ.
ಇಲ್ಲಿ ಗಮನಿಸಬೇಕಾದ ಮುಖ್ಯ ವಿಷಯ ಎಂದರೆ ಐಸಿಸಿ ಚಾಂಪಿಯನ್ಸ್ ಹಾಗೂ ರನ್ನರ್ ಅಪ್ ತಂಡಗಳಿಗೆ ನೀಡುವ ಬಹುಮಾನ ಮೊತ್ತ. ಈ ಪ್ರೈಸ್ ಮನಿಗಿಂತಲೂ ಅಧಿಕ ಮೊತ್ತವನ್ನು ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ಕೆಲ ಆಟಗಾರರು ಪಡೆದುಕೊಂಡಿದ್ದಾರೆ.
ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಚೈಸಿ ರಿಷಭ್ ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶ್ರೇಯಸ್ ಅಯ್ಯರ್ಗೆ 26.75 ಕೋಟಿ ರೂ. ನೀಡಲಿದೆ.
ಅಂದರೆ ವಿಶ್ವ ಕ್ರಿಕೆಟ್ ಪಂದ್ಯಾವಳಿಯಲ್ಲಿ ನೀಡಲಾಗುವ ಬಹುಮಾನ ಮೊತ್ತಕ್ಕಿಂತ ಅಧಿಕ ಮೊತ್ತವನ್ನು ಟೀಮ್ ಇಂಡಿಯಾ ಆಟಗಾರರು ಐಪಿಎಲ್ನಲ್ಲಿ ಕೇವಲ 14 ಪಂದ್ಯಗಳನ್ನಾಡಿ ಪಡೆಯುತ್ತಿದ್ದಾರೆ. ಹೀಗಾಗಿಯೇ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಬಹುಮಾನ ಮೊತ್ತದ ಘೋಷಣೆಯು ನಗೆಪಾಟಲಿಗೀಡಾಗಿದೆ.
ಇದನ್ನೂ ಓದಿ: ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್
ಚಾಂಪಿಯನ್ಸ್ ಟ್ರೋಫಿ ಯಾವಾಗ ಶುರು?
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್ಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ.
