AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​​​ಗೆ ಕೈ ಕೊಟ್ಟರೆ ಪಾಕಿಸ್ತಾನ್ ತಂಡ ಬ್ಯಾನ್..!

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಯಿಂದ ಈಗಾಗಲೇ ಬಾಂಗ್ಲಾದೇಶ್ ತಂಡ ಹೊರಬಿದ್ದಿದ್ದು, ಅವರ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ತಂಡ ಕೂಡ ಟೂರ್ನಿಯಿಂದ ಹೊರ ನಡೆಯುವ ಬೆದರಿಕೆಯೊಡ್ಡಿದೆ.

ಟಿ20 ವಿಶ್ವಕಪ್​​​ಗೆ ಕೈ ಕೊಟ್ಟರೆ ಪಾಕಿಸ್ತಾನ್ ತಂಡ ಬ್ಯಾನ್..!
Pakistan
ಝಾಹಿರ್ ಯೂಸುಫ್
|

Updated on: Jan 25, 2026 | 10:00 AM

Share

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಗುಳಿಯುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ಸುದ್ದಿಯ ಬೆನ್ನಲ್ಲೇ ಐಸಿಸಿ ಪಾಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟ ಬೆನ್ನಲ್ಲೇ ಪಾಕ್ ತಂಡ ಮುಂದಿನ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿಕೆ ನೀಡಿದ್ದರು.

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಕಣಕ್ಕಿಳಿಯುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪಾಕ್ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು. ಹೀಗಾಗಿ ಪಾಕಿಸ್ತಾನ್ ಸರ್ಕಾರ ಏನು ಹೇಳುತ್ತದೆಯೋ ಅದರ ಮೇಲೆ ಪಾಕ್ ತಂಡದ ವಿಶ್ವಕಪ್ ಭವಿಷ್ಯ ನಿಂತಿದೆ ಮೊಹ್ಸಿನ್ ನಖ್ವಿ ಹೇಳಿದ್ದರು.

ಈ ಮೂಲಕ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ಬೆಂಬಲ ಸೂಚಿಸಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಪರೋಕ್ಷವಾಗಿ ಟಿ20 ವಿಶ್ವಕಪ್​ನಿಂದ ಹೊರಗುಳಿಯುವ ಬೆದರಿಕೆಯೊಡ್ಡಿದ್ದಾರೆ.

ಇತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಗುಳಿದರೆ ಟೂರ್ನಿಯು ಆರ್ಥಿಕ ನಷ್ಟ ಅನುಭವಿಸಲಿದೆ ಎಂಬ ಲೆಕ್ಕಾಚಾರವನ್ನು ಪಿಸಿಬಿ ಹಾಕಿಕೊಂಡಿದೆ. ಅದರಲ್ಲೂ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯದಿದ್ದರೆ ವಿಶ್ವಕಪ್ ಟೂರ್ನಿಯು ಬಹುತೇಕ ವಿಫಲವಾದಂತೆ. ಹೀಗಾಗಿಯೇ ಬಿಸಿಸಿಐ ಹಾಗೂ ಐಸಿಸಿಗೆ ಬಿಗ್ ಶಾಕ್ ನೀಡಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತೆರೆ ಮರೆಯ ಪ್ರಯತ್ನಕ್ಕೆ ಕೈ ಹಾಕಿದೆ.

ಐಸಿಸಿ ಎಚ್ಚರಿಕೆ:

ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ಗೆ ಕೈ ಕೊಡುವ ಸೂಚನೆ ನೀಡಿದ ಬೆನ್ನಲ್ಲೇ ಐಸಿಸಿ ಕೂಡ ಎಚ್ಚರಿಕೆಯ ಸಂದೇಶ ರವಾನಿಸಿದೆ. ಅದು ಕೂಡ ಪಾಕಿಸ್ತಾನ್ ತಂಡವನ್ನು ಬ್ಯಾನ್ ಮಾಡುವ ಸೂಚನೆಯೊಂದಿಗೆ ಎಂಬುದು ವಿಶೇಷ.

ಅಂದರೆ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಗುಳಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಕೈ ಬಿಡುವುದಾಗಿ ಐಸಿಸಿ ಎಚ್ಚರಿಸಿದೆ.

ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ತಂಡಗಳೊಂದಿಗೆ ಯಾವುದೇ ದ್ವಿಪಕ್ಷೀಯ ಸರಣಿ ಆಡಲು ಕೂಡ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.

ಇದರ ಜೊತೆಗೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಆಡಲು ವಿದೇಶಿ ಆಟಗಾರರಿಗೆ ಎನ್​ಒಸಿ ನೀಡುವುದಿಲ್ಲ ಎಂಬುದನ್ನು ಸಹ ಸ್ಪಷ್ಟಪಡಿಸಿದೆ.

ಇಷ್ಟೇ ಅಲ್ಲದೆ ಏಷ್ಯಾಕಪ್ ಟೂರ್ನಿಯಿಂದಲೂ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ರವಾನಿಸಲಾಗಿದೆ. ಅಂದರೆ ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಗುಳಿದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನ ಮಾನ್ಯತೆ ರದ್ದಾಗಲಿದೆ.

ಇದನ್ನೂ ಓದಿ: ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ

ಇತ್ತ ಟಿ20 ವಿಶ್ವಕಪ್​ನಿಂದ ಹೊರಗುಳಿಯುವ ಬೆದರಿಕೆಯೊಡ್ಡಿರುವ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಐಸಿಸಿ ಕೌಂಟರ್ ಅಟ್ಯಾಕ್ ನೀಡಿದ್ದು, ಈ ಮೂಲಕ ಪಿಸಿಬಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅದರಲ್ಲೂ ಅಂತಾರಾಷ್ಟ್ರೀಯ ಕ್ರಿಕೆಟ್​ನ ಮಾನ್ಯತೆಯ ರದ್ದತಿಯ ಸೂಚನೆ ನೀಡಿರುವ ಕಾರಣ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಗುಳಿಯುವುದು ಅನುಮಾನ ಎಂದೇ ಹೇಳಬಹುದು.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!