AUS vs SL, ICC World Cup 2023: ವಿಶ್ವಕಪ್​ನಲ್ಲಿಂದು ಸೋತವರ ಕಾಳಗ: ಮೊದಲ ಗೆಲುವಿಗೆ ಆಸ್ಟ್ರೇಲಿಯಾ-ಶ್ರೀಲಂಕಾ ಸೆಣೆಸಾಟ

Australia vs Sri Lanka, ICC World Cup 2023: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ಸೋತವರ ಕಾಳಗ ಎನ್ನಬಹುದು. ಯಾಕೆಂದರೆ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಇದುವರೆಗೆ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಉಭಯ ತಂಡಗಳು ಮೊದಲ ಗೆಲುವಿಗಾಗಿ ಹಾತೊರೆಯುತ್ತಿದೆ.

AUS vs SL, ICC World Cup 2023: ವಿಶ್ವಕಪ್​ನಲ್ಲಿಂದು ಸೋತವರ ಕಾಳಗ: ಮೊದಲ ಗೆಲುವಿಗೆ ಆಸ್ಟ್ರೇಲಿಯಾ-ಶ್ರೀಲಂಕಾ ಸೆಣೆಸಾಟ
AUS vs SL World Cup 2023
Follow us
Vinay Bhat
|

Updated on:Oct 16, 2023 | 7:17 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ನಡೆಯಲಿರುವ 14ನೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಮತ್ತು ಕುಸಲ್ ಮೆಂಡೀಸ್ ನೇತೃತ್ವದ ಶ್ರೀಲಂಕಾ (Australia vs Sri Lanka) ತಂಡಗಳು ಮುಖಾಮುಖಿ ಆಗಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಇದು ಸೋತವರ ಕಾಳಗ ಎನ್ನಬಹುದು. ಯಾಕೆಂದರೆ ಉಭಯ ತಂಡಗಳು ಇದುವರೆಗೆ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಆಸೀಸ್-ಲಂಕಾ ತಂಡ ಮೊದಲ ಗೆಲುವಿಗಾಗಿ ಹಾತೊರೆಯುತ್ತಿದೆ.

ಲಂಕಾಗೆ ಶಾಕ್:

ಸತತ ಸೋಲುಗಳಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ಅಕ್ಟೋಬರ್ 10 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಶ್ರೀಲಂಕಾದ ನಾಯಕ ದಸುನ್ ಶನಕ ಇದೀಗ ವಿಶ್ವಕಪ್​ನಿಂದಲೇ ಹೊರಬಿದ್ದಿದ್ದಾರೆ. ಇಂಜುರಿಗೊಂಡಿರುವ ಶನಕ ಬದಲಿಗೆ ಬೌಲಿಂಗ್ ಆಲ್‌ರೌಂಡರ್ ಚಾಮಿಕಾ ಕರುಣಾರತ್ನ ಅವರನ್ನು ತಂಡಕ್ಕೆ ಮರು ಆಯ್ಕೆ ಮಾಡಲಾಗಿದೆ. ನಾಯಕನೇ ತಂಡದಿಂದ ಹೊರಬಿದ್ದಿರುವುದು ದೊಡ್ಡ ಹಿನ್ನಡೆಯಾಗಿದೆ. ಕುಸಲ್ ಮೆಂಡೀಸ್ ನಾಯಕತ್ವದಲ್ಲಿ ಲಂಕಾ ಹೇಗೆ ಪ್ರದರ್ಶನ ನೀಡುತ್ತೆ ಎಂಬುದು ನೋಡಬೇಕಿದೆ.

ಕೆಎಲ್ ರಾಹುಲ್​ಗೆ ಒಲಿದ ಬೆಸ್ಟ್ ಫೀಲ್ಡರ್​ ಪದಕ: ಇಲ್ಲಿದೆ ವಿಡಿಯೋ

ಇದನ್ನೂ ಓದಿ
Image
ಬಾಂಗ್ಲಾ ವಿರುದ್ಧ ಕಣಕ್ಕಿಳಿಯಲು ಪುಣೆಗೆ ಹಾರಿದ ಟೀಂ ಇಂಡಿಯಾ
Image
ಬೆಂಗಳೂರಿನಲ್ಲಿ ಪಾಕ್ ತಂಡ; 29 ನೇ ವಸಂತಕ್ಕೆ ಕಾಲಿಟ್ಟ ಬಾಬರ್ ಆಝಂ
Image
ಅಫ್ಘಾನ್ ವಿರುದ್ಧ ಆಂಗ್ಲರಿಗೆ ಅವಮಾನಕರ ಸೋಲು; ಮೀಮ್‌ಗಳ ಸುರಿಮಳೆ!
Image
ENG vs AFG: ವಿಶ್ವ ಚಾಂಪಿಯನ್ನರಿಗೆ ಸೋಲುಣಿಸಿದ ಅಫ್ಘಾನಿಸ್ತಾನ್

ಮಂಕಾದ ಆಸೀಸ್:

ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ್ದ ಆಸ್ಟ್ರೇಲಿಯಾ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಕಂಡಿತು. ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದರೂ ಲಕ್ ಸಿಗುತ್ತಿಲ್ಲ. ಮಿಚೆಲ್ ಮಾರ್ಶ್ ಹಾಗೂ ವಾರ್ನರ್ ಉತ್ತಮ ಆರಂಭ ಒದಗಿಸಬೇಕಿದೆ. ಸ್ಟೀವ್ ಸ್ಮಿತ್, ಲಾಬುಶೇನ್ ಹಾಗೂ ಮ್ಯಾಕ್ಸ್​ವೆಲ್ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಬೇಕು. ಅಲೆಕ್ಸ್ ಕ್ಯಾರಿ ಕೂಡ ನೆರವಾಗಬೇಕು. ಸ್ಟೋಯಿನಿಸ್ ಕಮ್​ಬ್ಯಾಕ್ ಮಾಡಿದ್ದು ಇನ್ನಷ್ಟೆ ಮಿಂಚಬೇಕಿದೆ. ಬೌಲಿಂಗ್​ನಲ್ಲಿ ಸ್ಟಾರ್ಕ್, ಕಮ್ಮಿನ್ಸ್, ಹ್ಯಾಜಲ್‌ವುಡ್, ಝಂಪಾ ಕೂಡ ಮಾರಕವಾಗಬೇಕಿದೆ.

ಏಕಾನ ಕ್ರಿಕೆಟ್ ಸ್ಟೇಡಿಯಂ ಬೌಲರ್‌ಗಳಿಗೆ, ವಿಶೇಷವಾಗಿ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ನಿಧಾನಗತಿ ಪಿಚ್ ಆಗಿರುವುದರಿಂದ ಬ್ಯಾಟರ್‌ಗಳು ಪರದಾಡುವುದು ಖಚಿತ. ಪಂದ್ಯವು ಮುಂದುವರೆದಂತೆ, ವೇಗಿಗಳಿಗೆ ಪ್ರಯೋಜನವನ್ನು ಆಗುತ್ತದೆ. ಮೈದಾನದ ಗಾತ್ರವು ಚಿಕ್ಕದಾಗಿರುವುದರಿಂದ ದೊಡ್ಡ ಸ್ಕೋರ್ ಆಗಬಹುದು. ಇಲ್ಲಿ ಒಟ್ಟು ಐದು ಏಕದಿನ ಪಂದ್ಯಗಳು ನಡೆದಿವೆ. ಈ ಪಂದ್ಯಗಳಲ್ಲಿ, ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 220 ಆಗಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ ಮೂರು ಬಾರಿ ಗೆದ್ದರೆ ಚೇಸಿಂಗ್ ಮಾಡಿದ ತಂಡ ಎರಡು ಸಲ ಜಯ ಸಾಧಿಸಿದೆ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

ಶ್ರೀಲಂಕಾ ತಂಡ: ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಕುಸಾಲ್ ಪೆರೇರಾ, ಧನಂಜಯ ಡಿ ಸಿಲ್ವಾ, ಚಾಮಿಕಾ ಕರುಣಾರತ್ನ, ಕಸುನ್ ರಜಿತ, ಲಹಿರು ಕುಮಾರ, ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ದಿಲ್ಶಾನ್ ಮದುಶಾಂಕ, ಮಥೀಶ ಪತಿರಣ, ಮಹೇಶ ತೀಕ್ಷಣ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:15 am, Mon, 16 October 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ