IND vs SL, ICC World Cup: ವಿಶ್ವಕಪ್​ನಲ್ಲಿಂದು ಭಾರತ-ಶ್ರೀಲಂಕಾ ಮುಖಾಮುಖಿ: ಏಳನೇ ಗೆಲುವಿನ ಮೇಲೆ ರೋಹಿತ್ ಕಣ್ಣು

India vs Sri Lanka, ICC ODI World Cup 2023; ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ರೋಹಿತ್ ಶರ್ಮಾ ನಾಯಕತ್ವದ ಭಾರತ ಶ್ರೀಲಂಕಾ ಮುಖಾಮುಖಿ ಆಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಮಹತ್ವದ ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾ ಏಳನೇ ಗೆಲುವಿನ ಮೇಲೆ ಕಣ್ಣಿಟ್ಟಿದ್ದು ಇಂದಿನ ಮ್ಯಾಚ್ ಗೆದ್ದರೆ ಅಧಿಕೃತವಾಗಿ ಸೆಮಿ ಫೈನಲ್​ಗೆ ಏರಲಿದೆ.

IND vs SL, ICC World Cup: ವಿಶ್ವಕಪ್​ನಲ್ಲಿಂದು ಭಾರತ-ಶ್ರೀಲಂಕಾ ಮುಖಾಮುಖಿ: ಏಳನೇ ಗೆಲುವಿನ ಮೇಲೆ ರೋಹಿತ್ ಕಣ್ಣು
IND vs SL
Follow us
Vinay Bhat
|

Updated on: Nov 02, 2023 | 7:11 AM

ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ 33ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಕುಸಲ್ ಮೆಂಡಿಸ್ ನೇತೃತ್ವದ ಶ್ರೀಲಂಕಾ (India vs Sri Lanka) ಮುಖಾಮುಖಿ ಆಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಆಡಿರುವ ಆರು ಪಂದ್ಯಗಳ ಪೈಕಿ ಎಲ್ಲ ಆರು ಮ್ಯಾಚ್​ಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಏಳನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇಂದಿನ ಮ್ಯಾಚ್ ಗೆದ್ದರೆ ಅಧಿಕೃತವಾಗಿ ಸೆಮಿ ಫೈನಲ್​ಗೆ ಏರಲಿದೆ. ಇತ್ತ ಶ್ರೀಲಂಕಾ ಬಹುತೇಕ ಟೂರ್ನಿಯಿಂದ ಹೊರಬಿದ್ದಾಗಿದೆ.

ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದುಕೊಳ್ಳುವಲ್ಲಿ ಎಡವುತ್ತಿದೆ. ನಾಯಕ ರೋಹಿತ್ ಶರ್ಮಾ ಹಾಟ್ ಫಾರ್ಮ್​ನಲ್ಲಿ ಇದ್ದಾರೆ ಬಿಟ್ಟರೆ ಶುಭ್​ಮನ್ ಗಿಲ್ ಕಡೆಯಿಂದ ನಿರೀಕ್ಷೆಗೆ ತಕ್ಕಂತ ಆಟ ಬರುತ್ತಿಲ್ಲ. ಗಿಲ್ ಜಾಗದಲ್ಲಿ ಇಶಾನ್ ಕಿಶನ್ ಆಡಿಸುವ ಸಾಧ್ಯತೆ ಕೂಡ ಇದೆ. ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸೊನ್ನೆ ಸುತ್ತಿದ್ದರು. ಇಂದು ದೊಡ್ಡ ಇನ್ನಿಂಗ್ಸ್​ನ ನಿರೀಕ್ಷೆ ಇದೆ. ಶ್ರೇಯಸ್ ಅಯ್ಯರ್ ಈ ಬಾರಿಯ ಟೂರ್ನಿಯಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ್ದಾರೆ. ಸೂರ್ಯಕುಮಾರ್ ಹಾಗೂ ಕೆಎಲ್ ರಾಹುಲ್ ಲಯದಲ್ಲಿದ್ದಾರೆ. ಭಾರತದ ಬೌಲಿಂಗ್​ನಲ್ಲಿ ಯಾವುದೇ ಬದಲಾವಣೆ ತರಲಾರರು. ಯಾಕೆಂದರೆ ಎಲ್ಲ ಬೌಲರ್​ಗಳು ಭರ್ಜರಿ ಫಾರ್ಮ್​ನಲ್ಲಿದ್ದಾರೆ.

ಭಾರತ- ಲಂಕಾ ಫೈಟ್; ವಾಂಖೆಡೆ ಮೈದಾನದಲ್ಲಿ ಮರುಕಳಿಸುತ್ತಾ ಇತಿಹಾಸ? ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಇದನ್ನೂ ಓದಿ
Image
2 ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..!
Image
ಸಿಡಿಲಬ್ಬರದ ಸೆಂಚುರಿ ಸಿಡಿಸಿ ದಾಖಲೆ ಮೇಲೆ ದಾಖಲೆ ಬರೆದ ಕ್ವಿಂಟನ್ ಡಿಕಾಕ್
Image
ಭಾರತ- ಲಂಕಾ ವಿಶ್ವಕಪ್ ಪಂದ್ಯ; ವಾಂಖೆಡೆ ಪಿಚ್ ಯಾರಿಗೆ ಸಹಕಾರಿ?
Image
ದಿಢೀರ್ ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ನ ಸ್ಟಾರ್ ಆಟಗಾರ..!

ಇತ್ತ ಶ್ರೀಲಂಕಾ ಆಡಿರುವ ಆರು ಪಂದ್ಯಗಳ ಪೈಕಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. 4 ಅಂಕದೊಂದಿಗೆ ಏಳನೇ ಸ್ಥಾನದಲ್ಲಿದೆ. ಇದರ ನಡುವೆ ಇಂಜುರಿ ಸಮಸ್ಯೆ ಕೂಡ ಕಾಡುತ್ತಿದೆ. ಏಷ್ಯಾಕಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಶ್ರೀಲಂಕಾ ವಿಶ್ವಕಪ್​ನಲ್ಲಿ ಸಂಪೂರ್ಣ ಮಂಕಾಗಿದೆ. ಜೊತೆಗೆ ದಸುನ್ ಶನಕಾ, ಹಸರಂಗ ಅಂತಹ ಸ್ಟಾರ್ ಆಟಗಾರರ ಅಲಭ್ಯತೆ ಎದ್ದು ಕಾಣುತ್ತಿದೆ. ಬೌಲಿಂಗ್​ನಲ್ಲಿ ಇನ್ನಷ್ಟು ಸುಧಾರಣೆ ಬೇಕಿದೆ.

ವಾಂಖೆಡೆ ಪಿಚ್ ಹೇಗಿದೆ?:

ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದ ಬ್ಯಾಟ್ಸ್‌ಮನ್‌ಗಳಿಗೆ ಸ್ವರ್ಗ ಎಂದು ಹೇಳಬಹುದು. ಬೌಂಡರಿಗಳು ತುಂಬಾ ಚಿಕ್ಕದಿರುವ ಕಾರಣ ರನ್ ಬರುತ್ತದೆ. ಆದಾಗ್ಯೂ, ಬೌಲಿಂಗ್ ದೃಷ್ಟಿಕೋನದಿಂದ, ಪಿಚ್ ಸ್ಪಿನ್ನರ್‌ಗಳಿಗೆ ಸ್ವಲ್ಪ ಸಹಾಯ ಮಾಡುತ್ತದೆ. ಇಬ್ಬನಿಯ ಅಂಶವನ್ನು ಗಮನದಲ್ಲಿಟ್ಟುಕೊಂಡು ಟಾಸ್ ಗೆದ್ದ ನಂತರ ನಾಯಕರು ಮೊದಲು ಫೀಲ್ಡಿಂಗ್ ಮಾಡುವ ಸಾಧ್ಯತೆಯಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಪುರುಷರ ODIಗಳಲ್ಲಿ ತಂಡವೊಂದು ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 245 ಆಗಿದೆ. ಇಲ್ಲಿ ಆಡಿದ 30 ODI ಪಂದ್ಯಗಳಲ್ಲಿ 16 ಬಾರಿ ಎರಡನೇ ಬ್ಯಾಟಿಂಗ್ ಮಾಡುವ ತಂಡಗಳು ಗೆದ್ದಿವೆ. ಆದ್ದರಿಂದ ಟಾಸ್ ದೊಡ್ಡ ವ್ಯತ್ಯಾಸ ಉಂಟುಮಾಡುವ ಸಾಧ್ಯತೆಯಿಲ್ಲ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಶ್ರೀಲಂಕಾ: ಪಾತುಮ್ ನಿಸಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್) ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತಿಕ್ಷಣ, ಕಸುನ್ ರಜಿತಾ, ದುಷ್ಮಂತ ಚಮೀರಾ, ದಿಲ್ಶನ್ ಮಧುಶಂಕ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್