PAK vs BAN, ICC World Cup: ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ಬಾಂಗ್ಲಾದೇಶ ಮುಖಾಮುಖಿ: ಮ್ಯಾಜಿಕ್ ಮಾಡುತ್ತಾ ಬಾಬರ್ ಪಡೆ

Pakistan vs Bangladesh, ICC Cricket World Cup 2023: ಪಾಕ್ ಸೆಮಿ ಫೈನಲ್ ಆಸೆ ಜೀವಂತವಾಗಿರಿಸಲು ದೊಡ್ಡ ಅಂತರದ ಗೆಲುವು ಬೇಕು. ಜೊತೆಗೆ ಇತರೆ ತಂಡಗಳ ಫಲಿತಾಂಶ ಕೂಡ ಮಹತ್ವದ ಪಾತ್ರವಹಿಸಲಿದೆ. ಕಳೆದ ಪಂದ್ಯದಲ್ಲಿ ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ವಿರುದ್ಧ ಸೋಲುಂಡಿರುವುದು ಬಾಬರ್ ನಾಯಕತ್ವಕ್ಕೂ ಕುತ್ತುಬಂದಿದೆ.

PAK vs BAN, ICC World Cup: ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ಬಾಂಗ್ಲಾದೇಶ ಮುಖಾಮುಖಿ: ಮ್ಯಾಜಿಕ್ ಮಾಡುತ್ತಾ ಬಾಬರ್ ಪಡೆ
BAN vs PAK
Follow us
Vinay Bhat
|

Updated on:Oct 31, 2023 | 7:31 AM

ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಇಂದು 31ನೇ ಪಂದ್ಯ ನಡೆಯಲಿದ್ದು, ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ (Pakistan vs Bangladesh) ಮುಖಾಮುಖಿ ಆಗಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಸೆಮಿ ಫೈನಲ್​ಗೇರಲು ಕೂದಲೆಳೆಯಷ್ಟು ಅವಕಾಶ ಹೊಂದಿರುವ ಬಾಬರ್ ಪಡೆಗೆ ಈ ಪಂದ್ಯ ಮಹತ್ವದ್ದಾಗಿದೆ. ಪಾಕಿಸ್ತಾನ ಇಂದು ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಅತ್ತ ಬಾಂಗ್ಲಾದೇಶ ಈಗಾಗಲೇ ಟೂರ್ನಿಯಿಂದ ಔಟ್ ಆಗಿದೆ.

ಪಾಕಿಸ್ತಾನ ತಂಡ ಆಡಿರುವ ಆರು ಪಂದ್ಯಗಳ ಪೈಕಿ ಆರಂಭದ ಎರಡು ಪಂದ್ಯಗಳನ್ನು ಗೆದ್ದಿದ್ದು ಬಿಟ್ಟರೆ ನಂತರದ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ. 4 ಅಂಕದೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಏಳನೇ ಸ್ಥಾನದಲ್ಲಿದೆ. ರನ್​ರೇಟ್ ಕೂಡ ಮೈನಸ್​ನಲ್ಲಿದೆ. ಹೀಗಾಗಿ ಪಾಕ್ ಸೆಮಿ ಫೈನಲ್ ಆಸೆ ಜೀವಂತವಾಗಿರಿಸಲು ದೊಡ್ಡ ಅಂತರದ ಗೆಲುವು ಬೇಕು. ಜೊತೆಗೆ ಇತರೆ ತಂಡಗಳ ಫಲಿತಾಂಶ ಕೂಡ ಮಹತ್ವದ ಪಾತ್ರವಹಿಸಲಿದೆ.

ಈ ವಿಚಾರದಲ್ಲಿ ಬುಮ್ರಾ ನನಗಿಂತಲೂ ಬೆಸ್ಟ್ ಎಂದ ಪಾಕ್ ಲೆಜೆಂಡ್ ವಾಸಿಂ ಅಕ್ರಮ್..!

ಇದನ್ನೂ ಓದಿ
Image
ಶ್ರೀಲಂಕಾ ವಿರುದ್ಧ ಜಯ: ಸೆಮಿಫೈನಲ್ ರೇಸ್​ನಲ್ಲಿ ಅಫ್ಘಾನಿಸ್ತಾನ್
Image
ಇಂಗ್ಲೆಂಡ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಅವಕಾಶ..!
Image
ಚೈನಾಮನ್ ಸ್ಪಿನ್ನರ್​ನ ಕಮಾಲ್ ಹಿಂದಿದೆ ಕನ್ನಡಿಗನ ಕರಾಮತ್ತು..!
Image
AFG vs SL: ಶ್ರೀಲಂಕಾಗೆ ಸೋಲುಣಿಸಿದ ಅಫ್ಘಾನಿಸ್ತಾನ್

ಕಳೆದ ಪಂದ್ಯದಲ್ಲಿ ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ವಿರುದ್ಧ ಸೋಲುಂಡಿರುವುದು ಬಾಬರ್ ನಾಯಕತ್ವಕ್ಕೂ ಕುತ್ತುಬಂದಿದೆ. ಪಾಕ್ ಆಟಗಾರರು ಸಾಕಷ್ಟು ಟೇಕೆಗಳಿಗೆ ಒಳಗಾಗಿದ್ದಾರೆ. ಹೀಗಾಗಿ ಇಂದು ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕು. ನಾಯಕ ಫಾರ್ಮ್​ಗೆ ಬಂದರೂ ತಂಡಕ್ಕೆ ಯಾವುದೇ ರೀತಿಯ ಪ್ರಯೋಜನ ಆಗುತ್ತಿಲ್ಲ. ಓಪನರ್​ಗಳಂತು ಇಡೀ ಟೂರ್ನಿಯಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಅಂತಿಮ ಹಂತದಲ್ಲಿ ಬ್ಯಾಟರ್​ಗಳು ಅಲ್ಪ ಮಟ್ಟದ ಕೊಡುಗೆ ನೀಡುತ್ತಿದ್ದಾರೆ. ಆದರೆ, ಬೌಲರ್​ಗಳ ಪೈಕಿ ಶಾಹಿನ್ ಅಫ್ರಿದಿ ಬಿಟ್ಟರೆ ಮತ್ಯಾರು ಮಾರಕವಾಗುತ್ತಿಲ್ಲ.

ಇತ್ತ ಬಾಂಗ್ಲಾದೇಶ ತಂಡದಲ್ಲಿ ಸಂಘಟಿತ ಪ್ರದರ್ಶನ ಕಂಡುಬರುತ್ತಿಲ್ಲ. ಕಳೆದ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ 142 ರನ್​ಗಳಿಗೆ ಆಲೌಟ್ ಆಗಿತ್ತು. ನಾಯಕ ಶಕಿಬ್ ಹಾಗೂ ಅನುಭವಿ ಮುಶ್ಫಿಕರ್ ರಹೀಮ್ ಕಡೆಯಿಂದ ಕೂಡ ನಿರೀಕ್ಷೆಗೆ ತಕ್ಕಂತ ಆಟ ಬರುತ್ತಿಲ್ಲ. ಮೊಹಮ್ಮದುಲ್ಲ ಕೊನೆಯ ಹಂತದಲ್ಲಿ ರನ್ ಕಲೆಹಾಕುತ್ತಿದ್ದಾರೆ. ಉಳಿದ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದ್ದಾರೆ. ಬೌಲಿಂಗ್​ನಲ್ಲೂ ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್, ಮೆಹ್ದಿ ಹಸನ್ ಮಿಂಚುತ್ತಿಲ್ಲ.

ಈಡನ್ ಗಾರ್ಡನ್ಸ್ ಪಿಚ್ ರಿಪೋರ್ಟ್:

ಈಡನ್ ಗಾರ್ಡನ್ಸ್ ದೊಡ್ಡ ಸ್ಕೋರ್ ಮಾಡುವ ಸ್ಥಳವೆಂದು ಪರಿಗಣಿಸದಿದ್ದರೂ, ಇಲ್ಲಿನ ಮೇಲ್ಮೈ ಬ್ಯಾಟಿಂಗ್‌ಗೆ ಸಹಕಾತಿ ಆಗಿದೆ. ಮೈದಾನವು ಬ್ಯಾಟ್ ಮತ್ತು ಬಾಲ್ ಎರಡಕ್ಕೂ ನೆರವಾಗುತ್ತದೆ ಎನ್ನಬಹುದು. ಏಕೆಂದರೆ ಸ್ಪಿನ್ನರ್‌ಗಳು ಈ ಪಿಚ್​ನಲ್ಲಿ ಯಶಸ್ಸು ಸಾಧಿಸುತ್ತಾರೆ. ವೇಗಿಗಳು ಹೊಸ ಚೆಂಡಿನ ಮೂಲಕ ಪ್ರಭಾವ ಬೀರಬಹುದು. ಇಬ್ಬನಿಯು ಟಾರ್ಗೆಟ್ ಬೆನ್ನಟ್ಟುವ ತಂಡಕ್ಕೆ ಸಹಾಯ ಮಾಡಲಿದೆ. ಇಲ್ಲಿ ಒಟ್ಟು 36 ಏಕದಿನ ಪಂದ್ಯಗಳು ನಡೆದಿದೆ. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 21 ಬಾರಿ ಗೆದ್ದರೆ, ಮೊದಲು ಬೌಲಿಂಗ್‌ನಲ್ಲಿ ಗೆದ್ದ ಪಂದ್ಯಗಳು 14. ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 241 ಆಗಿದೆ.

ಪಾಕಿಸ್ತಾನ ತಂಡ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ.

ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದೊಯ್, ಮಹೇದಿ ಹಸನ್, ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್, ತನ್ಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹಮ್ಮದುಲ್ಲಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 31 October 23

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್