ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಳಿಕ ಅಫ್ಘಾನಿಸ್ತಾನ, ಶನಿವಾರ ಪಾಕಿಸ್ತಾನ ವಿರುದ್ಧ ಜಯ ಸಾಧಿಸುವ ಮೂಲಕ ಅಮೋಘ ಫಾರ್ಮ್ನಲ್ಲಿದೆ. ಟೀಮ್ ಇಂಡಿಯಾ ಆಡಿದ ಮೂರು ಪಂದ್ಯಗಳ ಪೈಕಿ ಮೂರರಲ್ಲೂ ಗೆಲುವು ಸಾಧಿಸಿ ಒಟ್ಟು ಆರು ಅಂಕ ಸಂಪಾದಿಸಿ ವಿಶ್ವಕಪ್ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರಿದೆ. ಸದ್ಯ ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಹಾಗಾದರೆ, ಭಾರತದ ಮುಂದಿನ ಟಾರ್ಗೆಟ್ ಯಾರು?.
ವಿಶ್ವಕಪ್ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?
ವಿಶ್ವಕಪ್ನಲ್ಲಿ ಭಾರತದ ಮುಂದಿನ ಪಂದ್ಯ ಬಾಂಗ್ಲಾದೇಶ ವಿರುದ್ಧ ನಡೆಯಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 19 ರಂದು (ಗುರುವಾರ) ನಡೆಯಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೀಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಾಕಿಸ್ತಾನ ನೀಡಿದ ಪ್ರದರ್ಶನಕ್ಕೆ ಬೇಸರ ವ್ಯಕ್ತಪಡಿಸಿದ ರೋಹಿತ್ ಶರ್ಮಾ: ಏನಂದ್ರು ನೋಡಿ
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದೊಯ್, ಮಹೇದಿ ಹಸನ್, ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್, ತನ್ಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹಮ್ಮದುಲ್ಲಾ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:24 am, Sun, 15 October 23