ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಳಿಕ ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಭಾನುವಾರ ನ್ಯೂಝಿಲೆಂಡ್ ವಿರುದ್ಧ ಜಯ ಸಾಧಿಸುವ ಮೂಲಕ ಅಮೋಘ ಫಾರ್ಮ್ನಲ್ಲಿದೆ. ಟೀಮ್ ಇಂಡಿಯಾ ಇದೀಗ ಆಡಿದ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆಲುವು ಸಾಧಿಸಿ ಒಟ್ಟು ಹತ್ತು ಅಂಕ ಸಂಪಾದಿಸಿ ವಿಶ್ವಕಪ್ ಪಾಯಿಂಟ್ ಟೇಬಲ್ನಲ್ಲಿ ಮೊದಲ ಸ್ಥಾನದಲ್ಲಿದೆ. ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಒಂದು ವಾರ ಕಾಲವಕಾಶವಿದೆ. ಹಾಗಾದರೆ, ಭಾರತದ ಮುಂದಿನ ಯಾವಾಗ, ಯಾರ ವಿರುದ್ಧ?.
ವಿಶ್ವಕಪ್ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?
ವಿಶ್ವಕಪ್ನಲ್ಲಿ ಭಾರತ ಮುಂದಿನ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 29 ರಂದು (ಭಾನುವಾರ) ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇರಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
World Cup 2023 Points Table: ಕಿವೀಸ್ ಮಣಿಸಿ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಭಾರತ..!
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ