ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಳಿಕ ಅಫ್ಘಾನಿಸ್ತಾನ, ಪಾಕಿಸ್ತಾನ, ಗುರುವಾರ ಬಾಂಗ್ಲಾದೇಶ ವಿರುದ್ಧ ಜಯ ಸಾಧಿಸುವ ಮೂಲಕ ಅಮೋಘ ಫಾರ್ಮ್ನಲ್ಲಿದೆ. ಟೀಮ್ ಇಂಡಿಯಾ ಆಡಿದ ನಾಲ್ಕು ಪಂದ್ಯಗಳ ಪೈಕಿ ನಾಲ್ಕರಲ್ಲೂ ಗೆಲುವು ಸಾಧಿಸಿ ಒಟ್ಟು ಎಂಟು ಅಂಕ ಸಂಪಾದಿಸಿ ವಿಶ್ವಕಪ್ ಪಾಯಿಂಟ್ ಟೇಬಲ್ನಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಸದ್ಯ ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಹಾಗಾದರೆ, ಭಾರತದ ಮುಂದಿನ ಟಾರ್ಗೆಟ್ ಯಾರು?.
ವಿಶ್ವಕಪ್ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?
ವಿಶ್ವಕಪ್ನಲ್ಲಿ ಭಾರತ ಮುಂದಿನ ಪಂದ್ಯವನ್ನು ನ್ಯೂಝಿಲೆಂಡ್ ವಿರುದ್ಧ ನಡೆಯಲಿದೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 22 ರಂದು (ಭಾನುವಾರ) ನಡೆಯಲಿದೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೀಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
IND vs BAN: ಏಕದಿನ ವಿಶ್ವಕಪ್ನಲ್ಲಿ ಲಾರಾ-ಡಿವಿಲಿಯರ್ಸ್ ದಾಖಲೆ ಮುರಿದ ರೋಹಿತ್- ಕೊಹ್ಲಿ..!
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ನ್ಯೂಝಿಲೆಂಡ್ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್ಸ್ಟಾರ್ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ