
ಐಸಿಸಿ, ಮುಂದಿನ ವರ್ಷ ನಡೆಯಲಿರುವ 2027 ರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 14 ತಂಡಗಳು 12 ಸ್ಥಳಗಳಲ್ಲಿ 57 ಪಂದ್ಯಗಳನ್ನು ಆಡಲಿವೆ. ದಕ್ಷಿಣ ಆಫ್ರಿಕಾ ಹೆಚ್ಚಿನ ಪಂದ್ಯಗಳನ್ನು ಆಯೋಜಿಸಿದರೆ, ಜಿಂಬಾಬ್ವೆ ಮತ್ತು ನಮೀಬಿಯಾ ಸಹ ಪಂದ್ಯಗಳನ್ನು ಆಯೋಜಿಸಲಿವೆ. ಐಸಿಸಿ ಬಿಡುಗಡೆ ಮಾಡಿರುವ ಈ ವೇಳಾಪಟ್ಟಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪುನಲ್ಲಿ ಸ್ಥಾನ ಪಡೆದಿವೆ.
ಅಕ್ಟೋಬರ್ 2 ರಿಂದ ಆರಂಭವಾಗಲಿರುವ ವಿಶ್ವಕಪ್ ನವೆಂಬರ್ 21 ರವರೆಗೆ ನಡೆಯಲಿದೆ. ಭಾರತ ತಂಡವು ಅಕ್ಟೋಬರ್ 7 ರಂದು ಕೇಪ್ ಟೌನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ. ನಂತರ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 10 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಅಕ್ಟೋಬರ್ 14 ರಂದು ಭಾರತ ತನ್ನ ಮೂರನೇ ಪಂದ್ಯವನ್ನು ಅಫ್ಘಾನಿಸ್ತಾನದ ವಿರುದ್ಧ ಆಡಲಿದೆ. ನಾಲ್ಕನೇ ಪಂದ್ಯದಲ್ಲಿ ಕ್ವಾಲಿಫೈಯರ್ ಎ ತಂಡವನ್ನು ಅಕ್ಟೋಬರ್ 17 ರಂದು ಎದುರಿಸಲಿರುವ ಟೀಂ ಇಂಡಿಯಾ, ಐದನೇ ಹಾಗೂ ತನ್ನ ಕೊನೆಯ ಗುಂಪು ಪಂದ್ಯವನ್ನು ಜಿಂಬಾಬ್ವೆ ವಿರುದ್ಧ ಅಕ್ಟೋಬರ್ 24 ರಂದು ಆಡಲಿದೆ.
𝗧𝗵𝗲 𝘄𝗮𝗶𝘁 𝗶𝘀 𝗼𝘃𝗲𝗿! ⌛
Here’s a look at #TeamIndia‘s group stage fixtures for the ICC Men’s Cricket World Cup 2️⃣0️⃣2️⃣7️⃣ 🇮🇳 🗓️#CWC27 pic.twitter.com/0iUNMRfymW
— BCCI (@BCCI) October 1, 2026
20 ವರ್ಷಗಳ ನಂತರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಕೊನೆಯ ಏಕದಿನ ವಿಶ್ವಕಪ್ 2003 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. 2007 ರ ಟಿ20 ವಿಶ್ವಕಪ್ ಕೂಡ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. ಭಾರತ 2003 ರ ಏಕದಿನ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಮತ್ತು 2007 ರ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.