AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ತಂಡಕ್ಕೆ ಡಬಲ್ ಶಾಕ್ ನೀಡಿದ ಐಸಿಸಿ..!

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ನಿಧಾನಗತಿಯ ಓವರ್‌ರೇಟ್‌ಗಾಗಿ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಐಸಿಸಿ ದೊಡ್ಡ ದಂಡ ವಿಧಿಸಿದೆ. ಇದರ ಪರಿಣಾಮವಾಗಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 11 ಮಹತ್ವದ ಅಂಕಗಳನ್ನು ಕಡಿತಗೊಳಿಸಲಾಗಿದ್ದು, ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವಾಗಿ ಕಟ್ಟಬೇಕಾಗಿದೆ. ಇದರಿಂದ ಪಾಕ್ ತಂಡ WTC ಪಾಯಿಂಟ್‌ಪಟ್ಟಿಯಲ್ಲಿ ಹಾಗೂ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಕೆಳಕ್ಕೆ ಕುಸಿದಿದೆ. ಮುಂದಿನ ಸರಣಿಗಳು ನಿರ್ಣಾಯಕವಾಗಿವೆ.

ಪಾಕಿಸ್ತಾನ ತಂಡಕ್ಕೆ ಡಬಲ್ ಶಾಕ್ ನೀಡಿದ ಐಸಿಸಿ..!
ಪಾಕಿಸ್ತಾನ ತಂಡ
ಪೃಥ್ವಿಶಂಕರ
|

Updated on:Sep 14, 2026 | 4:51 PM

Share

ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಒಂದರ ಮೇಲೆ ಒಂದರಂತ ಆಘಾತಗಳು ಎದುರಾಗುತ್ತಿವೆ. ಇಂಗ್ಲೆಂಡ್‌ ಪ್ರವಾಸದಲ್ಲಿ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನ ತಂಡಕ್ಕೆ ಇದೀಗ ಐಸಿಸಿ ಕೂಡ ದೊಡ್ಡ ಶಾಕ್ ನೀಡಿದೆ. ಇದರ ಫಲವಾಗಿ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್​​ನಿಂದ ಹೊರಬಿದ್ದದ್ದ ಪಾಕಿಸ್ತಾನ ತಂಡದಲ್ಲಿ ಅಳಿದುಳಿದಿದ್ದ ಅಂಕಗಳನ್ನು ಸಹ ಐಸಿಸಿ ದಂಡವಾಗಿ ಕಿತ್ತುಕೊಂಡಿದೆ. ಮಾತ್ರವಲ್ಲದೆ ಪಂದ್ಯದ ಶುಲ್ಕವನ್ನು ಸಹ ದಂಡವಾಗಿ ಕಟ್ಟಿಸಿಕೊಂಡಿದೆ.

ಪಾಕ್ ತಂಡಕ್ಕೆ ಐಸಿಸಿ ಬರೆ

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಾಕಿಸ್ತಾನ ತಂಡಕ್ಕೆ ಎರಡೆರಡು ಶಿಕ್ಷೆಗಳನ್ನು ವಿಧಿಸಲಾಗಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ನಿಗದಿಗಿಂತ 11 ಓವರ್‌ಗಳನ್ನು ಕಡಿಮೆ ಬೌಲಿಂಗ್ ಮಾಡಿದೆ. ಇದರ ಪರಿಣಾಮವಾಗಿ ಇಡೀ ತಂಡದ ಪಂದ್ಯ ಶುಲ್ಕದಲ್ಲಿ ಶೇ. 50 ರಷ್ಟು ಮೊತ್ತವನ್ನು ದಂಡದ ರೂಪದಲ್ಲಿ ಕಡಿತಗೊಳಿಸಲಾಗಿದೆ.

ಇದರ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 11 ಅಂಕಗಳನ್ನು ಕಡಿತಗೊಳಿಸಲಾಗಿದೆ. ಇದರ ಪರಿಣಾಮವಾಗಿ ಪಾಕಿಸ್ತಾನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಕೆಳಕ್ಕೆ ಕುಸಿದಿದ್ದು, ಪ್ರಸ್ತುತ 4.63 ಪಾಯಿಂಟ್ ಶೇಕಡಾವಾರು ಪ್ರಮಾಣದೊಂದಿಗೆ 9 ನೇ ಸ್ಥಾನದಲ್ಲಿದೆ. ಕೊನೆಯ ಸ್ಥಾನ ಪಡೆಯುವುದನ್ನು ತಪ್ಪಿಸಲು, ಪಾಕಿಸ್ತಾನ ನವೆಂಬರ್‌ನಲ್ಲಿ ಶ್ರೀಲಂಕಾ ವಿರುದ್ಧದ ತವರು ಟೆಸ್ಟ್ ಸರಣಿಯನ್ನು ಗೆಲ್ಲಲೇಬೇಕಿದೆ.

ಒಂದಂಕಿ ದಾಟಲಿಲ್ಲ; ಇಂಗ್ಲೆಂಡ್‌ ನೆಲದಲ್ಲಿ ಹೀನಾಯ ದಾಖಲೆ ಬರೆದ ಪಾಕಿಸ್ತಾನ

ಐಸಿಸಿ ರ್ಯಾಂಕಿಂಗ್​ನಲ್ಲಿ ಕುಸಿತ

ಪಾಕಿಸ್ತಾನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಮಾತ್ರವಲ್ಲದೆ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿಯೂ ಕುಸಿತ ಕಂಡಿದೆ. ತಂಡವು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಕೇವಲ 71 ಅಂಕಗಳೊಂದಿಗೆ 9 ನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯಾ 126 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ, ನ್ಯೂಜಿಲೆಂಡ್ ಮೂರನೇ ಸ್ಥಾನ ಮತ್ತು ಭಾರತ ನಾಲ್ಕನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಐದನೇ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:47 pm, Mon, 14 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More