ಬಿಸಿಸಿಐ ಮುಂದೆ ಮತ್ತೆ ಮಂಡಿಯೂರಿದ ಪಿಸಿಬಿ; ಟ್ರೋಫಿ ಈ ಸ್ಥಳಗಳಿಗೆ ಮಾತ್ರ ಹೋಗಲಿ ಎಂದ ಐಸಿಸಿ

Champions Trophy 2025: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚಾಂಪಿಯನ್ಸ್ ಟ್ರೋಫಿ ಪ್ರದರ್ಶಿಸಲು ಯೋಜಿಸಿದ್ದನ್ನು ಬಿಸಿಸಿಐ ವಿರೋಧಿಸಿತ್ತು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಆಕ್ಷೇಪಣೆಯನ್ನು ಪರಿಗಣಿಸಿದ ಐಸಿಸಿ, ಪಿಒಕೆಯಲ್ಲಿ ಪ್ರದರ್ಶನ ನಡೆಸದಂತೆ ಪಿಸಿಬಿಗೆ ಸೂಚಿಸಿತು. ಪರಿಣಾಮವಾಗಿ, ಪಿಸಿಬಿ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಗೆ ಪ್ರದರ್ಶನವನ್ನು ಸೀಮಿತಗೊಳಿಸಲು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಬಿಸಿಸಿಐ ಮುಂದೆ ಮತ್ತೆ ಮಂಡಿಯೂರಿದ ಪಿಸಿಬಿ; ಟ್ರೋಫಿ ಈ ಸ್ಥಳಗಳಿಗೆ ಮಾತ್ರ ಹೋಗಲಿ ಎಂದ ಐಸಿಸಿ
ಚಾಂಪಿಯನ್ಸ್ ಟ್ರೋಫಿ
Follow us
ಪೃಥ್ವಿಶಂಕರ
|

Updated on:Nov 16, 2024 | 4:24 PM

ಹೇಗಾದರೂ ಮಾಡಿ ಬಿಸಿಸಿಐ ಅನ್ನು ಒಂದು ವಿಚಾರದಲ್ಲಾದರೂ ಹಿಂದಡಿ ಇಡುವಂತೆ ಮಾಡುವ ಪಾಕಿಸ್ತಾನದ ಸತತ ಪ್ರಯತ್ನಗಳ್ಯಾವು ಕೈಗೂಡುತ್ತಿಲ್ಲ. ಪ್ರತಿ ದಿನ ಹೊಸ ಹೊಸ ಕ್ಯಾತೆ ತೆಗೆದು ಬಿಸಿಸಿಐ ವಿರುದ್ಧ ಹೇಳಿಕೆಗಳನ್ನು ನೀಡುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆ ಬಳಿಕ ಐಸಿಸಿಯ ಖಡಕ್ ಸೂಚನೆಗೆ ತನ್ನ ಬಾಯಿ ಮುಚ್ಚಿಕೊಳ್ಳುತ್ತಿದೆ. ಆದರೂ ತನ್ನ ಛಾಳಿ ಮುಂದುವರೆಸಿ, ವಿವಾದಿತ ಪ್ರದೇಶವಾದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚಾಂಪಿಯನ್ಸ್ ಟ್ರೋಫಿಯ ಪ್ರದರ್ಶನವನ್ನು ಏರ್ಪಡಿಸುವ ಮೂಲಕ ಭಾರತಕ್ಕೆ ತಿರುಗೇಟು ನೀಡಲು ಮುಂದಾಗಿದ್ದ ಪಾಕಿಸ್ತಾನದ ತೀರ್ಮಾನಕ್ಕೆ, ಐಸಿಸಿ ಕಡಿವಾಣ ಹಾಕಿತ್ತು. ಬಿಸಿಸಿಐನಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಐಸಿಸಿ, ಚಾಂಪಿಯನ್ಸ್ ಟ್ರೋಫಿಯನ್ನು ಪಿಒಕೆಗೆ ಕೊಂಡೊಯ್ಯದಂತೆ ಸೂಚಿಸಿತ್ತು. ಇದೀಗ ಐಸಿಸಿ ಸೂಚನೆ ಮೇರೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಚಾಂಪಿಯನ್ಸ್ ಟ್ರೋಫಿಯ ಪ್ರದರ್ಶನವನ್ನು ಪಿಒಕೆಯಲ್ಲಿ ನಡೆಸದಿರಲು ತೀರ್ಮಾನಿಸಿದೆ.

ಏಕಪಕ್ಷೀಯ ನಿರ್ಧಾರಕ್ಕೆ ಐಸಿಸಿ ಕಡಿವಾಣ

ಪಿಸಿಬಿ ಮೂಲವೊಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿರುವಂತೆ, ‘ಚಾಂಪಿಯನ್ಸ್ ಟ್ರೋಫಿಯ ಪ್ರದರ್ಶನವನ್ನು ಪಾಕಿಸ್ತಾನದ ಯಾವ್ಯಾವ ನಗರಗಳಲ್ಲಿ ನಡೆಸಬೇಕು ಎಂಬುದನ್ನು ಪಿಸಿಬಿ, ಐಸಿಸಿಯೊಂದಿಗೆ ಚರ್ಚೆ ನಡೆಸುತ್ತಿದೆ. ಅಂತಿಮವಾಗಿ ಐಸಿಸಿ ತೆಗೆದುಕೊಳ್ಳುವ ನಿರ್ಧಾರದಂತೆ ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯ ಪ್ರದರ್ಶನವನ್ನು ಆಯೋಜಿಸಲಿದೆ ಎಂದು ವರದಿಯಾಗಿದೆ.

ಆಕ್ಷೇಪಣೆ ಸಲ್ಲಿಸಿದ್ದ ಜಯ್ ಶಾ

ವಾಸ್ತವವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಚಾಂಪಿಯನ್ಸ್ ಟ್ರೋಫಿಯ ಪ್ರದರ್ಶನ ಎಲ್ಲೆಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಿ ಪೋಸ್ಟ್​ವೊಂದನ್ನು ಹಂಚಿಕೊಂಡಿತ್ತು. ಇದರಲ್ಲಿ ವಿವಾದಿತ ಪ್ರದೇಶವಾದ ಪಾಕ್ ಆಕ್ರಮಿತ ಕಾಶ್ಮೀರದ ಕೆಲವು ನಗರಗಳು ಸೇರಿದ್ದವು. ಇದನ್ನು ನೋಡಿದ್ದ ಬಿಸಿಸಿಐ ಕಾರ್ಯದರ್ಶಿ ಹಾಗೂ ಮುಂದಿನ ಐಸಿಸಿ ಅಧ್ಯಕ್ಷ ಜಯ್​ ಶಾ, ಪಿಸಿಬಿ ಪಿಒಕೆಯಲ್ಲಿ ಟ್ರೋಫಿಯ ಪ್ರದರ್ಶನವನ್ನು ಆಯೋಜಿಸುತ್ತಿರುವುದು ಸ್ವೀಕಾರಾರ್ಹವಲ್ಲ ಎಂದು ಐಸಿಸಿಗೆ ತಿಳಿಸಿದ್ದರು ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿಯಾಗಿತ್ತು.

ಐಸಿಸಿ ಸೂಚನೆಗೆ ಮಣಿದ ಪಾಕಿಸ್ತಾನ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಆಯೋಜಿಸುವ ಪಿಸಿಬಿ ಕಲ್ಪನೆಗೆ ಬಿಸಿಸಿಐ ಕಾರ್ಯದರ್ಶಿ ಶಾ ಆಕ್ಷೇಪ ವ್ಯಕ್ತಪಡಿಸಿದ್ದರು. ಪಾಕಿಸ್ತಾನದ ಯಾವುದೇ ನಗರದಲ್ಲಿ ಅಥವಾ ಪಿಒಕೆ ಹೊರಗಿನ ಕ್ರೀಡಾಂಗಣ ಅಥವಾ ಮಾಲ್‌ನಲ್ಲಿ ಈವೆಂಟ್ ಅನ್ನು ಆಯೋಜಿಸಲು ಬಿಸಿಸಿಐಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಪಿಒಕೆಯಲ್ಲಿ ಮಾತ್ರ ಚಾಂಪಿಯನ್ಸ್ ಟ್ರೋಫಿಯ ಪ್ರದರ್ಶನಕ್ಕೆ ನಮ್ಮ ವಿರೋಧವಿದೆ ಎಂಬುದನ್ನು ಜಯ್​ ಶಾ ಐಸಿಸಿಗೆ ತಿಳಿಸಿದ್ದರು. ಹೀಗಾಗಿ ಬಿಸಿಸಿಐ ಮನವಿಯನ್ನು ಪುರಸ್ಕರಿಸಿದ್ದ ಐಸಿಸಿ, ಪಾಕಿಸ್ತಾನಕ್ಕೆ ಟ್ರೋಫಿ ಪ್ರದರ್ಶನದ ವೇಳಾಪಟ್ಟಿಯನ್ನು ಬದಲಿಸುವಂತೆ ಸೂಚನೆ ನೀಡಿತ್ತು. ಐಸಿಸಿಯ ಸೂಚನೆಯಂತೆ ಇದೀಗ ಚಾಂಪಿಯನ್ಸ್ ಟ್ರೋಫಿಯ ಪ್ರದರ್ಶನವನ್ನು ಪಿಒಕೆಯಲ್ಲಿ ನಡೆಸದಿರಲು ಪಾಕಿಸ್ತಾನ ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Sat, 16 November 24

ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್
ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್
ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು
ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ