AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್ ಲೋಗೊ ಅನಾವರಣ

T20 World Cup 2024: 2022 ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ಇಂಗ್ಲೆಂಡ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ 9ನೇ ಆವೃತ್ತಿಯಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

T20 World Cup 2024: ಟಿ20 ವಿಶ್ವಕಪ್ ಲೋಗೊ ಅನಾವರಣ
T20 World Cup 2024
TV9 Web
| Edited By: |

Updated on:Dec 07, 2023 | 2:30 PM

Share

ಜೂನ್ 4, 2024 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ (T20 World Cup 2024) ಐಸಿಸಿ ಹೊಸ ಲೋಗೊವನ್ನು ಅನಾವರಣಗೊಳಿಸಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಆತಿಥ್ಯವಹಿಸಲಿರುವ ಪುರುಷರ ಟಿ20 ವಿಶ್ವಕಪ್​ ಹಾಗೂ ಬಾಂಗ್ಲಾದೇಶದಲ್ಲಿ ನಡೆಯಲಿರುವ ಮಹಿಳಾ ಟಿ20 ವರ್ಲ್ಡ್​ಕಪ್​ಗಾಗಿ ಒಂದೇ ವಿನ್ಯಾಸದ ಲೋಗೊವನ್ನು ಬಳಸಿರುವುದು ವಿಶೇಷ.

ಇನ್ನು ಈ ಲೋಗೊದಲ್ಲಿ ಬ್ಯಾಟ್, ಬಾಲ್ ಮತ್ತು ಎರ್ನಜಿಯನ್ನು ಸಂಕೇತಿಸುವ ಚಿಹ್ನೆಗಳನ್ನು ಬಳಸಲಾಗಿದ್ದು, ಈ ಮೂಲಕ ಉತ್ಸಾಹಭರಿತ ಟಿ20 ವಿಶ್ವಕಪ್​ ಅನ್ನು ಪ್ರತಿಬಿಂಬಿಸಲಾಗಿದೆ. ಈ ಲೋಗೊ ವಿನ್ಯಾಸದ ಅನವಾರಣದ ವಿಡಿಯೋವನ್ನು ಐಸಿಸಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಕ್ರಿಕೆಟ್​ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ಕಣದಲ್ಲಿ 20 ತಂಡಗಳು:

ಈ ಬಾರಿಯ ಪುರುಷರ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ನಾಲ್ಕು ಗುಂಪುಗಳನ್ನಾಗಿ ವಿಂಗಡಿಸಲಾಗುತ್ತದೆ.

ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ತಂಡಗಳು:

  1. ಭಾರತ
  2. ಅಫ್ಘಾನಿಸ್ತಾನ್
  3. ಆಸ್ಟ್ರೇಲಿಯಾ
  4. ಬಾಂಗ್ಲಾದೇಶ್
  5. ಕೆನಡಾ
  6. ಇಂಗ್ಲೆಂಡ್
  7. ಐರ್ಲೆಂಡ್
  8. ನಮೀಬಿಯಾ
  9. ನೇಪಾಳ
  10. ನೆದರ್ಲ್ಯಾಂಡ್ಸ್
  11. ನ್ಯೂಝಿಲೆಂಡ್
  12. ಒಮಾನ್
  13. ಪಾಕಿಸ್ತಾನ್
  14. ಪಪುವಾ ನ್ಯೂಗಿನಿಯಾ
  15. ಸ್ಕಾಟ್ಲೆಂಡ್
  16. ಸೌತ್ ಆಫ್ರಿಕಾ ಆಫ್ರಿಕಾ
  17. ಶ್ರೀಲಂಕಾ
  18. ಉಗಾಂಡ
  19. ಯುಎಸ್​ಎ
  20. ವೆಸ್ಟ್ ಇಂಡೀಸ್.

ಟಿ20 ವಿಶ್ವಕಪ್ ಯಾವಾಗ ಶುರು?

ಜೂನ್ 4, 2024 ರಿಂದ ಜೂನ್ 30 ರವರೆಗೆ ಟಿ20 ವಿಶ್ವಕಪ್​ ಜರುಗಲಿದೆ. 20 ತಂಡಗಳು ಕಣಕ್ಕಿಳಿಯಲಿರುವ ಈ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳನ್ನಾಡಲಾಗುತ್ತದೆ.

ಹೇಗಿರಲಿದೆ ಟಿ20 ವಿಶ್ವಕಪ್ ಟೂರ್ನಿ?

ಈ ಬಾರಿ 20 ತಂಡಗಳಿರುವ ಕಾರಣ 4 ಗುಂಪುಗಳನ್ನಾಗಿ ಮಾಡಲಾಗುತ್ತದೆ. ಇಲ್ಲಿ ಒಂದು ಗುಂಪಿನಲ್ಲಿ 5 ತಂಡಗಳಿರಲಿವೆ. ಪ್ರತಿ ಗ್ರೂಪ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ಎಂಟು ತಂಡಗಳು ಸೂಪರ್-8 ಪಂದ್ಯಗಳನ್ನಾಡಲಿದೆ. ಇನ್ನು ಸೂಪರ್- 8 ರಲ್ಲಿ ಕಣಕ್ಕಿಳಿಯುವ 8 ತಂಡಗಳಲ್ಲಿ ಅಗ್ರ-ನಾಲ್ಕರರಲ್ಲಿ ಕಾಣಿಸಿಕೊಳ್ಳುವ ಟೀಮ್​ಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ. ಇದಾದ ಬಳಿಕ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿದೆ.

ಇದನ್ನೂ ಓದಿ: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಹಾಲಿ ಚಾಂಪಿಯನ್ ಯಾರು?

2022 ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ಇಂಗ್ಲೆಂಡ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ 9ನೇ ಆವೃತ್ತಿಯಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

Published On - 2:29 pm, Thu, 7 December 23

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?