ಜಯ್ ಶಾ ನೇತೃತ್ವದಲ್ಲಿ ICC ಸಭೆ: ವರಸೆ ಬದಲಿಸಿದ ಪಾಕಿಸ್ತಾನ್

Champions Trophy 2025: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಕೈಯಲ್ಲಿದೆ. ಆದರೆ ಪಾಕ್​​ನಲ್ಲಿ ಚಾಂಪಿಯನ್ಸ್​ ಟ್ರೋಫಿ ಪಂದ್ಯಗಳನ್ನಾಡಲು ಬಿಸಿಸಿಐ ನಿರಾಕರಿಸಿದೆ. ಅಲ್ಲದೆ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಬಿಸಿಸಿಐ ಬೇಡಿಕೆ ಮುಂದಿಟ್ಟಿದೆ.

ಜಯ್ ಶಾ ನೇತೃತ್ವದಲ್ಲಿ ICC ಸಭೆ: ವರಸೆ ಬದಲಿಸಿದ ಪಾಕಿಸ್ತಾನ್
Jay Shah - PCB
Follow us
ಝಾಹಿರ್ ಯೂಸುಫ್
|

Updated on:Dec 04, 2024 | 3:26 PM

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಯ್ ಶಾ ನೇತೃತ್ವದಲ್ಲಿ ಡಿಸೆಂಬರ್ 5 ರಂದು ಮೊದಲ ಸಭೆ ನಡೆಯಲಿದೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತನ್ನ ಹೊಸ ಬೇಡಿಕೆಗಳನ್ನು ಮುಂದಿಡುವ ಸಾಧ್ಯತೆಯಿದೆ. ಏಕೆಂದರೆ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದಿಯಲ್ಲಿ ಆಯೋಜಿಸಬೇಕಿದ್ದರೆ ಐಸಿಸಿ ತನ್ನ ಮೂರು ಬೇಡಿಕೆಗಳನ್ನು ಈಡೇರಿಸಬೇಕೆಂದು ಪಿಸಿಬಿ ಆಗ್ರಹಿಸಿದೆ.

2025 ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಬರದಿದ್ದರೆ, ಮುಂಬರುವ ದಿನಗಳಲ್ಲಿ ಪಾಕಿಸ್ತಾನ್ ಕೂಡ ಭಾರತದಲ್ಲಿ ಪಂದ್ಯವಾಡುವುದಿಲ್ಲ ಎಂದು ಪಿಸಿಬಿ ತಿಳಿಸಿದೆ. ಇದಾಗ್ಯೂ ಭಾರತ ತಂಡ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನಾಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕೆಂದು ಐಸಿಸಿಗೆ ಮನವಿ ಮಾಡಿದೆ. ಈ ಮನವಿಯು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಂಗಳದಲ್ಲಿ. ವಿಶೇಷ ಎಂದರೆ ಇದೀಗ ಇದೇ ಐಸಿಸಿಯ ಅಧ್ಯಕ್ಷರಾಗಿ ಜಯ್ ಶಾ ಕಾರ್ಯಾರಂಭ ಮಾಡಿದ್ದಾರೆ. ಹೀಗಾಗಿ ಬಿಸಿಸಿಐ ಪರ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಹಕ್ಕು ಜಯ್ ಶಾ ಅವರಿಗೆ ಇರಲಿದೆ.  ಇದನ್ನರಿತಿರುವ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಇದೀಗ ವರಸೆ ಬದಲಿಸಿದ್ದು, ಹೊಸ ಬೇಡಿಕೆಗಳನ್ನು ಮುಂದಿಟ್ಟಿದೆ.

ಪಿಸಿಬಿ ಮುಂದಿಟ್ಟ ಬೇಡಿಕೆಗಳೇನು?

  • 2025ರ ಚಾಂಪಿಯನ್ಸ್ ಟ್ರೋಫಿಯ ಆಯೋಜನೆಯ ಹಕ್ಕು ಪಿಸಿಬಿ ಬಳಿಯೇ ಇರಬೇಕು.
  • ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಿದ್ಧ.
  • ಭಾರತದಲ್ಲಿ ನಡೆಯಲಿರುವ ಐಸಿಸಿ ಟೂರ್ನಿಯ ಪಾಕಿಸ್ತಾನ್ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಆಯೋಜಿಸಬೇಕು.
  • ಐಸಿಸಿ ನೀಡುತ್ತಿರುವ ಆದಾಯದ ಪಾಲಿನಲ್ಲಿ ಹೆಚ್ಚಳ ಮಾಡಬೇಕು.

ಈ  ಬೇಡಿಕೆಗಳೊಂದಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಒಪ್ಪಿಗೆ ಸೂಚಿಸಿದೆ. ಆದರೀಗ ಐಸಿಸಿ ಅಧ್ಯಕ್ಷರಾಗಿರುವ ಜಯ್ ಶಾ ಅವರು ಈ ಬೇಡಿಕೆಗಳನ್ನು ಈಡೇರಿಸುತ್ತಾರಾ ಎಂಬುದೇ ಪ್ರಶ್ನೆ.

ಏಕೆಂದರೆ ಭವಿಷ್ಯದಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಟೂರ್ನಿಯ ಪಾಕಿಸ್ತಾನ್ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಆಯೋಜಿಸಲು ಬಿಸಿಸಿಐ ಮುಂದಾಗುವ ಸಾಧ್ಯತೆಯಿಲ್ಲ.

ಹಾಗೆಯೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಆದಾಯದ ಪಾಲು ಹೆಚ್ಚಳವನ್ನು ಪರಿಗಣಿಸುವುದು ಅನುಮಾನ. ಏಕೆಂದರೆ ಈ ನಿರ್ಧಾರದಿಂದ ಇತರೆ ಕ್ರಿಕೆಟ್ ಮಂಡಳಿಗೂ ಕೂಡ ತಮ್ಮ ಪಾಲು ಹೆಚ್ಚಿಸಬೇಕೆಂದು ಬೇಡಿಕೆ ಮುಂದಿಡಬಹುದು. ಹೀಗಾಗಿಯೇ ಇದೀಗ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಚಾಂಪಿಯನ್ಸ್ ಟ್ರೋಫಿಯ ಆಯೋಜನೆಯ ಭವಿಷ್ಯ ಜಯ್ ಶಾ ಅವರ ಕೈಯಲ್ಲಿದೆ ಎನ್ನಬಹುದು.

ಐಸಿಸಿ ಯಾವ ನಿರ್ಧಾರ ಕೈಗೊಳ್ಳಬಹುದು?

ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಹಾಗೂ ಐಸಿಸಿಯ ಮುಖ್ಯಸ್ಥರಾಗಿರುವ ಜಯ್ ಶಾ ಅವರ ತೀರ್ಮಾನವೇ ಚಾಂಪಿಯನ್ಸ್ ಟ್ರೋಫಿ ವಿಷಯದಲ್ಲಿ ಅಂತಿಮವಾಗಲಿದೆ. ಹೀಗಾಗಿ  ಪಾಕಿಸ್ತಾನದ ಬೇಡಿಕೆಗಳಿಗೆ ಐಸಿಸಿ ಪ್ರತಿತಂತ್ರ ರೂಪಿಸಬಹುದು. ಆ ತಂತ್ರಗಳೆಂದರೆ…

  • ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯಿಂದ ಹಿಂಪಡೆಯುವುದು.
  • ಬೇರೊಂದು ದೇಶಕ್ಕೆ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ನೀಡುವುದು.
  • ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ್ ತಂಡವನ್ನು ಹೊರಗಿಡುವುದು.
  • ಐಸಿಸಿ ನಿರ್ಧಾರದ ವಿರುದ್ಧವಾಗಿ ನಡೆದುಕೊಂಡ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಆದಾಯವನ್ನು ಕಡಿತಗೊಳಿಸುವುದು.

ಇದನ್ನೂ ಓದಿ: ಕೇವಲ 3 ರನ್​​ಗೆ 5 ವಿಕೆಟ್​: ಟಿ20 ಕ್ರಿಕೆಟ್​​ನಲ್ಲಿ ಸೂಫಿಯಾನ್ ವಿಶ್ವ ದಾಖಲೆ

ಈ ಕಠಿಣ ನಿರ್ಧಾರಗಳ ಮೂಲಕ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಬಿಸಿ ಮುಟ್ಟಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದಾಗಬಹುದು. ಇದರಿಂದ ಯಾವುದೇ ಬೇಡಿಕೆಯಿಲ್ಲದೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲೇ ಚಾಂಪಿಯನ್ಸ್ ಟ್ರೋಫಿ ಆಯೋಜಿಸಲು ಸಮ್ಮತಿ ಸೂಚಿಸಬಹುದು. ಅದರಂತೆ ಭಾರತದ ಪಂದ್ಯಗಳಿಗೆ ಯುಎಇ ಅಥವಾ ಶ್ರೀಲಂಕಾ ಆತಿಥ್ಯವಹಿಸಬಹುದು.

Published On - 11:03 am, Wed, 4 December 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್