AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC New Chairman: ವಿಶ್ವ ಕ್ರಿಕೆಟ್ ಆಳಲು ಭಾರತ ರೆಡಿ! ಐಸಿಸಿ ನೂತನ ಅಧ್ಯಕ್ಷರಾಗಿ ಜೈ ಶಾ ಆಯ್ಕೆ?

ICC New Chairman: ಗ್ರೆಗ್ ಬಾರ್ಕ್ಲೇ ಅಧಿಕಾರಾವಧಿ ಅಕ್ಟೋಬರ್​ವರೆಗೆ ಇರುವುದರಿಂದ ಅವರ ಸ್ಥಾನಕ್ಕೆ ಹೊಸಬರನ್ನು ತರಲು ಸಾಕಷ್ಟು ಸಮಯವಿದೆ. ಜೊತೆಗೆ ಜೈಶಾ ಮುಂದಿನ ಐಸಿಸಿ ಅಧ್ಯಕ್ಷರಾಗಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

ICC New Chairman: ವಿಶ್ವ ಕ್ರಿಕೆಟ್ ಆಳಲು ಭಾರತ ರೆಡಿ! ಐಸಿಸಿ ನೂತನ ಅಧ್ಯಕ್ಷರಾಗಿ ಜೈ ಶಾ ಆಯ್ಕೆ?
Sourav Ganguly and Jay Shah
TV9 Web
| Updated By: ಪೃಥ್ವಿಶಂಕರ|

Updated on: Apr 11, 2022 | 4:12 PM

Share

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಹಾಲಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಅಕ್ಟೋಬರ್ ಅಂತ್ಯದ ವೇಳೆಗೆ ಅವರು ಅಧಿಕಾರಾವಧಿ ಮುಗಿಯಲಿದೆ. ಐಸಿಸಿ ಈಗಾಗಲೇ ನೂತನ ಅಧ್ಯಕ್ಷರ ಹುಡುಕಾಟ ಆರಂಭಿಸಿದೆ. ಇದರಲ್ಲಿ ಭಾರತೀಯ ಕ್ರಿಕೆಟ್ ಮಂಡಳಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಇದರೊಂದಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿ ಕ್ರಿಕೆಟ್ ಸಮಿತಿಗೆ ಸೇರ್ಪಡೆಗೊಂಡಿದ್ದಾರೆ. ಭಾನುವಾರ ದುಬೈನಲ್ಲಿ ಕೊನೆಗೊಂಡ ಎರಡು ದಿನಗಳ ಮಂಡಳಿಯ ಸಭೆಯು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪರವಾಗಿದೆ. ಗ್ರೆಗ್ ಬಾರ್ಕ್ಲೇ ಅಧಿಕಾರಾವಧಿ ಅಕ್ಟೋಬರ್​ವರೆಗೆ ಇರುವುದರಿಂದ ಅವರ ಸ್ಥಾನಕ್ಕೆ ಹೊಸಬರನ್ನು ತರಲು ಸಾಕಷ್ಟು ಸಮಯವಿದೆ. ಜೊತೆಗೆ ಜೈಶಾ ಮುಂದಿನ ಐಸಿಸಿ ಅಧ್ಯಕ್ಷರಾಗಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

ಐಸಿಸಿ ಮಂಡಳಿಯ ಸದಸ್ಯರೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದು, ಗ್ರೆಗ್ ಬಾರ್ಕ್ಲೇ ಮರುನಾಮನಿರ್ದೇಶನದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ, ಅಕ್ಟೋಬರ್ ಅಂತ್ಯದ ವೇಳೆಗೆ ಅವರು ಅಧ್ಯಕ್ಷರಾಗಿ ಪ್ರಸ್ತುತ ಎರಡು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತಾರೆ. ಹಾಗಾಗಿ ಹೊಸ ಅಧ್ಯಕ್ಷರ ನಾಮನಿರ್ದೇಶನ ಪ್ರಕ್ರಿಯೆಯು ಪ್ರಾರಂಭವಾಗಲಿದೆ. ಈ ಹಿಂದೆ ಜೂನ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡಬೇಕಾಗಿತ್ತು, ಆದರೆ ಸದಸ್ಯ ಮಂಡಳಿಗಳೊಂದಿಗೆ ಸಮಾಲೋಚಿಸಿದ ನಂತರ ನವೆಂಬರ್​ ತಿಂಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ.

ಲೋಧಾ ಸಮಿತಿ ಶಿಫಾರಸುಗಳಲ್ಲಿ ಬದಲಾವಣೆ.. ಲೋಧಾ ಸಮಿತಿಯ ಶಿಫಾರಸುಗಳಲ್ಲಿ ಕೆಲವು ಬದಲಾವಣೆಗಳನ್ನು ಬಿಸಿಸಿಐ ಈಗಾಗಲೇ ಒತ್ತಾಯಿಸುತ್ತಿದೆ. ಅದರಲ್ಲಿರುವ ಹಲವು ನಿಯಮಗಳು ಪ್ರಾಯೋಗಿಕವಾಗಿ ಅನ್ವಯಿಸುವುದಿಲ್ಲ ಎಂಬುದು ಬಿಸಿಸಿಐ ವಾದವಾಗಿದೆ. ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈಶಾ ಸೆಪ್ಟೆಂಬರ್‌ನಲ್ಲಿ ಕೂಲಿಂಗ್-ಆಫ್‌ಗೆ ಹೋಗುತ್ತಾರೆಯೇ ಎಂಬುದು ಕುತೂಹಲಕಾರಿಯಾಗಿದೆ. ಇದರೊಂದಿಗೆ ಮುಂದಿನ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಶಾ ಹೆಸರು ಸುದ್ದಿಯಲ್ಲಿದೆ. ಆದರೆ, ಇದನ್ನು ಸ್ವತಃ ಬಿಸಿಸಿಐ ಕಾರ್ಯದರ್ಶಿಯಾಗಲಿ ಅಥವಾ ಅವರ ನಿಕಟವರ್ತಿಗಳಾಗಲಿ ಇನ್ನೂ ಖಚಿತಪಡಿಸಿಲ್ಲ.

ಜೈಶಾ ಕ್ರಿಕೆಟ್ ಸಮಿತಿಗೆ ಸೇರ್ಪಡೆ ಐಸಿಸಿ ಕ್ರಿಕೆಟ್ ಸಮಿತಿಗೆ ಹೊಸದಾಗಿ ಸೇರ್ಪಡೆಗೊಂಡವರಲ್ಲಿ ಜೈಶಾ ಕೂಡ ಒಬ್ಬರು. ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಮಾಜಿ ಆಟಗಾರನಾಗಿ ಮರು ನೇಮಕಗೊಂಡಿದ್ದಾರೆ. ನ್ಯೂಜಿಲೆಂಡ್ ಮುಖ್ಯ ಕೋಚ್ ಗ್ಯಾರಿ ಸ್ಟೆಡ್, ಐಸಿಸಿ ಎಲೈಟ್ ಪ್ಯಾನೆಲ್ ಅಂಪೈರ್ ಜೋಯಲ್ ವಿಲ್ಸನ್ ಮತ್ತು ಎಂಸಿಸಿ ವಕ್ತಾರ ಜೇಮಿ ಕಾಕ್ಸ್ ಕೂಡ ಸಮಿತಿಯಲ್ಲಿದ್ದರು.

ಇದನ್ನೂ ಓದಿ:IPL 2022: ಆರ್​ಸಿಬಿ ಎದುರು ಸೋತ ರಾಜಸ್ಥಾನ್​ಗೆ ಮತ್ತೊಂದು ಆಘಾತ; ಐಪಿಎಲ್​ನಿಂದ ತಂಡದ ವೇಗದ ಬೌಲರ್ ಔಟ್..!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?