ICC Men Test Team: ಐಸಿಸಿ ಟೆಸ್ಟ್ ತಂಡ ಪ್ರಕಟ: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ

ಈ ತಂಡದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡದ ತಲಾ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಹಾಗೆಯೇ ನ್ಯೂಜಿಲೆಂಡ್‌ನ ಇಬ್ಬರು ಆಟಗಾರರು, ಶ್ರೀಲಂಕಾ, ಇಂಗ್ಲೆಂಡ್, ಆಸ್ಟ್ರೇಲಿಯಾದ ತಲಾ ಒಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ.

ICC Men Test Team: ಐಸಿಸಿ ಟೆಸ್ಟ್ ತಂಡ ಪ್ರಕಟ: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ
ಟೀಮ್ ಇಂಡಿಯಾ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 20, 2022 | 5:11 PM

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) 2021ರ ಪುರುಷರ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ, ವಿರಾಟ್ ಕೊಹ್ಲಿ ಕಳೆದ ವರ್ಷದ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಇನ್ನು ಐಸಿಸಿ ವರ್ಷದ ODI ತಂಡದಲ್ಲಿ ಯಾವುದೇ ಭಾರತೀಯ ಆಟಗಾರ ಸ್ಥಾನ ಪಡೆದಿರಲಿಲ್ಲ. ಟೆಸ್ಟ್ ತಂಡದಲ್ಲಿ ಮೂವರು ಭಾರತೀಯರಿದ್ದರೂ ನಾಯಕನಾಗಿ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ. ಕಳೆದ ವರ್ಷದ ಆರಂಭದಲ್ಲಿ, ಸೌತಾಂಪ್ಟನ್‌ನಲ್ಲಿ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ವಿಲಿಯಮ್ಸನ್ ಮುನ್ನಡೆಸಿದ್ದರು. ಇನ್ನು ಈ ತಂಡದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡದ ತಲಾ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಹಾಗೆಯೇ ನ್ಯೂಜಿಲೆಂಡ್‌ನ ಇಬ್ಬರು ಆಟಗಾರರು, ಶ್ರೀಲಂಕಾ, ಇಂಗ್ಲೆಂಡ್, ಆಸ್ಟ್ರೇಲಿಯಾದ ತಲಾ ಒಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ.

ಐಸಿಸಿ ಟೆಸ್ಟ್ ತಂಡದಲ್ಲಿ ಪಾಕಿಸ್ತಾನದ ಹಸನ್ ಅಲಿ, ಫವಾದ್ ಆಲಂ ಮತ್ತು ಶಾಹೀನ್ ಅಫ್ರಿದಿ, ಶ್ರೀಲಂಕಾದ ದಿಮುತ್ ಕರುಣರತ್ನೆ, ಆಸ್ಟ್ರೇಲಿಯಾದ ಮಾರ್ನಸ್ ಲಾಬುಸ್‌ಚಾಗ್ನೆ, ಇಂಗ್ಲೆಂಡ್‌ನ ಜೋ ರೂಟ್ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಹೊರತುಪಡಿಸಿ ಕೈಲ್ ಜೇಮಿಸನ್ ತಂಡದ ಭಾಗವಾಗಿದ್ದಾರೆ.

ಐಸಿಸಿ 2021ರ ಟೆಸ್ಟ್ ತಂಡದ ಆಟಗಾರರು ಯಾರೆಲ್ಲಾ?

ದಿಮುತ್ ಕರುಣಾರತ್ನೆ – ಶ್ರೀಲಂಕಾದ ನಾಯಕ ದಿಮುತ್ 2021 ರಲ್ಲಿ ಏಳು ಟೆಸ್ಟ್‌ಗಳಲ್ಲಿ 69.38 ರ ಸರಾಸರಿಯಲ್ಲಿ 902 ರನ್ ಗಳಿಸಿದರು. ಈ ವೇಳೆ ನಾಲ್ಕು ಶತಕಗಳನ್ನು ಬಾರಿಸಿದ್ದರು.

ರೋಹಿತ್ ಶರ್ಮಾ – ಟೀಮ್ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ 47.68 ಸರಾಸರಿಯಲ್ಲಿ 906 ರನ್ ಗಳಿಸಿದ್ದಾರೆ. ಇದೇ ವೇಳೆ ಎರಡು ಶತಕಗಳನ್ನು ಬಾರಿಸಿದ್ದರು.

ಮಾರ್ನಸ್ ಲಾಬುಶೇನ್ – ಆಸ್ಟ್ರೇಲಿಯಾದ ಮೂರನೇ ಕ್ರಮಾಂಕದ ಬ್ಯಾಟರ್​ ಲಾಬುಶೇನ್ ಕಳೆದ ವರ್ಷ ಐದು ಪಂದ್ಯಗಳಲ್ಲಿ 65.75 ಸರಾಸರಿಯಲ್ಲಿ 526 ರನ್ ಗಳಿಸಿದ್ದಾರೆ. ಈ ವೇಳೆ ಎರಡು ಶತಕ ಬಾರಿಸಿದ್ದರು.

ಜೋ ರೂಟ್ – ಇಂಗ್ಲೆಂಡ್‌ನ ನಾಯಕ ರೂಟ್ ಕಳೆದ ವರ್ಷ 15 ಪಂದ್ಯಗಳಲ್ಲಿ 61 ರ ಸರಾಸರಿಯಲ್ಲಿ 1708 ರನ್ ಗಳಿಸಿದ್ದಾರೆ. ಈ ವೇಳೆ ಆರು ಶತಕಗಳನ್ನು ಸಿಡಿಸಿದ್ದರು.

ಕೇನ್ ವಿಲಿಯಮ್ಸನ್ – ನ್ಯೂಜಿಲೆಂಡ್ ನಾಯಕ ವಿಲಿಯಮ್ಸನ್ ನಾಲ್ಕು ಪಂದ್ಯಗಳಲ್ಲಿ 65.83 ಸರಾಸರಿಯಲ್ಲಿ 395 ರನ್ ಗಳಿಸಿದ್ದರು. ಅಷ್ಟೇ ಅಲ್ಲದೆ ಇವರ ನಾಯಕತ್ವದಲ್ಲಿ ನ್ಯೂಜಿಲೆಂಡ್ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದುಕೊಂಡಿತು.

ಫವಾದ್ ಆಲಂ – ಈ ಪಾಕಿಸ್ತಾನಿ ಬ್ಯಾಟರ್ ಫವಾದ್ ಒಂಬತ್ತು ಪಂದ್ಯಗಳಲ್ಲಿ 57.10 ಸರಾಸರಿಯಲ್ಲಿ 571 ರನ್ ಗಳಿಸಿದ್ದಾರೆ. ಈ ವೇಳೆ ಮೂರು ಶತಕಗಳು ಮೂಡಿಬಂದಿತ್ತು.

ರಿಷಬ್ ಪಂತ್ – ಭಾರತದ ಈ ಯುವ ವಿಕೆಟ್ ಕೀಪರ್ ಬ್ಯಾಟರ್ ಕಳೆದ ವರ್ಷ 12 ಪಂದ್ಯಗಳಲ್ಲಿ 39.36 ಸರಾಸರಿಯಲ್ಲಿ 748 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಕೂಡ ಶತಕ ಬಾರಿಸಿದ್ದರು.

ರವಿಚಂದ್ರನ್ ಅಶ್ವಿನ್ – ಟೀಮ್ ಇಂಡಿಯಾ ಆಫ್ ಸ್ಪಿನ್ನರ್ ಅಶ್ವಿನ್ ಒಂಬತ್ತು ಪಂದ್ಯಗಳಲ್ಲಿ 16.64 ಸರಾಸರಿಯಲ್ಲಿ 54 ವಿಕೆಟ್‌ಗಳನ್ನು ಪಡೆದಿದ್ದರು. ಜೊತೆಗೆ 25.35 ಸರಾಸರಿಯಲ್ಲಿ 355 ರನ್ ಗಳಿಸಿದ್ದಾರೆ.

ಕೈಲ್ ಜೇಮಿಸನ್ – ಈ ನ್ಯೂಜಿಲೆಂಡ್ ಬೌಲರ್ ಜೇಮಿಸನ್ 17.51 ​​ಸರಾಸರಿಯಲ್ಲಿ 27 ವಿಕೆಟ್‌ಗಳನ್ನು ಪಡೆದಿದ್ದಾರೆ.

ಹಸನ್ ಅಲಿ – ಪಾಕಿಸ್ತಾನದ ವೇಗದ ಬೌಲರ್ ಹಸನ್ ಅಲಿ ಒಂಬತ್ತು ಪಂದ್ಯಗಳಲ್ಲಿ 16.07 ಸರಾಸರಿಯಲ್ಲಿ 41 ವಿಕೆಟ್ ಪಡೆದಿದ್ದಾರೆ.

ಶಾಹೀನ್ ಅಫ್ರಿದಿ – ಯುವ ಎಡಗೈ ವೇಗಿ ಶಾಹೀನ್ ಒಂಬತ್ತು ಪಂದ್ಯಗಳಲ್ಲಿ 17.06 ಸರಾಸರಿಯಲ್ಲಿ 47 ವಿಕೆಟ್‌ಗಳನ್ನು ಪಡೆದಿದ್ದರು.

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

(ICC Men Test Team of the Year)

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?