Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Men’s ODI Player: ಐಸಿಸಿ ವರ್ಷದ ಏಕದಿನ ಆಟಗಾರರ ನಾಮನಿರ್ದೇಶಿತ ಪಟ್ಟಿ ಪ್ರಕಟ

ICC Men's ODI Player of the Year Award: ಬಾಂಗ್ಲಾದೇಶದ ಮಾಜಿ ನಾಯಕ ಮತ್ತು ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಈ ವರ್ಷ 9 ಏಕದಿನ ಪಂದ್ಯಗಳಲ್ಲಿ 40ರ ಸರಾಸರಿಯಲ್ಲಿ 277 ರನ್ ಗಳಿಸಿದ್ದಾರೆ.

ICC Men's ODI Player: ಐಸಿಸಿ ವರ್ಷದ ಏಕದಿನ ಆಟಗಾರರ ನಾಮನಿರ್ದೇಶಿತ ಪಟ್ಟಿ ಪ್ರಕಟ
ICC Men's ODI Player
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 30, 2021 | 3:32 PM

2021 ರ ಐಸಿಸಿ ವರ್ಷದ ಏಕದಿನ ಆಟಗಾರರ ನಾಮನಿರ್ದೇಶಿತ ಪಟ್ಟಿ ಪ್ರಕಟಗೊಂಡಿದೆ. ಒಟ್ಟು ನಾಲ್ವರು ಆಟಗಾರರನ್ನು ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗಿದ್ದು, ಅದರಂತೆ ಈ ಬಾರಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ, ಬಾಂಗ್ಲಾದೇಶ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್, ದಕ್ಷಿಣ ಆಫ್ರಿಕಾದ ಜನೆಮನ್ ಮಲಾನ್ ಮತ್ತು ಐರ್ಲೆಂಡ್‌ನ ಪಾಲ್ ಸ್ಟಿರ್ಲಿಂಗ್ ಅವರು ಸ್ಥಾನ ಪಡೆದಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯಾವೊಬ್ಬ ಆಟಗಾರ ಕೂಡ ಸ್ಥಾನ ಪಡೆಯದಿಲ್ಲ ಎಂಬುದು ವಿಶೇಷ.

ಬಾಂಗ್ಲಾದೇಶದ ಮಾಜಿ ನಾಯಕ ಮತ್ತು ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಈ ವರ್ಷ 9 ಏಕದಿನ ಪಂದ್ಯಗಳಲ್ಲಿ 40ರ ಸರಾಸರಿಯಲ್ಲಿ 277 ರನ್ ಗಳಿಸಿದ್ದಾರೆ. ಇದಲ್ಲದೇ ಈ ಎಡಗೈ ಸ್ಪಿನ್ನರ್ 17 ವಿಕೆಟ್ ಕಬಳಿಸಿದ್ದಾರೆ.

ಪಾಕಿಸ್ತಾನದ ನಾಯಕ ಬಾಬರ್ ಆಜಂ ಈ ವರ್ಷ ಕೇವಲ 6 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 68 ರ ಸರಾಸರಿಯಲ್ಲಿ 405 ರನ್ ಗಳಿಸಿದ್ದಾರೆ. ಇದೇ ವೇಳೆ 2 ಶತಕಗಳನ್ನು ಕೂಡ ಬಾರಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಜನೆಮನ್ ಮಲಾನ್ ಕೂಡ ಏಕದಿನದ ಅತ್ಯುತ್ತಮ ಆಟಗಾರನ ರೇಸ್‌ನಲ್ಲಿದ್ದಾರೆ. ಮಲಾನ್ 8 ಪಂದ್ಯಗಳಲ್ಲಿ 85ರ ಸರಾಸರಿಯಲ್ಲಿ 509 ರನ್ ಗಳಿಸಿದ್ದಾರೆ. ಈ ಭರ್ಜರಿ ಇನಿಂಗ್ಸ್​ ವೇಳೆ ಮಲಾನ್ ಅವರ ಬ್ಯಾಟ್​ನಿಂದ 2 ಶತಕ ಮತ್ತು 2 ಅರ್ಧ ಶತಕಗಳು ಮೂಡಿ ಬಂದಿವೆ.

ಇನ್ನು ಐರ್ಲೆಂಡ್‌ನ ಹಿರಿಯ ಆಟಗಾರ ಪಾಲ್ ಸ್ಟಿರ್ಲಿಂಗ್ ಕೂಡ ಐಸಿಸಿ ಏಕದಿನ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷ 14 ಪಂದ್ಯಗಳಲ್ಲಿ 80ರ ಸರಾಸರಿಯಲ್ಲಿ ಸ್ಟಿರ್ಲಿಂಗ್ 705 ರನ್ ಗಳಿಸಿದ್ದಾರೆ. ಈ ವೇಳೆ 3 ಶತಕ ಹಾಗೂ 2 ಅರ್ಧ ಶತಕ ಬಾರಿಸಿದ್ದಾರೆ.

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(ICC Men’s ODI Player of the Year Award)

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ