India vs Pakistan: ಭಾರತ-ಪಾಕ್ 3ನೇ ಮುಖಾಮುಖಿ: ಪಂದ್ಯದ ಟಿಕೆಟ್​ಗಳು ಸೋಲ್ಡ್ ಔಟ್

ICC Men's T20 World Cup 2022: ಮೆಲ್ಬೋರ್ನ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇದೀಗ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ.

India vs Pakistan: ಭಾರತ-ಪಾಕ್ 3ನೇ ಮುಖಾಮುಖಿ: ಪಂದ್ಯದ ಟಿಕೆಟ್​ಗಳು ಸೋಲ್ಡ್ ಔಟ್
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 15, 2022 | 11:53 AM

ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. 16 ತಂಡಗಳು ಭಾಗವಹಿಸಲಿರುವ ಈ ವಿಶ್ವಕಪ್​ನಲ್ಲಿ ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಇನ್ನು ಅಕ್ಟೋಬರ್ 22 ರಿಂದ ಸೂಪರ್ 12 ಪಂದ್ಯಗಳಿಗೆ ಚಾಲನೆ ಸಿಗಲಿದೆ. ವಿಶೇಷ ಎಂದರೆ ಟೀಮ್ ಇಂಡಿಯಾ ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್​ ಅಭಿಯಾನ ಆರಂಭಿಸಲಿದೆ.

ಮೆಲ್ಬೋರ್ನ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇದೀಗ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ವಿಶೇಷ ಎಂದರೆ ಈ ಪಂದ್ಯದ ಎಲ್ಲಾ ಟಿಕೆಟ್​ಗಳು ತಿಂಗಳುಗಳ ಮುಂಚಿತವಾಗಿ ಮಾರಾಟವಾಗಿದೆ. ಅಕ್ಟೋಬರ್ 23 ರಂದು ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನದ ಎಲ್ಲಾ ಟಿಕೆಟ್​ಗಳು ಮಾರಾಟವಾಗಿದ್ದು, ಹೆಚ್ಚುವರಿ ಸ್ಟ್ಯಾಂಡಿಂಗ್ ರೂಮ್ ಟಿಕೆಟ್‌ಗಳ ಮಾರಾಟವನ್ನು ಪ್ರಾರಂಭಿಸಿದ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಿಕರಿಯಾಗಿದೆ ಎಂದು ಐಸಿಸಿ ತಿಳಿಸಿದೆ. ಇದರೊಂದಿಗೆ ಇಂಡೋ-ಪಾಕ್ ಕ್ರಿಕೆಟ್ ಕದನ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವುದು ಸ್ಪಷ್ಟವಾಗಿದೆ.

ವಿಶೇಷ ಎಂದರೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು 2 ಬಾರಿ ಮುಖಾಮುಖಿಯಾಗಿತ್ತು. ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಗೆಲುವು ದಾಖಲಿಸಿತ್ತು. ಇದೀಗ ಟಿ20 ವಿಶ್ವಕಪ್​ ಮೂಲಕ ಒಂದೇ ವರ್ಷದಲ್ಲಿ 3ನೇ ಬಾರಿ ಮುಖಾಮುಖಿಯಾಗಲು ಸಜ್ಜಾಗಿದೆ. ಇನ್ನು ಈ ಟೂರ್ನಿಯಲ್ಲಿ ಭಾರತ ಗ್ರೂಪ್​-2 ನಲ್ಲಿದ್ದು, ಸೂಪರ್-12 ಹಂತದಲ್ಲಿ ಒಟ್ಟು 5 ಪಂದ್ಯಗಳನ್ನು ಆಡಲಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:

  • ಅಕ್ಟೋಬರ್-23 : ಭಾರತ vs ಪಾಕಿಸ್ತಾನ – ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ
  • ಅಕ್ಟೋಬರ್-27: ಭಾರತ vs ಅರ್ಹತಾ ಸುತ್ತಿನ A ಗ್ರೂಪ್​ನ ರನ್ನರ್​ ಅಪ್ ತಂಡ – ಸಿಡ್ನಿ ಕ್ರಿಕೆಟ್ ಸ್ಟೇಡಿಯಂ
  • ಅಕ್ಟೋಬರ್- 30: ಭಾರತ vs ದಕ್ಷಿಣ ಆಫ್ರಿಕಾ – ಪರ್ತ್ ಸ್ಟೇಡಿಯಂ
  • ನವೆಂಬರ್-2: ಭಾರತ vs ಬಾಂಗ್ಲಾದೇಶ -ಅಡಿಲೇಡ್ ಓವಲ್
  • ನವೆಂಬರ್-6: ಭಾರತ vs ಅರ್ಹತಾ ಸುತ್ತಿನ B ಗ್ರೂಪ್​ನ ​ವಿನ್ನರ್ ತಂಡ

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ