ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ದಿನಗಣನೆ ಶುರುವಾಗಿದೆ. 16 ತಂಡಗಳು ಭಾಗವಹಿಸಲಿರುವ ಈ ವಿಶ್ವಕಪ್ನಲ್ಲಿ ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಇನ್ನು ಅಕ್ಟೋಬರ್ 22 ರಿಂದ ಸೂಪರ್ 12 ಪಂದ್ಯಗಳಿಗೆ ಚಾಲನೆ ಸಿಗಲಿದೆ. ವಿಶೇಷ ಎಂದರೆ ಟೀಮ್ ಇಂಡಿಯಾ ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.
ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇದೀಗ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ವಿಶೇಷ ಎಂದರೆ ಈ ಪಂದ್ಯದ ಎಲ್ಲಾ ಟಿಕೆಟ್ಗಳು ತಿಂಗಳುಗಳ ಮುಂಚಿತವಾಗಿ ಮಾರಾಟವಾಗಿದೆ. ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನದ ಎಲ್ಲಾ ಟಿಕೆಟ್ಗಳು ಮಾರಾಟವಾಗಿದ್ದು, ಹೆಚ್ಚುವರಿ ಸ್ಟ್ಯಾಂಡಿಂಗ್ ರೂಮ್ ಟಿಕೆಟ್‌ಗಳ ಮಾರಾಟವನ್ನು ಪ್ರಾರಂಭಿಸಿದ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಿಕರಿಯಾಗಿದೆ ಎಂದು ಐಸಿಸಿ ತಿಳಿಸಿದೆ. ಇದರೊಂದಿಗೆ ಇಂಡೋ-ಪಾಕ್ ಕ್ರಿಕೆಟ್ ಕದನ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವುದು ಸ್ಪಷ್ಟವಾಗಿದೆ.
ವಿಶೇಷ ಎಂದರೆ ಈ ಬಾರಿಯ ಏಷ್ಯಾಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು 2 ಬಾರಿ ಮುಖಾಮುಖಿಯಾಗಿತ್ತು. ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಗೆಲುವು ದಾಖಲಿಸಿತ್ತು. ಇದೀಗ ಟಿ20 ವಿಶ್ವಕಪ್ ಮೂಲಕ ಒಂದೇ ವರ್ಷದಲ್ಲಿ 3ನೇ ಬಾರಿ ಮುಖಾಮುಖಿಯಾಗಲು ಸಜ್ಜಾಗಿದೆ. ಇನ್ನು ಈ ಟೂರ್ನಿಯಲ್ಲಿ ಭಾರತ ಗ್ರೂಪ್-2 ನಲ್ಲಿದ್ದು, ಸೂಪರ್-12 ಹಂತದಲ್ಲಿ ಒಟ್ಟು 5 ಪಂದ್ಯಗಳನ್ನು ಆಡಲಿದೆ.
ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:
ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.