IND vs PAK: ಪಾಕ್ ವಿರುದ್ಧ ಟಾಸ್ ಗೆದ್ದ ಭಾರತ: ರೋಹಿತ್ ಪಡೆಯ ಪ್ಲೇಯಿಂಗ್ XI ಇಲ್ಲಿದೆ
T20 World Cup: ಕ್ರಿಕೆಟ್ ಲೋಕದ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗುತ್ತಿದೆ. ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಬಲಿಷ್ಠ ಆಟಗಾರರನ್ನೇ ಕಣಕ್ಕಿಳಿಸಿದೆ.
ಐಸಿಸಿ ಟಿ20 ವಿಶ್ವಕಪ್ನ (T20 World Cup) ಸೂಪರ್ 12 ಹಂತದ ಗ್ರೂಪ್ 2 ರ ಪಂದ್ಯದಲ್ಲಿಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗುತ್ತಿದೆ. ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಬಲಿಷ್ಠ ಆಟಗಾರರನ್ನೇ ಕಣಕ್ಕಿಳಿಸಿದ್ದಾರೆ. ಕಳೆದ ವರ್ಷದ ವರೆಗೂ ಟೀಮ್ ಇಂಡಿಯಾ 50 ಓವರ್ ಹಾಗೂ 20 ಓವರ್‌ಗಳ ಮಾದರಿಗಳ ವಿಶ್ವಕಪ್ ಟೂರ್ನಿಗಳಲ್ಲಿ ಪಾಕ್ ವಿರುದ್ಧ ಸೋಲಿಲ್ಲದ ಸರದಾರನಾಗಿ ಮೆರೆದಿತ್ತು. ಆದರೆ, ದುಬೈನಲ್ಲಿ ನಡೆದಿದ್ದ ಟಿ20 ವಿಶ್ವಕಪ್ 2021 ಪಂದ್ಯದಲ್ಲಿ ಈ ಗೆಲುವಿನ ಸರಪಣಿ ಕಳಚಿಬಿತ್ತು. ಆ ಪಂದ್ಯದಲ್ಲಿ ಕೊಹ್ಲಿ (Virat Kohli) ಪಡೆಯ ವಿರುದ್ಧ ಪಾಕಿಸ್ತಾನ ಹತ್ತು ವಿಕೆಟ್‌ಗಳ ಜಯಸಾಧಿಸಿತ್ತು. ಹೀಗಾಗಿ ಭಾರತಕ್ಕೆ ಇದೊಂದು ಸೇಡಿನ ಪಂದ್ಯ ಎಂದುಕೂಡ ಹೇಳಬಹುದು.
ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಪರ ಅಂದುಕೊಂಡಂತೆ ರಿಷಭ್ ಪಂತ್ ಬದಲು ದಿನೇಶ್ ಕಾರ್ತಿಕ್ ಆಯ್ಕೆಯಾಗಿದ್ದಾರೆ. ಅಂತೆಯೆ ಅಭ್ಯಾಸ ಪಂದ್ಯದಲ್ಲಿ ದುಬಾರಿಯಾಗಿದ್ದ ಹರ್ಷಲ್ ಪಟೇಲ್ ಕೂಡ ಆಡುವ ಬಳಗದಿಂದ ಹೊರಬಿದ್ದಿದ್ದು, ಮೊಹಮ್ಮದ್ ಶಮಿ ಸ್ಥಾನ ಪಡೆದುಕೊಂಡಿದ್ದಾರೆ. ಅಚ್ಚರಿ ಎಂಬಂತೆ ಯುಜ್ವೇಂದ್ರ ಚಹಲ್ ಬದಲು ಆರ್. ಅಶ್ವಿನ್ ಆಡುವ ಬಳಗದಲ್ಲಿದ್ದಾರೆ. ಉಳಿದಂತೆ ಭಾರತದ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ಷದೀಪ್ ಸಿಂಗ್.
ಪಾಕಿಸ್ತಾನ ಪ್ಲೇಯಿಂಗ್ XI: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾನ್ ಮಸೂದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಹೈದರ್ ಅಲಿ, ಇಫ್ತಿಖರ್ ಅಹ್ಮದ್, ಅಸಿಫ್ ಅಲಿ, ಶಾಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್.
ಮಳೆ ಸಾಧ್ಯತೆ ಕಡಿಮೆ:
ಮೆಲ್ಬೋರ್ನ್ ಭಾಗದಲ್ಲಿ ನಿರಂತರ ಮಳೆ ಸುರಿದರೆ ಭಾರತ ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ ಎಂದೇ ಹೇಳಲಾಗಿತ್ತು. ಆದರೀಗ ಗುಡ್ ನ್ಯೂಸ್ ಸಿಕ್ಕಿದೆ. ಮೆಲ್ಬೋರ್ನ್ನಲ್ಲಿ ಮಳೆಯ ಅಬ್ಬರ ಕಡಿಮೆ ಆಗಿದೆ. ಶನಿವಾರ ಸಣ್ಣ ಪ್ರಮಾಣದ ಮಳೆ ಆಗಿದೆಯಷ್ಟೆ. ಭಾನುವಾರ ಮೆಲ್ಬೋರ್ನ್ನಲ್ಲಿ ಮಳೆಯ ಸೂಚನೆಯಿಲ್ಲ. ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವುದು ಅನುಮಾನ. ಎಲ್ಲಾದರು ಮಳೆ ಬಂದರೆ ಪಂದ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಒಂದು ವೇಳೆ ಪಂದ್ಯ ನಡೆಸಲು ಅವಕಾಶವಿದ್ದರೆ ಭಾರತೀಯ ಕಾಲಮಾನ ಸಂಜೆ 4.30 ತನಕ ಕಾದು ನೋಡಬಹುದು. ಇದರ ನಡುವೆ ಮಳೆ ನಿಂತರೆ ಓವರ್ ಕಡಿತದೊಂದಿಗೆ ಪಂದ್ಯವನ್ನು ಶುರು ಮಾಡಬಹುದು. ಇನ್ನು ಪಂದ್ಯ ನಡೆಸಲು ಕಟ್ ಆಫ್ ಟೈಮ್ ನಿಗದಿತ ಪಡಿಸಿದ ಬಳಿಕ ಮಳೆ ನಿಂತರೆ ಉಭಯ ತಂಡಗಳಿಗೂ ತಲಾ 5 ಓವರ್‌ಗಳ ಪಂದ್ಯವನ್ನು ನಡೆಸಬಹುದು. ಒಂದುವೇಳೆ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ. ಯಾವುದೇ ಮೀಸಲು ದಿನ ಇರುವುದಿಲ್ಲ.
Published On - 1:05 pm, Sun, 23 October 22