AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Rankings: ಐಸಿಸಿ ರ‍್ಯಾಂಕಿಂಗ್ ಪ್ರಕಟ: ಟಾಪ್-10 ನಲ್ಲಿ ಐವರು ಭಾರತೀಯರು

ICC ODI Batters Rankings: ಹೊಸ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಭಾರತದ ಐವರು ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಾಪ್-10 ಬ್ಯಾಟರ್​ಗಳ ಪಟ್ಟಿಯಲ್ಲಿ ಮೂವರು ಆಟಗಾರರು ಸ್ಥಾನ ಪಡೆದರೆ, ಬೌಲರ್​ಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ.

ICC ODI Rankings: ಐಸಿಸಿ ರ‍್ಯಾಂಕಿಂಗ್ ಪ್ರಕಟ: ಟಾಪ್-10 ನಲ್ಲಿ ಐವರು ಭಾರತೀಯರು
Shubman - Rohit - Virat
TV9 Web
| Edited By: |

Updated on: Sep 13, 2023 | 2:35 PM

Share

ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲೂ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ.

ಏಷ್ಯಾಕಪ್​ನಲ್ಲಿ ನೇಪಾಳ ಹಾಗೂ ಪಾಕಿಸ್ತಾನ್ ವಿರುದ್ಧ ಅರ್ಧಶತಕ ಬಾರಿಸಿದ ಗಿಲ್ ಇದೀಗ ಏಕದಿನ ಶ್ರೇಯಾಂಕದಲ್ಲಿ 3ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಹಾಗೆಯೇ ಕಳೆದ ಬಾರಿ ಟಾಪ್-10 ರಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಈ ಸಲ ಎರಡು ಸ್ಥಾನ ಮೇಲೇರಿದ್ದಾರೆ. ಹಾಗೆಯೇ ಅಗ್ರ ಹತ್ತರಲ್ಲಿ ಸ್ಥಾನ ಪಡೆಯುವಲ್ಲಿ ರೋಹಿತ್ ಶರ್ಮಾ ಕೂಡ ಯಶಸ್ವಿಯಾಗಿದ್ದಾರೆ.

ಟಾಪ್-10 ನಲ್ಲಿ ಐವರು ಭಾರತೀಯರು:

ಹೊಸ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಭಾರತದ ಐವರು ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಾಪ್-10 ಬ್ಯಾಟರ್​ಗಳ ಪಟ್ಟಿಯಲ್ಲಿ ಮೂವರು ಆಟಗಾರರು ಸ್ಥಾನ ಪಡೆದರೆ, ಬೌಲರ್​ಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ.

ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ:

  1. ಬಾಬರ್ ಆಝಂ (ಪಾಕಿಸ್ತಾನ್)- 863 ರೇಟಿಂಗ್
  2. ಶುಭ್​ಮನ್ ಗಿಲ್ (ಭಾರತ)- 759 ರೇಟಿಂಗ್
  3. ರಸ್ಸಿ ವಂಡೆರ್ ಡುಸ್ಸೆನ್ (ಸೌತ್ ಆಫ್ರಿಕಾ)- 745 ರೇಟಿಂಗ್
  4. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 739 ರೇಟಿಂಗ್
  5. ಇಮಾಮ್ ಉಲ್ ಹಕ್ (ಪಾಕಿಸ್ತಾನ್)- 735 ರೇಟಿಂಗ್
  6. ಹ್ಯಾರಿ ಟೆಕ್ಟರ್ (ಐರ್ಲೆಂಡ್)- 726 ರೇಟಿಂಗ್
  7. ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 721 ರೇಟಿಂಗ್
  8. ವಿರಾಟ್ ಕೊಹ್ಲಿ (ಭಾರತ)- 715 ರೇಟಿಂಗ್
  9. ರೋಹಿತ್ ಶರ್ಮಾ (ಭಾರತ)- 707 ರೇಟಿಂಗ್
  10. ಫಖರ್ ಝಮಾನ್ (ಪಾಕಿಸ್ತಾನ್)- 705 ರೇಟಿಂಗ್

ಐಸಿಸಿ ಬೌಲರ್​ಗಳ ನೂತನ ಟಾಪ್-10 ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಬೌಲರ್​ಗಳು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ 7ನೇ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ​ 10 ತಂಡಗಳು ಫೈನಲ್

ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ್ದ ಕುಲ್ದೀಪ್ ಯಾದವ್ ಶ್ರೀಲಂಕಾ ವಿರುದ್ಧ 4 ವಿಕೆಟ್ ಪಡೆದಿದ್ದರು. ಈ ಅದ್ಭುತ ಪ್ರದರ್ಶನದೊಂದಿಗೆ ಎಡಗೈ ಸ್ಪಿನ್ನರ್ ಟಾಪ್-10 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕಳೆದ ಬಾರಿಯ ಶ್ರೇಯಾಂಕವನ್ನು ಕಾಯ್ದುಕೊಂಡಿದ್ದಾರೆ.

ಐಸಿಸಿ ಏಕದಿನ ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿ:

  1. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 692 ರೇಟಿಂಗ್.
  2. ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ)- 666 ರೇಟಿಂಗ್
  3. ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್)- 666 ರೇಟಿಂಗ್
  4. ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 663 ರೇಟಿಂಗ್
  5. ಮ್ಯಾಟ್ ಹೆನ್ರಿ (ನ್ಯೂಝಿಲೆಂಡ್)- 658 ರೇಟಿಂಗ್
  6. ಮುಜೀಬ್ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 657 ರೇಟಿಂಗ್
  7. ಕುಲ್ದೀಪ್ ಯಾದವ್ (ಭಾರತ)- 656 ರೇಟಿಂಗ್
  8. ರಶೀದ್ ಖಾನ್ (ಅಫ್ಘಾನಿಸ್ತಾನ್)- 655 ರೇಟಿಂಗ್
  9. ಮೊಹಮ್ಮದ್ ಸಿರಾಜ್ (ಭಾರತ)- 643 ರೇಟಿಂಗ್
  10. ಶಾಹೀನ್ ಅಫ್ರಿದಿ (ಪಾಕಿಸ್ತಾನ್)- 635 ರೇಟಿಂಗ್.
Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ