ಐಸಿಸಿ ಏಕದಿನ ಕ್ರಿಕೆಟ್ನ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಒಟ್ಟು 7 ಆಟಗಾರರು ಸ್ಥಾನ ಪಡೆದಿದ್ದಾರೆ. ಅದರಲ್ಲೂ ಏಕದಿನ ಕ್ರಿಕೆಟ್ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಶುಭ್ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ಈ ಬಾರಿಯ ವಿಶ್ವಕಪ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾ ಆಟಗಾರರು ಶ್ರೇಯಾಂಕದಲ್ಲೂ ಮೇಲೇರಿದ್ದು, ಅದರಂತೆ ಬ್ಯಾಟರ್ಗಳ ಟಾಪ್-1- ಪಟ್ಟಿಯಲ್ಲಿ ಮೂವರು ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಇನ್ನು ಬೌಲರ್ಗಳ ಶ್ರೇಯಾಂಕದಲ್ಲಿ ನಾಲ್ವರು ಆಟಗಾರರು ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ.
ಇಲ್ಲಿ ಶುಭ್ಮನ್ ಗಿಲ್ ನಂಬರ್ 1 ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 6ನೇ ಸ್ಥಾನ ಅಲಂಕರಿಸಿದ್ದಾರೆ.
ಹಾಗೆಯೇ ಬೌಲರ್ಗಳ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನವನ್ನು ಅಲಂಕರಿಸಿದರೆ, ಕುಲ್ದೀಪ್ ಯಾದವ್ 4ನೇ ಸ್ಥಾನಕ್ಕೇರಿದ್ದಾರೆ. ಜಸ್ಪ್ರೀತ್ ಬುಮ್ರಾ 8ನೇ ಸ್ಥಾನವನ್ನು ಕಾಯ್ದುಕೊಂಡರೆ, ಮೊಹಮ್ಮದ್ ಶಮಿ ಅಗ್ರ 10 ರಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
Shubman Gill 🤝 Mohammed Siraj
India players claim the 🔝 positions in the latest @MRFWorldwide ICC Men’s ODI Player Rankings 🤩#CWC23 | Details 👇https://t.co/nRyTqAP48u pic.twitter.com/B3DuA4sfYx
— ICC (@ICC) November 8, 2023
ಇದನ್ನೂ ಓದಿ: ಭರ್ಜರಿ ಸೆಂಚುರಿ ಸಿಡಿಸಿ ಮತ್ತೊಂದು ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ
ಏಕದಿನ ವಿಶ್ವಕಪ್ನಲ್ಲಿ ಇನ್ನೂ ಕೆಲ ಪಂದ್ಯಗಳು ಬಾಕಿಯಿದ್ದು, ಹೀಗಾಗಿ ಮುಂದಿನ 2 ವಾರಗಳಲ್ಲಿ ಶ್ರೇಯಾಂಕ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.
Published On - 10:09 pm, Wed, 8 November 23