ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್​-5 ಗೆ ಎಂಟ್ರಿಕೊಟ್ಟ ಶುಭ್​ಮನ್ ಗಿಲ್

ICC ODI Rankings: ಪಾಕ್​ನ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾದ ಶುಭ್​ಮನ್ ಗಿಲ್ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಪಾಕಿಸ್ತಾನದ ಇಮಾಮ್ ಉಲ್ ಹಕ್ ಹಾಗೂ ಫಖರ್ ಝಮಾನ್ ಕ್ರಮವಾಗಿ 3ನೇ ಮತ್ತು 5ನೇ ಸ್ಥಾನದಲ್ಲಿದ್ದಾರೆ.

ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್​-5 ಗೆ ಎಂಟ್ರಿಕೊಟ್ಟ ಶುಭ್​ಮನ್ ಗಿಲ್
Shubman Gill
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 23, 2023 | 3:17 PM

ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಇನ್ನು ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್​ಮನ್ ಗಿಲ್ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.  ಟಾಪ್​-5 ಪಟ್ಟಿಯಲ್ಲಿ ಶುಭ್​ಮನ್​ ಗಿಲ್ ಅವರನ್ನು ಹೊರತುಪಡಿಸಿ ಭಾರತದ ಬೇರೆ ಯಾವುದೇ ಬ್ಯಾಟರ್ ಸ್ಥಾನ ಪಡೆದಿಲ್ಲ. ಹಾಗೆಯೇ ಅಗ್ರ ಹತ್ತರಲ್ಲಿ ವಿರಾಟ್ ಕೊಹ್ಲಿ 9ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಏಷ್ಯಾಕಪ್​ನಲ್ಲಿ ಶ್ರೇಯಾಂಕ ಬದಲಾವಣೆ:

ಏಷ್ಯಾಕಪ್ ಆರಂಭಕ್ಕೆ ಇನ್ನು ವಾರ ಮಾತ್ರ ಉಳಿದಿದೆ. ಹೀಗಾಗಿ ಮುಂದಿನ ಶ್ರೇಯಾಂಕದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆ ಹೆಚ್ಚು. ಏಕೆಂದರೆ ಅಗ್ರ ಹತ್ತರಲ್ಲಿ ಏಷ್ಯಾದ ಐವರು ಬ್ಯಾಟರ್​ಗಳು ಕಾಣಿಸಿಕೊಂಡಿದ್ದಾರೆ.

ಇವರಲ್ಲಿ ಪಾಕ್​ನ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾದ ಶುಭ್​ಮನ್ ಗಿಲ್ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಪಾಕಿಸ್ತಾನದ ಇಮಾಮ್ ಉಲ್ ಹಕ್ ಹಾಗೂ ಫಖರ್ ಝಮಾನ್ ಕ್ರಮವಾಗಿ 3ನೇ ಮತ್ತು 5ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 9ನೇ ಸ್ಥಾನದಲ್ಲಿದ್ದಾರೆ.

ಹೀಗಾಗಿ ಏಷ್ಯಾಕಪ್​ ಮುಕ್ತಾಯದೊಂದಿಗೆ ಐವರು ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಮಹತ್ವದ ಬದಲಾವಣೆಯಂತು ಕಂಡು ಬರಲಿದೆ. ಹಾಗೆಯೇ ಕೆಲ ಆಟಗಾರರು ಟಾಪ್-10 ಗೆ ಎಂಟ್ರಿ ಕೊಡಬಹುದು.

ಐಸಿಸಿ ನೂತನ ಶ್ರೇಯಾಂಕ ಪಟ್ಟಿ:

  1. ಬಾಬರ್ ಆಝಂ (ಪಾಕಿಸ್ತಾನ್)- 880 ರೇಟಿಂಗ್
  2. ರಸ್ಸಿ ವಂಡೆರ್ ಡುಸ್ಸೆನ್ (ಸೌತ್ ಆಫ್ರಿಕಾ)- 777 ರೇಟಿಂಗ್
  3. ಇಮಾಮ್ ಉಲ್ ಹಕ್ (ಪಾಕಿಸ್ತಾನ್)- 752 ರೇಟಿಂಗ್
  4. ಶುಭ್​ಮನ್ ಗಿಲ್ (ಭಾರತ)- 743 ರೇಟಿಂಗ್
  5. ಫಖರ್ ಝಮಾನ್ (ಪಾಕಿಸ್ತಾನ್)- 740 ರೇಟಿಂಗ್
  6. ಹ್ಯಾರಿ ಟೆಕ್ಟರ್ (ಐರ್ಲೆಂಡ್)- 726 ರೇಟಿಂಗ್
  7. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 726 ರೇಟಿಂಗ್
  8. ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 718 ರೇಟಿಂಗ್
  9. ವಿರಾಟ್ ಕೊಹ್ಲಿ (ಭಾರತ)- 705 ರೇಟಿಂಗ್
  10. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 702 ರೇಟಿಂಗ್

ಇದನ್ನೂ ಓದಿ: RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

ಏಷ್ಯಾಕಪ್ ಯಾವಾಗ ಶುರು?

ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಏಕದಿನ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಸೆಣಸಲಿದೆ. ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ತಂಡವನ್ನು ಎದುರಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ನಡೆಯಲಿದೆ.

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್