ವಿಶ್ವಕಪ್ ಗೆಲ್ಲಬೇಕಿದ್ದರೆ ಆಲ್​ರೌಂಡರ್​ಗಳ ಪಾತ್ರ ನಿರ್ಣಾಯಕ

ICC ODI World Cups: 2011 ರಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದಾಗ ಭಾರತದ ಪರ ಆಲ್​ರೌಂಡರ್ ಯುವರಾಜ್ ಸಿಂಗ್ ಅದ್ಭುತ ಪ್ರದರ್ಶನ ನೀಡಿದ್ದರು. ಹಾಗೆಯೇ 1983 ರಲ್ಲಿ ಭಾರತ ವಿಶ್ವಕಪ್​ ಗೆದ್ದಾಗ ಆಲ್​ರೌಂಡರ್ ಕಪಿಲ್ ದೇವ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಈ ಬಾರಿ ಕೂಡ ಆಲ್​ರೌಂಡರ್​ಗಳು ನಿರ್ಣಾಯಕ ಪಾತ್ರವಹಿಸುವ ಸಾಧ್ಯತೆಗಳಿವೆ.

ವಿಶ್ವಕಪ್ ಗೆಲ್ಲಬೇಕಿದ್ದರೆ ಆಲ್​ರೌಂಡರ್​ಗಳ ಪಾತ್ರ ನಿರ್ಣಾಯಕ
Team India
Follow us
| Updated By: ಝಾಹಿರ್ ಯೂಸುಫ್

Updated on: Oct 02, 2023 | 7:09 PM

13ನೇ ಆವೃತ್ತಿಯ ಏಕದಿನ ವಿಶ್ವಕಪ್​  ಆರಂಭಕ್ಕೆ  ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ಕ್ರಿಕೆಟ್ ಕದನದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಕಳೆದ ಬಾರಿಯ ರನ್ನರ್ ಅಪ್ ತಂಡ ನ್ಯೂಝಿಲೆಂಡ್ ಅನ್ನು ಎದುರಿಸಲಿದೆ. ವಿಶೇಷ ಎಂದರೆ ಈ ಪಂದ್ಯದಿಂದಲೇ ಈ ಬಾರಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ 2019 ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಅದೃಷ್ಟದಾಟದಲ್ಲಿ. ಅಂದರೆ ಫೈನಲ್​ ಪಂದ್ಯವು ಟೈ ಆದ ಕಾರಣ ಸೂಪರ್ ಓವರ್ ಆಡಿಸಲಾಗಿತ್ತು. ಆದರೆ ಸೂಪರ್ ಓವರ್ ಕೂಡ ಟೈನಲ್ಲಿ ಅಂತ್ಯ ಕಂಡ ಪರಿಣಾಮ ಅತೀ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಇಂಗ್ಲೆಂಡ್ ಅನ್ನು ವಿಜಯಿ ಎಂದು ಘೋಷಿಸಲಾಯಿತು.

ಹೀಗೆ ಫೈನಲ್ ಪಂದ್ಯದಲ್ಲಿ ಮಿಂಚುವ ಮೂಲಕ ಇಂಗ್ಲೆಂಡ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಆಲ್​ರೌಂಡರ್ ಬೆನ್ ಸ್ಟೋಕ್ಸ್. ಹೀಗಾಗಿಯೇ ಈ ಬಾರಿಯ ವಿಶ್ವಕಪ್ ಗೆಲುವಿನಲ್ಲೂ ಆಲ್​ರೌಂಡರ್​ಗಳು ನಿರ್ಣಾಯಕ ಪಾತ್ರವಹಿಸಲಿದ್ದಾರೆ ಎಂದರೆ ತಪ್ಪಾಗಲಾರದು.

ಏಕೆಂದರೆ 2011 ರ ಟೀಮ್ ಇಂಡಿಯಾದ ವಿಶ್ವಕಪ್ ಗೆಲುವಿನ ರೂವಾರಿ ಆಲ್​ರೌಂಡರ್ ಯುವರಾಜ್ ಸಿಂಗ್. ಹಾಗೆಯೇ 1983 ರಲ್ಲಿ ಭಾರತ ವಿಶ್ವಕಪ್​ ಗೆದ್ದಾಗ ಆಲ್​ರೌಂಡರ್ ಕಪಿಲ್ ದೇವ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಈ ಬಾರಿ ಕೂಡ ಆಲ್​ರೌಂಡರ್​ಗಳು ನಿರ್ಣಾಯಕ ಪಾತ್ರವಹಿಸುವ ಸಾಧ್ಯತೆಗಳಿವೆ. ಇದಕ್ಕೆ ಸಾಕ್ಷಿಯಾಗಿ ಕಳೆದ 8 ವಿಶ್ವಕಪ್​ಗಳಲ್ಲಿ ಪ್ಲೇಯರ್​ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದ ಆಟಗಾರರಲ್ಲಿ ಮೂವರು ಆಲ್​ರೌಂಡರ್​ಗಳಿದ್ದಾರೆ. ಮತ್ತಿಬ್ಬರು ಪಾರ್ಟ್​ ಟೈಮ್ ಆಲ್​ರೌಂಡರ್​ ರೂಪದಲ್ಲಿ ತಂಡಕ್ಕೆ ನೆರವಾಗಿದ್ದರು ಎಂಬುದು ವಿಶೇಷ.

1996 ರಲ್ಲಿ ಶ್ರೀಲಂಕಾ ಚೊಚ್ಚಲ ವಿಶ್ವಕಪ್ ಗೆದ್ದಾಗ ಆಲ್​ರೌಂಡರ್ ಸನತ್ ಜಯಸೂರ್ಯ 221 ರನ್ ಮತ್ತು 7 ವಿಕೆಟ್ ಕಬಳಿಸಿದ್ದರು. ಇನ್ನು 1999 ರಲ್ಲಿ ಸೌತ್ ಆಫ್ರಿಕಾ ತಂಡ ಸೆಮಿಫೈನಲ್​ನಲ್ಲಿ 1 ರನ್​ಗಳಿಂದ ಸೋತಿತ್ತು. ಅಂದು ಸೌತ್ ಆಫ್ರಿಕಾ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಲ್​ರೌಂಡರ್ ಲ್ಯಾನ್ಸ್ ಕ್ಲೂಸೆನರ್ (281 ರನ್ ಮತ್ತು 17 ವಿಕೆಟ್) ಅವರಿಗೆ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ನೀಡಲಾಗಿತ್ತು.

ಇನ್ನು 2003 ರಲ್ಲಿ ಟೀಮ್ ಇಂಡಿಯಾ ಫೈನಲ್​ಗೇರುವಲ್ಲಿ ಸಚಿನ್ ತೆಂಡೂಲ್ಕರ್ ಪ್ರಮುಖ ಪಾತ್ರವಹಿಸಿದ್ದರು. ಇಲ್ಲಿ ಸಚಿನ್ ಪಾರ್ಟ್ ಟೈಮ್​ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. ಅಂದರೆ 673 ರನ್​ಗಳನ್ನು ಕಲೆಹಾಕಿದ್ದ ಮಾಸ್ಟರ್ ಬ್ಲಾಸ್ಟರ್​ ಕೆಲ ಪಂದ್ಯಗಳಲ್ಲಿ ಬೌಲಿಂಗ್ ಕೂಡ ಮಾಡಿದ್ದರು. ಅಷ್ಟೇ ಅಲ್ಲದೆ 2 ವಿಕೆಟ್ ಕಬಳಿಸಿದ್ದರು.

ಹಾಗೆಯೇ 2011 ರ ವಿಶ್ವ ಚಾಂಪಿಯನ್ ಭಾರತದ ಪರ ಯುವರಾಜ್ ಸಿಂಗ್ ಅದ್ಭುತ ಪ್ರದರ್ಶನ ನೀಡಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಮಿಂಚಿದ್ದ ಯುವಿ 362 ರನ್ ಮತ್ತು 15 ವಿಕೆಟ್​ಗಳನ್ನು ಕಬಳಿಸಿದ್ದರು. 2019 ರಲ್ಲಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದ ಕೇನ್ ವಿಲಿಯಮ್ಸನ್ ಕೂಡ ಪಾರ್ಟ್​ ಟೈಮ್ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದರು.  ವಿಲಿಯಮ್ಸನ್ ಒಟ್ಟು 578 ರನ್ ಕಲೆಹಾಕಿದ್ದಲ್ಲದೆ, ಕೆಲ ಪಂದ್ಯಗಳಲ್ಲಿ ಬೌಲಿಂಗ್ ಕೂಡ ಮಾಡಿದ್ದರು. ಈ ವೇಳೆ 2 ವಿಕೆಟ್ ಕಬಳಿಸಿ ತಂಡದ ಗೆಲುವಿನ ಪ್ರಮುಖ ಪಾತ್ರವಹಿಸಿದ್ದರು.

ಅಂದರೆ ಕಳೆದ 8 ವಿಶ್ವಕಪ್​ಗಳಲ್ಲಿ 5 ಬಾರಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಒಲಿದಿರುವುದು ಆಲ್​ರೌಂಡರ್​ ಪ್ರದರ್ಶನ ನೀಡಿದ ಆಟಗಾರರಿಗೆ. ಹೀಗಾಗಿ ಈ ಬಾರಿ ಭಾರತ ವಿಶ್ವಕಪ್ ಗೆಲ್ಲಬೇಕಿದ್ದರೆ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅವರ ಪ್ರದರ್ಶನ ನಿರ್ಣಾಯಕವಾಗಬಹುದು.

ಇದನ್ನೂ ಓದಿ: ICC World Cup 2023: 5 ತಂಡಗಳ ಏಕದಿನ ವಿಶ್ವಕಪ್ ಜೆರ್ಸಿ ಅನಾವರಣ

ಏಕೆಂದರೆ ಈ ಇಬ್ಬರು ಆಲ್​ರೌಂಡರ್​ಗಳು ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರು. ಅದರಲ್ಲೂ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುವ ನಿರೀಕ್ಷೆಯಿದೆ. ಈ ಮೂಲಕ ಟೀಮ್ ಇಂಡಿಯಾಗೆ ಮೂರನೇ ಬಾರಿ ವಿಶ್ವ ಕಿರೀಟ ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು