ICC Rankings: 3 ಮಾದರಿಯಲ್ಲೂ ಪಾಕ್ ವೇಗಿಯದ್ದೇ ಕಾರುಬಾರು! ಟಾಪ್ 10ರಲ್ಲಿ ಭಾರತೀಯರು ವಿರಳ

ICC Rankings: ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತದ ಸ್ಥಾನವನ್ನು ನೋಡಿದರೆ, ಅಗ್ರ-10 ರಲ್ಲಿರುವ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್. ಈ ಮಾದರಿಯಲ್ಲಿ ಬೌಲರ್‌ಗಳ ಶ್ರೇಯಾಂಕದ ಟಾಪ್-10 ರಲ್ಲಿ ಯಾವುದೇ ಭಾರತೀಯ ಇಲ್ಲ. ಆಲ್ ರೌಂಡರ್​ಗಳ ರ‍್ಯಾಂಕಿಂಗ್‌ನಲ್ಲೂ ಅದೇ ಕತೆ.

ICC Rankings: 3 ಮಾದರಿಯಲ್ಲೂ ಪಾಕ್ ವೇಗಿಯದ್ದೇ ಕಾರುಬಾರು! ಟಾಪ್ 10ರಲ್ಲಿ ಭಾರತೀಯರು ವಿರಳ
ಶಾಹೀನ್ ಶಾ ಅಫ್ರಿದಿ
Follow us
TV9 Web
| Updated By: ಪೃಥ್ವಿಶಂಕರ

Updated on:Apr 13, 2022 | 5:09 PM

ಪಾಕಿಸ್ತಾನದ ಯುವ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ (Shaheen Shah Afridi) ಬುಧವಾರ ಬಿಡುಗಡೆಯಾದ ಐಸಿಸಿ ಟಿ20 ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ (ICC T20 bowlers’ rankings) ಅಗ್ರ-10 ರಲ್ಲಿ ಸ್ಥಾನ ಗಳಿಸಿದ್ದಾರೆ. ಇತ್ತೀಚೆಗಷ್ಟೇ ಆಸ್ಟ್ರೇಲಿಯ ವಿರುದ್ಧ ಆಡಿದ ಏಕೈಕ ಟಿ20 ಪಂದ್ಯದ ಬಳಿಕ ನಾಲ್ಕು ಸ್ಥಾನ ಮೇಲಕ್ಕೇರಿ ಟಾಪ್-10ರಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಇನ್ನೂ ಐದು ಎಸೆತಗಳು ಬಾಕಿ ಇರುವಂತೆಯೇ ಜಯ ಸಾಧಿಸಿತು. ಅಫ್ರಿದಿ ಎಲ್ಲಾ ಮೂರು ಮಾದರಿಗಳಲ್ಲಿ ಟಾಪ್-10 ರಲ್ಲಿದ್ದಾರೆ. ಅವರು ಟೆಸ್ಟ್‌ನಲ್ಲಿ ನಾಲ್ಕನೇ ಮತ್ತು ಏಕದಿನದಲ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಈ ಪಂದ್ಯದಲ್ಲಿ ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ತಂಡದಲ್ಲಿ ಇರಲಿಲ್ಲ ಆದರೆ. ಮೂರು ಸ್ಥಾನ ಕಳೆದುಕೊಂಡಿರುವ ಅವರು ಈಗ ಮೂರನೇ ಸ್ಥಾನದಲ್ಲಿದ್ದಾರೆ. ಆದಿಲ್ ರಶೀದ್ ಎರಡನೇ ಸ್ಥಾನದಲ್ಲಿದ್ದಾರೆ.

ಮಾರ್ಚ್‌ನಲ್ಲಿ ಐಸಿಸಿ ತಿಂಗಳ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ, ಮೊಹಮ್ಮದ್ ರಿಜ್ವಾನ್ ಒಂದು ಸ್ಥಾನ ಕುಸಿದು ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಅದೇ ಸಮಯದಲ್ಲಿ, ಐಡೆನ್ ಮಾರ್ಕ್ರಾಮ್ ಎರಡನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಶ್ರೇಯಾಂಕದಲ್ಲಿ ಈ ಬದಲಾವಣೆ ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿ ಮುಕ್ತಾಯವಾಗಿದ್ದು, ಈ ಸರಣಿಯ ನಂತರ ಟೆಸ್ಟ್ ಶ್ರೇಯಾಂಕದಲ್ಲೂ ಕೆಲವು ಬದಲಾವಣೆಗಳಾಗಿವೆ. ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಈ ಸರಣಿಯನ್ನು ಅಲುಗಾಡಿಸಿರುವ ಕೇಶವ್ ಮಹಾರಾಜ್ ಅವರಿಗೆ ದೊಡ್ಡ ಲಾಭವಾಗಿದೆ. ಬೌಲರ್‌ಗಳ ಶ್ರೇಯಾಂಕದಲ್ಲಿ ಅವರು 21ನೇ ಸ್ಥಾನಕ್ಕೆ ಬಂದಿದ್ದಾರೆ. ಇದೇ ವೇಳೆ ಆಲ್​ರೌಂಡರ್​ಗಳ ಶ್ರೇಯಾಂಕದಲ್ಲಿ ಸಖತ್ ಲಾಭ ಪಡೆದು 13ನೇ ಸ್ಥಾನಕ್ಕೆ ತಲುಪಿದ್ದಾರೆ. ಕೇಶವ್ ಎರಡು ಟೆಸ್ಟ್ ಪಂದ್ಯಗಳಲ್ಲಿ 16 ವಿಕೆಟ್‌ಗಳನ್ನು ಪಡೆಯುವುದರ ಜೊತೆಗೆ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಗೂ ಭಾಜನರಾಗಿದ್ದರು. ಇವರೊಂದಿಗೆ ಸಹ ಸ್ಪಿನ್ನರ್ ಸೈಮನ್ ಹಾರ್ಮರ್ ಕೂಡ ಲಾಭ ಗಳಿಸಿದ್ದು, 26 ಸ್ಥಾನ ಮೇಲೇರಿ 54ನೇ ಸ್ಥಾನಕ್ಕೆ ತಲುಪಿದ್ದಾರೆ.

ಇದು ಭಾರತದ ಆಟಗಾರರ ಸ್ಥಿತಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತದ ಸ್ಥಾನವನ್ನು ನೋಡಿದರೆ, ಅಗ್ರ-10 ರಲ್ಲಿರುವ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್. ಈ ಮಾದರಿಯಲ್ಲಿ ಬೌಲರ್‌ಗಳ ಶ್ರೇಯಾಂಕದ ಟಾಪ್-10 ರಲ್ಲಿ ಯಾವುದೇ ಭಾರತೀಯ ಇಲ್ಲ. ಆಲ್ ರೌಂಡರ್​ಗಳ ರ‍್ಯಾಂಕಿಂಗ್‌ನಲ್ಲೂ ಅದೇ ಕತೆ. ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾ 8ನೇ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಶ್ರೇಯಾಂಕದಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್ ಆಲ್ ರೌಂಡರ್ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಟಾಪ್-10ರಲ್ಲಿ ಬೇರೆ ಯಾವ ಆಟಗಾರನೂ ಇಲ್ಲ.

ಇದನ್ನೂ ಓದಿ:IPL 2022: 5 ಇನ್ನಿಂಗ್ಸ್, ಕೇವಲ 107 ರನ್! ನಾಯಕತ್ವದಿಂದ ಕೆಳಗಿಳಿದರೂ ಬದಲಾಗಲಿಲ್ಲ ಕೊಹ್ಲಿ ಹಣೆಬರಹ

Published On - 5:09 pm, Wed, 13 April 22

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ