ICC Rankings: ಐಸಿಸಿ ರ‍್ಯಾಂಕಿಂಗ್ ಪ್ರಕಟ: ಅಗ್ರಸ್ಥಾನದಲ್ಲಿ ಐವರು ಭಾರತೀಯರು

ICC Rankings 2023: ಟೆಸ್ಟ್ ಬೌಲರ್​ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಟಾಪ್-1 ನಲ್ಲಿದ್ದರೆ, ಟೆಸ್ಟ್ ಆಲ್​ರೌಂಡರ್​​ಗಳ ರ‍್ಯಾಂಕಿಂಗ್​ನಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಟಿ20 ಬೌಲರ್​ಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ರವಿ ಬಿಷ್ಣೋಯ್ ಮೊದಲ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ICC Rankings: ಐಸಿಸಿ ರ‍್ಯಾಂಕಿಂಗ್ ಪ್ರಕಟ: ಅಗ್ರಸ್ಥಾನದಲ್ಲಿ ಐವರು ಭಾರತೀಯರು
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 06, 2023 | 6:05 PM

ಐಸಿಸಿ ನೂತನ ರ‍್ಯಾಂಕಿಂಗ್ (ICC Rankings) ಪಟ್ಟಿಯನ್ನು ಪ್ರಕಟಿಸಿದೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು ಅಗ್ರಸ್ಥಾನದಲ್ಲಿರುವುದು ವಿಶೇಷ. ಅಂದರೆ ಇಲ್ಲಿ ಏಕದಿನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಶುಭ್​ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದರೆ, ಟಿ20 ಕ್ರಿಕೆಟ್​ ಬ್ಯಾಟರ್​ಗಳ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನು ಟೆಸ್ಟ್ ಬೌಲರ್​ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಟಾಪ್-1 ನಲ್ಲಿದ್ದರೆ, ಟೆಸ್ಟ್ ಆಲ್​ರೌಂಡರ್​​ಗಳ ರ‍್ಯಾಂಕಿಂಗ್​ನಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಟಿ20 ಬೌಲರ್​ಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ರವಿ ಬಿಷ್ಣೋಯ್ ಮೊದಲ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಯುವ ಸ್ಪಿನ್ನರ್ ಇದೀಗ ಅಫ್ಘಾನಿಸ್ತಾನದ ರಶೀದ್ ಖಾನ್​ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ.

ಇದಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 223 ರನ್​ಗಳನ್ನು ಬಾರಿಸಿ ಅಬ್ಬರಿಸಿದ್ದ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್​ ರ‍್ಯಾಂಕಿಂಗ್​ನಲ್ಲಿ 7ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟಿ20 ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದಾರೆ. ಅದರಂತೆ ಐಸಿಸಿಯ ನೂತನ ಟಾಪ್-10 ರ‍್ಯಾಂಕಿಂಗ್​ನಲ್ಲಿರುವ ಭಾರತೀಯ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.

ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್:

  • ಸೂರ್ಯಕುಮಾರ್ ಯಾದವ್ (1ನೇ ಸ್ಥಾನ)
  • ರುತುರಾಜ್ ಗಾಯಕ್ವಾಡ್ (7ನೇ ಸ್ಥಾನ)

ಟಿ20 ಬೌಲರ್​ಗಳ ರ‍್ಯಾಂಕಿಂಗ್:

  • ರವಿ ಬಿಷ್ಣೋಯ್ (1ನೇ ಸ್ಥಾನ)

ಟಿ20 ಆಲ್​ರೌಂಡರ್​ಗಳ ರ‍್ಯಾಂಕಿಂಗ್:

  • ಹಾರ್ದಿಕ್ ಪಾಂಡ್ಯ (3ನೇ ಸ್ಥಾನ)

ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್:

  • ಶುಭ್​ಮನ್ ಗಿಲ್ (1ನೇ ಸ್ಥಾನ)
  • ವಿರಾಟ್ ಕೊಹ್ಲಿ (3ನೇ ಸ್ಥಾನ)
  • ರೋಹಿತ್ ಶರ್ಮಾ (4ನೇ ಸ್ಥಾನ)

ಟೆಸ್ಟ್​ ಬ್ಯಾಟರ್​ಗಳ ರ‍್ಯಾಂಕಿಂಗ್:

  •  ರೋಹಿತ್ ಶರ್ಮಾ (10ನೇ ಸ್ಥಾನ)

ಟೆಸ್ಟ್​ ಬೌಲರ್​ಗಳ ರ‍್ಯಾಂಕಿಂಗ್:

  • ರವಿಚಂದ್ರನ್ ಅಶ್ವಿನ್ (1ನೇ ಸ್ಥಾನ)
  • ರವೀಂದ್ರ ಜಡೇಜಾ (3ನೇ ಸ್ಥಾನ)

ಇದನ್ನೂ ಓದಿ: VIDEO: ಚೆಂಡನ್ನು ಮುಟ್ಟಿ ಔಟಾದ ಮುಶ್ಫಿಕುರ್ ರಹೀಮ್

ಟೆಸ್ಟ್​ ಆಲ್​ರೌಂಡರ್​ಗಳ ರ‍್ಯಾಂಕಿಂಗ್:

  • ರವೀಂದ್ರ ಜಡೇಜಾ (1ನೇ ಸ್ಥಾನ)
  • ರವಿಚಂದ್ರನ್ ಅಶ್ವಿನ್ (2ನೇ ಸ್ಥಾನ)
  • ಅಕ್ಷರ್ ಪಟೇಲ್ (5ನೇ ಸ್ಥಾನ)

Published On - 3:03 pm, Wed, 6 December 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್