ಐಸಿಸಿ ನೂತನ ರ‍್ಯಾಂಕಿಂಗ್ (ICC Rankings) ಪಟ್ಟಿಯನ್ನು ಪ್ರಕಟಿಸಿದೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು ಅಗ್ರಸ್ಥಾನದಲ್ಲಿರುವುದು ವಿಶೇಷ. ಅಂದರೆ ಇಲ್ಲಿ ಏಕದಿನ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಶುಭ್ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದರೆ, ಟಿ20 ಕ್ರಿಕೆಟ್ ಬ್ಯಾಟರ್ಗಳ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು ಟೆಸ್ಟ್ ಬೌಲರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಟಾಪ್-1 ನಲ್ಲಿದ್ದರೆ, ಟೆಸ್ಟ್ ಆಲ್ರೌಂಡರ್ಗಳ ರ್ಯಾಂಕಿಂಗ್ನಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಟಿ20 ಬೌಲರ್ಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ರವಿ ಬಿಷ್ಣೋಯ್ ಮೊದಲ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಯುವ ಸ್ಪಿನ್ನರ್ ಇದೀಗ ಅಫ್ಘಾನಿಸ್ತಾನದ ರಶೀದ್ ಖಾನ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ.
ಇದಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 223 ರನ್ಗಳನ್ನು ಬಾರಿಸಿ ಅಬ್ಬರಿಸಿದ್ದ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್ ರ್ಯಾಂಕಿಂಗ್ನಲ್ಲಿ 7ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟಿ20 ಆಲ್ರೌಂಡರ್ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದಾರೆ. ಅದರಂತೆ ಐಸಿಸಿಯ ನೂತನ ಟಾಪ್-10 ರ್ಯಾಂಕಿಂಗ್ನಲ್ಲಿರುವ ಭಾರತೀಯ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.
ಇದನ್ನೂ ಓದಿ: VIDEO: ಚೆಂಡನ್ನು ಮುಟ್ಟಿ ಔಟಾದ ಮುಶ್ಫಿಕುರ್ ರಹೀಮ್
Published On - 3:03 pm, Wed, 6 December 23