AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಭಾರತ- ಪಾಕ್ ಮುಖಾಮುಖಿ ಯಾವಾಗ?

Champions Trophy Schedule: 2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಅಂತಿಮವಾಗಿ ಬಿಡುಗಡೆ ಮಾಡಿದೆ. ಫೆಬ್ರವರಿ 19 ರಿಂದ ಟೂರ್ನಿ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ. ಮಾರ್ಚ್ 9 ರಂದು ಫೈನಲ್ ನಡೆಯಲಿದೆ. ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಭಾರತ- ಪಾಕ್ ಮುಖಾಮುಖಿ ಯಾವಾಗ?
ಚಾಂಪಿಯನ್ಸ್ ಟ್ರೋಫಿ
ಪೃಥ್ವಿಶಂಕರ
|

Updated on:Dec 24, 2024 | 7:25 PM

Share

2025 ರಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ವಾಸ್ತವವಾಗಿ ಈ ಟೂರ್ನಿಯ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಪಂದ್ಯಾವಳಿಯ ಆಯೋಜನೆಗೆ ಸಂಬಂಧಿಸಿದಂತೆ ಭಾರತ ಹಾಗೂ ಆತಿಥೇಯ ಪಾಕಿಸ್ತಾನದ ನಡುವೆ ಉಂಟಾಗಿದ್ದ ಗೊಂದಲಗಳಿಂದಾಗಿ ಈ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗಿರಲಿಲ್ಲ. ಕೊನೆಗೂ ಈ ಎರಡೂ ದೇಶಗಳ ಬೇಡಿಕೆಯಂತೆಯೇ ಪಂದ್ಯಾವಳಿಯನ್ನು ಆಯೋಜಿಸುವ ನಿರ್ಧಾರಕ್ಕೆ ಬಂದಿದ್ದ ಐಸಿಸಿ ಇದೀಗ ಈ ಮಹತ್ವದ ಟೂರ್ನಿಯ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಈ ಟೂರ್ನಿಯು ಫೆಬ್ರವರಿ 19 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ. ಮಾರ್ಚ್ 9 ರಂದು ಫೈನಲ್ ನಡೆಯಲಿದೆ. ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಇದಲ್ಲದೆ ಇಡೀ ಟೂರ್ನಿಯ ಹೈವೋಲ್ಟೇಜ್ ಕದನವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು ನಡೆಯಲಿದೆ.

ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ದಿನಾಂಕ ಮುಖಾಮುಖಿ ಸ್ಥಳ
19 ಫೆಬ್ರವರಿ, 2025 ಪಾಕಿಸ್ತಾನ vs ನ್ಯೂಜಿಲೆಂಡ್ ಕರಾಚಿ
20 ಫೆಬ್ರವರಿ, 2025 ಭಾರತ vs ಬಾಂಗ್ಲಾದೇಶ ದುಬೈ
21 ಫೆಬ್ರವರಿ, 2025 ಅಫ್ಘಾನಿಸ್ತಾನ vs ದಕ್ಷಿಣ ಆಫ್ರಿಕಾ ಕರಾಚಿ
22 ಫೆಬ್ರವರಿ, 2025 ಆಸ್ಟ್ರೇಲಿಯಾ vs ಇಂಗ್ಲೆಂಡ್ ಲಾಹೋರ್
23 ಫೆಬ್ರವರಿ, 2025 ಪಾಕಿಸ್ತಾನ vs ಭಾರತ ದುಬೈ
24 ಫೆಬ್ರವರಿ, 2025 ಬಾಂಗ್ಲಾದೇಶ vs ನ್ಯೂಜಿಲೆಂಡ್ ರಾವಲ್ಪಿಂಡಿ
25 ಫೆಬ್ರವರಿ, 2025 ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ ರಾವಲ್ಪಿಂಡಿ
26 ಫೆಬ್ರವರಿ, 2025 ಅಫ್ಘಾನಿಸ್ತಾನ vs ಇಂಗ್ಲೆಂಡ್ ಲಾಹೋರ್
27 ಫೆಬ್ರವರಿ, 2025 ಪಾಕಿಸ್ತಾನ vs ಬಾಂಗ್ಲಾದೇಶ ರಾವಲ್ಪಿಂಡಿ
28 ಫೆಬ್ರವರಿ, 2025 ಅಫ್ಘಾನಿಸ್ತಾನ vs ಆಸ್ಟ್ರೇಲಿಯಾ ಲಾಹೋರ್
ಮಾರ್ಚ್ 1, 2025 ದಕ್ಷಿಣ ಆಫ್ರಿಕಾ vs ಇಂಗ್ಲೆಂಡ್ ಕರಾಚಿ
ಮಾರ್ಚ್ 2, 2025 ನ್ಯೂಜಿಲೆಂಡ್ vs ಭಾರತ ದುಬೈ
ಮಾರ್ಚ್ 4, 2025 ಸೆಮಿಫೈನಲ್ 1 ದುಬೈ
ಮಾರ್ಚ್ 5, 2025 ಸೆಮಿಫೈನಲ್ 2 ಲಾಹೋರ್
ಮಾರ್ಚ್ 9, 2025 ಫೈನಲ್ ಲಾಹೋರ್/ದುಬೈ

ಗಮನಿಸಬೇಕಾದ ಪ್ರಮುಖ ಅಂಶಗಳು

  • ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳಿದ್ದರೆ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ಬಿ ಗುಂಪಿನಲ್ಲಿವೆ.
  • ಭಾರತ ತಂಡ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ತಂಡ ಫೈನಲ್ ತಲುಪಿದರೆ ಅದು ಕೂಡ ಲಾಹೋರ್ ಬದಲು ದುಬೈನಲ್ಲೇ ನಡೆಯಲಿದೆ.
  • ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಮಾರ್ಚ್ 9 ರಂದು ಫೈನಲ್ ನಡೆಯದಿದ್ದರೆ, ಮಾರ್ಚ್ 10 ರಂದು ಪಂದ್ಯ ನಡೆಯಲಿದೆ.
  • ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಯಾವುದೇ ಮೀಸಲು ದಿನವನ್ನು ಇರಿಸಲಾಗಿಲ್ಲ.
  • ಚಾಂಪಿಯನ್ಸ್ ಟ್ರೋಫಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Tue, 24 December 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ