WTC Final 2025: ಡಬ್ಲ್ಯುಟಿಸಿ ಫೈನಲ್ ವಿಜೇತರಿಗೆ ದಾಖಲೆ ಮೊತ್ತದ ಬಹುಮಾನ; ಜಯ್​ ಶಾ ಘೋಷಣೆ

WTC Final 2025 Prize Money: ಜೂನ್ 11 ರಿಂದ ಲಾರ್ಡ್ಸ್‌ನಲ್ಲಿ ನಡೆಯಲಿರುವ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಆಸ್ಟ್ರೇಲಿಯಾ ತನ್ನ ಚಾಂಪಿಯನ್‌ ಪಟ್ಟ ಉಳಿಸಿಕೊಳ್ಳಲು ಪ್ರಯತ್ನಿಸಿದರೆ, ದಕ್ಷಿಣ ಆಫ್ರಿಕಾ ತಂಡ ಐಸಿಸಿ ಟ್ರೋಫಿ ಗೆಲ್ಲುವ ಆಸೆಯಲ್ಲಿದೆ. ಈ ಬಾರಿ ಚಾಂಪಿಯನ್ ತಂಡಕ್ಕೆ 3.6 ಮಿಲಿಯನ್ ಡಾಲರ್ ಮತ್ತು ರನ್ನರ್ ಅಪ್ ತಂಡಕ್ಕೆ 2.16 ಮಿಲಿಯನ್ ಡಾಲರ್ ಬಹುಮಾನ ಘೋಷಿಸಲಾಗಿದೆ.

WTC Final 2025: ಡಬ್ಲ್ಯುಟಿಸಿ ಫೈನಲ್ ವಿಜೇತರಿಗೆ ದಾಖಲೆ ಮೊತ್ತದ ಬಹುಮಾನ; ಜಯ್​ ಶಾ ಘೋಷಣೆ
Wtc Final 2025

Updated on: May 15, 2025 | 3:03 PM

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ (World Test Championship Final) ಪಂದ್ಯ ಇದೇ ಜೂನ್ 11 ರಿಂದ ಕ್ರಿಕೆಟ್ ಕಾಶಿ ಲಾರ್ಡ್ಸ್‌ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ (SA vs AUS) ನಡುವೆ ನಡೆಯಲಿದೆ. ಉಭಯ ತಂಡಗಳಲ್ಲಿ ಆಸ್ಟ್ರೇಲಿಯಾಕ್ಕೆ ಇದು ಎರಡನೇ ಭಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಆಗಿದ್ದರೆ, ಇತ್ತ ದಕ್ಷಿಣ ಆಫ್ರಿಕಾ ತಂಡ ಇದೇ ಮೊದಲ ಬಾರಿಗೆ ಡಬ್ಲ್ಯುಟಿಸಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಕಳೆದ ಆವೃತ್ತಿಯ ಫೈನಲ್​ನಲ್ಲಿ ಭಾರತವನ್ನು ಮಣಿಸಿ ಚಾಂಪಿಯನ್‌ಶಿಪ್‌ ಗೆದ್ದಿದ್ದ ಆಸ್ಟ್ರೇಲಿಯಾ ತನ್ನ ಚಾಂಪಿಯನ್‌ ಪಟ್ಟವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೆ, ಇತ್ತ ದಕ್ಷಿಣ ಆಫ್ರಿಕಾ ತಂಡ ಈ ಬಾರಿಯಾದರೂ ಐಸಿಸಿ ಟ್ರೋಫಿ ಬರವನ್ನು ನೀಗಿಸಿಕೊಳ್ಳುವ ಇರಾದೆಯಲ್ಲಿದೆ. ಆದರೆ ಅದಕ್ಕೂ ಮುನ್ನ ಐಸಿಸಿ (ICC), ಬಹುಮಾನದ ಮೊತ್ತ ಘೋಷಿಸಿದ್ದು, ಈ ಬಾರಿಯ ಚಾಂಪಿಯನ್‌ ತಂಡಕ್ಕೆ ಭಾರಿ ಮೊತ್ತದ ಬಹುಮಾನ ಸಿಗಲಿದೆ.

ಬಹುಮಾನ ಮೊತ್ತ ಘೋಷಣೆ

ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಗೆಲ್ಲುವ ಹಾಗೂ ರನ್ನರ್ ಅಪ್ ತಂಡಕ್ಕೆ ಭರ್ಜರಿ ಬಹುಮಾನ ಸಿಗಲಿದೆ. ಏಕೆಂದರೆ ಐಸಿಸಿ ಈ ಬಾರಿ ಚಾಂಪಿಯನ್‌ ತಂಡಕ್ಕೆ ನೀಡುವ ಬಹುಮಾನದ ಮೊತ್ತದಲ್ಲಿ ಶೇ. 125 ರಷ್ಟು ಹೆಚ್ಚಳ ಮಾಡಿದ್ದರೆ, ರನ್ನರ್ ಅಪ್ ತಂಡದ ಬಹುಮಾನದ ಮೊತ್ತದಲ್ಲೂ ಶೇ. 162.5 ರಷ್ಟು ಹೆಚ್ಚಳವಾಗಿದೆ. ಆ ಪ್ರಕಾರ, ಈ ಬಾರಿಯ ಚಾಂಪಿಯನ್‌ ತಂಡಕ್ಕೆ 3.6 ಮಿಲಿಯನ್ ಡಾಲರ್ ಅಂದರೆ ಭಾರತೀಯ ರೂಪಾಯಿಯಲ್ಲಿ ಸುಮಾರು 30.82 ಕೋಟಿ ರೂ. ಬಹುಮಾನ ಸಿಗಲಿದೆ. ಹಾಗೆಯೇ ರನ್ನರ್ ಅಪ್ ತಂಡವು 2.16 ಮಿಲಿಯನ್ ಡಾಲರ್ ಅಂದರೆ ಭಾರತೀಯ ರೂಪಾಯಿಯಲ್ಲಿ 18.46 ಕೋಟಿ ರೂ. ಬಹುಮಾನವನ್ನು ಪಡೆಯಲಿದೆ.

ಉಭಯ ತಂಡಗಳು

ದಕ್ಷಿಣ ಆಫ್ರಿಕಾ ತಂಡ: ಟೋನಿ ಡಿ ಜೋರ್ಜಿ, ರಯಾನ್ ರಿಕಲ್ಟನ್, ಐಡೆನ್ ಮಾರ್ಕ್ರಾಮ್, ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್, ವಿಯಾನ್ ಮುಲ್ಡರ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಡೇನ್ ಪ್ಯಾಟರ್ಸನ್, ಕೇಶವ್ ಮಹಾರಾಜ್, ಸೆನುರನ್ ಮುತ್ತುಸಾಮಿ.

ENG vs IND: ರೋಹಿತ್- ಕೊಹ್ಲಿ ನಿವೃತ್ತಿ; ಇಂಗ್ಲೆಂಡ್ ಪ್ರವಾಸಕ್ಕೆ ಹೇಗಿರಲಿದೆ ಭಾರತ ಟೆಸ್ಟ್ ತಂಡ?

ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ಸ್ಯಾಮ್ ಕಾನ್‌ಸ್ಟಾಸ್, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್, ಬ್ಯೂ ವೆಬ್‌ಸ್ಟರ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್‌ವುಡ್, ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್, ಮ್ಯಾಟ್ ಕುಹ್ನೆಮನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Thu, 15 May 25