Breaking: ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವ ರದ್ದುಗೊಳಿಸಿದ ಐಸಿಸಿ! ಕಾರಣವೇನು ಗೊತ್ತಾ?

Sri Lanka Cricket: ಏಕದಿನ ವಿಶ್ವಕಪ್ ನಡುವೆಯೇ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭಾರತದ ನೆರೆಯ ರಾಷ್ಟ್ರವಾದ ಶ್ರೀಲಂಕಾದ ಕ್ರಿಕೆಟ್ ಸದಸ್ಯತ್ವವನ್ನು ರದ್ದುಗೊಳಿಸಿದೆ. ಇದರಿಂದಾಗಿ ಈಗ ಈ ತಂಡಕ್ಕೆ ಇನ್ನು ಮುಂದೆ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಸಾಧ್ಯವಾಗುವುದಿಲ್ಲ ಎಂಬುದು ಆಘಾತಕ್ಕಾರಿ ಸಂಗತಿಯಾಗಿದೆ.

Breaking: ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವ ರದ್ದುಗೊಳಿಸಿದ ಐಸಿಸಿ! ಕಾರಣವೇನು ಗೊತ್ತಾ?
ಶ್ರೀಲಂಕಾ ಕ್ರಿಕೆಟ್ ತಂಡImage Credit source: insidesport
Follow us
ಪೃಥ್ವಿಶಂಕರ
|

Updated on:Nov 10, 2023 | 10:26 PM

ಏಕದಿನ ವಿಶ್ವಕಪ್ (ICC World Cup 2023) ನಡುವೆಯೇ ಐಸಿಸಿ (ICC) ಮಹತ್ವದ ನಿರ್ಧಾರ ಕೈಗೊಂಡಿದ್ದು, ಭಾರತದ ನೆರೆಯ ರಾಷ್ಟ್ರವಾದ ಶ್ರೀಲಂಕಾದ ಕ್ರಿಕೆಟ್ (Sri Lanka Cricket) ಸದಸ್ಯತ್ವವನ್ನು ರದ್ದುಗೊಳಿಸಿದೆ. ಇದರಿಂದಾಗಿ ಈಗ ಈ ತಂಡಕ್ಕೆ ಇನ್ನು ಮುಂದೆ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಸಾಧ್ಯವಾಗುವುದಿಲ್ಲ ಎಂಬುದು ಆಘಾತಕ್ಕಾರಿ ಸಂಗತಿಯಾಗಿದೆ. ಐಸಿಸಿ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಶುಕ್ರವಾರ ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಶ್ರೀಲಂಕಾ ಸರ್ಕಾರ, ಕ್ರಿಕೆಟ್ ಮಂಡಳಿಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಐಸಿಸಿ ಸಭೆಯಲ್ಲಿ ಕಂಡುಬಂದಿದೆ. ಇದು ಐಸಿಸಿ ನಿಯಮಗಳಿಗೆ ವಿರುದ್ಧವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಐಸಿಸಿ ಈ ದೊಡ್ಡ ನಿರ್ಧಾರ ಕೈಗೊಂಡಿದೆ.

ವಾಸ್ತವವಾಗಿ ಈ ಬಾರಿಯ ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡ, ಭಾರತದ ವಿರುದ್ಧ 302 ರನ್‌ಗಳಿಂದ ಹೀನಾಯ ಸೋಲು ಕಂಡಿತ್ತು. ಆ ಬಳಿಕ ಶ್ರೀಲಂಕಾ ಸರ್ಕಾರವು ಇಡೀ ಮಂಡಳಿಯನ್ನು ವಜಾಗೊಳಿಸಿತು. ಕ್ರೀಡಾ ಸಚಿವ ರೋಷನ್ ರಣಸಿಂಗ್ ಅವರು ಈ ನಿರ್ಧಾರ ಕೈಗೊಂಡಿದ್ದರು. ಲಂಕಾ ಸರ್ಕಾರದ ಈ ಹಸ್ತಕ್ಷೇಪ ಐಸಿಸಿ ನಿಯಮಗಳಿಗೆ ವಿರುದ್ಧವಾಗಿದ್ದು, ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ.

ಐಸಿಸಿ ತನ್ನ ಹೇಳಿಕೆಯಲ್ಲಿ ಹೇಳಿರುವುದೇನು?

ಮೇಲೆ ಹೇಳಿದಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಹಲವು ಬದಲಾವಣೆಗಳಾಗಿವೆ. ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಗಮನಿಸಿರುವ ಐಸಿಸಿ, ಲಂಕಾ ಕ್ರಿಕೆಟ್ ತಂಡ ಶುಕ್ರವಾರ ತವರಿಗೆ ಮರಳಿದ ನಂತರ ಈ ನಿರ್ಧಾರವನ್ನು ಪ್ರಕಟಿಸಿದೆ. ಈ ಬಗ್ಗೆ ಐಸಿಸಿ ಇಂದು ಸಭೆ ನಡೆಸಿದ್ದು, ಈ ಸಭೆಯಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಐಸಿಸಿಯ ನಿಯಮವನ್ನು ಉಲ್ಲಂಘಿಸಿದೆ ಎಂಬ ನಿರ್ಧಾರಕ್ಕೆ ಬಂದಿದೆ. ಅಲ್ಲದೆ ಲಂಕಾ ಮಂಡಳಿಯು ತನ್ನ ವ್ಯವಹಾರಗಳಲ್ಲಿ ಶ್ರೀಲಂಕಾ ಸರ್ಕಾರದ ಹಸ್ತಕ್ಷೇಪವನ್ನು ತಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಲಂಕಾ ಮಂಡಳಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದೆ.

ಮುಂದಿನ ಸಭೆಯಲ್ಲಿ ಐಸಿಸಿ ನಿರ್ಧಾರ

ವರದಿಗಳ ಪ್ರಕಾರ, ಐಸಿಸಿ ಈಗಾಗಲೇ ತನ್ನ ನಿರ್ಧಾರದ ಬಗ್ಗೆ ಶ್ರೀಲಂಕಾ ಕ್ರಿಕೆಟ್‌ಗೆ ತಿಳಿಸಿದ್ದು, ನವೆಂಬರ್ 21 ರಂದು ನಡೆಯುವ ಸಭೆಯಲ್ಲಿ ಮುಂದಿನ ಕ್ರಮವನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಶ್ರೀಲಂಕಾ ತನ್ನ ಅಮಾನತು ಅವಧಿಯಲ್ಲಿ ಯಾವುದೇ ಐಸಿಸಿ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಮತ್ತು ದ್ವಿಪಕ್ಷೀಯ ಸರಣಿಗಳನ್ನು ಆಡಲು ಸಾಧ್ಯವಾಗುವುದಿಲ್ಲ. ವಾಸ್ತವವಾಗಿ ಶ್ರೀಲಂಕಾ,  ಮುಂದಿನ ಜನವರಿ ಮತ್ತು ಫೆಬ್ರವರಿಯಲ್ಲಿ 2024 ರ ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯಾವಳಿಯನ್ನು ಆಯೋಜಿಸಬೇಕಾಗಿದೆ. ಆದ್ದರಿಂದ ಐಸಿಸಿ ಮಂಡಳಿಯು ತನ್ನ ಮುಂದಿನ ಸಭೆಯಲ್ಲಿ ಈ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ. ಅದಾಗ್ಯೂ ಐಸಿಸಿ ಈ ಅಮಾನತು ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ.

Published On - 10:02 pm, Fri, 10 November 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ