AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ಟಿ20 ರ‍್ಯಾಂಕಿಂಗ್ ಪ್ರಕಟ: ಟಾಪ್-10 ನಲ್ಲಿ ನಾಲ್ವರು ಭಾರತೀಯರು

ICC T20 Rankings: ಟಿ20 ಕ್ರಿಕೆಟ್​ನ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ರುತುರಾಜ್ ಗಾಯಕ್ವಾಡ್ 13 ಸ್ಥಾನ ಜಿಗಿತ ಕಂಡಿದ್ದಾರೆ. ಈ ಮೂಲಕ ಟಿ20 ಬ್ಯಾಟರ್​ಗಳ ಪಟ್ಟಿಯಲ್ಲಿ 7ನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದೆಡೆ ಕಳೆದ ಬಾರಿ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಹಾರ್ದಿಕ್ ಪಾಂಡ್ಯರನ್ನು ವನಿಂದು ಹಸರಂಗ ಹಿಂದಿಕ್ಕಿದ್ದಾರೆ.

ICC T20I Rankings: ಟಿ20 ರ‍್ಯಾಂಕಿಂಗ್ ಪ್ರಕಟ: ಟಾಪ್-10 ನಲ್ಲಿ ನಾಲ್ವರು ಭಾರತೀಯರು
Team India
ಝಾಹಿರ್ ಯೂಸುಫ್
|

Updated on: Jul 10, 2024 | 2:22 PM

Share

ಐಸಿಸಿ ನೂತನ ಟಿ20 ಶ್ರೇಯಾಂಕ ಪಟ್ಟಿಯನ್ನು (ICC T20I Rankings) ಪ್ರಕಟಿಸಿದೆ. ಈ ಬಾರಿ ಟಾಪ್-10 ಪಟ್ಟಿಯಲ್ಲಿ ನಾಲ್ವರು ಭಾರತೀಯರು ಕಾಣಿಸಿಕೊಂಡಿದ್ದಾರೆ. ಆದರೆ ಭಾರತದ ಯಾವುದೇ ಆಟಗಾರ ಅಗ್ರಸ್ಥಾನವನ್ನು ಅಲಂಕರಿಸಿಲ್ಲ ಎಂಬುದು ವಿಶೇಷ. ಅಂದರೆ ಕಳೆದ ಬಾರಿ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ಟಿ20 ಬ್ಯಾಟರ್​ಗಳ ಪಟ್ಟಿಯಲ್ಲಿ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಸೂರ್ಯಕುಮಾರ್ ಯಾದವ್ ಈ ಬಾರಿ ಕೂಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಯಶಸ್ವಿ ಜೈಸ್ವಾಲ್ ಟಾಪ್-10 ನಿಂದ ಹೊರಬಿದ್ದಿದ್ದಾರೆ. ಇದೇ ವೇಳೆ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರುತುರಾಜ್ ಗಾಯಕ್ವಾಡ್ 13 ಸ್ಥಾನ ಮೇಲೇರುವ ಮೂಲಕ ಅಗ್ರ ಹತ್ತರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ…

ಟಿ20 ಬ್ಯಾಟರ್​ಗಳ ಟಾಪ್​-10 ಪಟ್ಟಿ:

  1. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 844 ರೇಟಿಂಗ್
  2. ಸೂರ್ಯಕುಮಾರ್ ಯಾದವ್ (ಭಾರತ)– 821 ರೇಟಿಂಗ್
  3. ಫಿಲ್ ಸಾಲ್ಟ್ (ಇಂಗ್ಲೆಂಡ್)- 797 ರೇಟಿಂಗ್
  4. ಬಾಬರ್ ಆಝಂ (ಪಾಕಿಸ್ತಾನ್)- 755 ರೇಟಿಂಗ್
  5. ಮೊಹಮ್ಮದ್ ರಿಝ್ವಾನ್ (ಪಾಕಿಸ್ತಾನ್)- 746 ರೇಟಿಂಗ್
  6. ಜೋಸ್ ಬಟ್ಲರ್ (ಇಂಗ್ಲೆಂಡ್)- 716 ರೇಟಿಂಗ್
  7. ರುತುರಾಜ್ ಗಾಯಕ್ವಾಡ್ (ಭಾರತ)– 662 ರೇಟಿಂಗ್
  8. ಬ್ರಾಂಡನ್ ಕಿಂಗ್ (ವೆಸ್ಟ್ ಇಂಡೀಸ್)- 656 ರೇಟಿಂಗ್
  9. ಜಾನ್ಸನ್ ಚಾರ್ಲ್ಸ್ (ವೆಸ್ಟ್ ಇಂಡೀಸ್)- 655 ರೇಟಿಂಗ್
  10. ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 646 ರೇಟಿಂಗ್

ಟಿ20 ಬೌಲರ್​ಗಳ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಈ ಬಾರಿ ಭಾರತದ ಏಕೈಕ ಬೌಲರ್​ ಮಾತ್ರ ಸ್ಥಾನ ಪಡೆದಿದ್ದಾರೆ. ಕಳೆದ ಬಾರಿ 9ನೇ ಸ್ಥಾನದಲ್ಲಿದ್ದ ಕುಲ್ದೀಪ್ ಯಾದವ್ ಈ ಬಾರಿ ಟಾಪ್-10 ನಿಂದ ಹೊರಬಿದ್ದಿದ್ದಾರೆ. ಇದಾಗ್ಯೂ ಅಕ್ಷರ್ ಪಟೇಲ್ 9ನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟಿ20 ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ.

ಟಿ20 ಬೌಲರ್​ಗಳ ಟಾಪ್-10 ಪಟ್ಟಿ:

  1. ಆದಿಲ್ ರಶೀದ್ (ಇಂಗ್ಲೆಂಡ್)- 718 ರೇಟಿಂಗ್
  2. ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)- 675 ರೇಟಿಂಗ್
  3. ವನಿಂದು ಹಸರಂಗ (ಶ್ರೀಲಂಕಾ)- 674 ರೇಟಿಂಗ್
  4. ರಶೀದ್ ಖಾನ್ (ಅಫ್ಘಾನಿಸ್ತಾನ್)- 668 ರೇಟಿಂಗ್
  5. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 662 ರೇಟಿಂಗ್
  6. ಅಕೀಲ್ ಹೊಸೈನ್ (ವೆಸ್ಟ್ ಇಂಡೀಸ್)- 659 ರೇಟಿಂಗ್
  7. ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 654 ರೇಟಿಂಗ್
  8. ಫಝಲ್​ಹಕ್ ಫಾರೂಖಿ (ಅಫ್ಘಾನಿಸ್ತಾನ್)- 645 ರೇಟಿಂಗ್
  9. ಅಕ್ಷರ್ ಪಟೇಲ್ (ಭಾರತ)- 644 ರೇಟಿಂಗ್
  10. ಮಹೀಶ್ ತೀಕ್ಷಣ (ಶ್ರೀಲಂಕಾ)- 644 ರೇಟಿಂಗ್

2ನೇ ಸ್ಥಾನಕ್ಕೆ ಕುಸಿದ ಹಾರ್ದಿಕ್:

ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟಿ20 ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಅಲ್ಲದೆ ಶ್ರೀಲಂಕಾದ ಆಲ್​ರೌಂಡರ್ ವನಿಂದು ಹಸರಂಗ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಟಿ20 ಆಲ್​​ರೌಂಡರ್​ಗಳ ಟಾಪ್-10 ಪಟ್ಟಿ:

  1. ವನಿಂದು ಹಸರಂಗ (ಶ್ರೀಲಂಕಾ)- 222 ರೇಟಿಂಗ್
  2. ಹಾರ್ದಿಕ್ ಪಾಂಡ್ಯ (ಭಾರತ)– 213 ರೇಟಿಂಗ್
  3. ಮಾರ್ಕಸ್ ಸ್ಟೋಯಿನಿಸ್ (ಆಸ್ಟ್ರೇಲಿಯಾ)- 211 ರೇಟಿಂಗ್
  4. ಸಿಕಂದರ್ ರಾಝ (ಝಿಂಬಾಬ್ವೆ)- 208 ರೇಟಿಂಗ್
  5. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 206 ರೇಟಿಂಗ್
  6. ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್)- 205 ರೇಟಿಂಗ್
  7. ದೀಪೇಂದ್ರ ಸಿಂಗ್ ಅರೀ (ನೇಪಾಳ)- 199 ರೇಟಿಂಗ್
  8. ಲಿಯಾಮ್ ಲಿವಿಂಗ್​ಸ್ಟೋನ್ (ಇಂಗ್ಲೆಂಡ್)- 187 ರೇಟಿಂಗ್
  9. ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 186 ರೇಟಿಂಗ್
  10. ಮೊಯೀನ್ ಅಲಿ (ಇಂಗ್ಲೆಂಡ್)- 174 ರೇಟಿಂಗ್
Follow Us
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್