ಐಸಿಸಿ ನೂತನ ಟಿ20 ಶ್ರೇಯಾಂಕ ಪಟ್ಟಿಯನ್ನು (ICC T20I Rankings) ಪ್ರಕಟಿಸಿದೆ. ಈ ಬಾರಿ ಟಾಪ್-10 ಪಟ್ಟಿಯಲ್ಲಿ ನಾಲ್ವರು ಭಾರತೀಯರು ಕಾಣಿಸಿಕೊಂಡಿದ್ದಾರೆ. ಆದರೆ ಭಾರತದ ಯಾವುದೇ ಆಟಗಾರ ಅಗ್ರಸ್ಥಾನವನ್ನು ಅಲಂಕರಿಸಿಲ್ಲ ಎಂಬುದು ವಿಶೇಷ. ಅಂದರೆ ಕಳೆದ ಬಾರಿ ಆಲ್ರೌಂಡರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ಟಿ20 ಬ್ಯಾಟರ್ಗಳ ಪಟ್ಟಿಯಲ್ಲಿ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಸೂರ್ಯಕುಮಾರ್ ಯಾದವ್ ಈ ಬಾರಿ ಕೂಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಯಶಸ್ವಿ ಜೈಸ್ವಾಲ್ ಟಾಪ್-10 ನಿಂದ ಹೊರಬಿದ್ದಿದ್ದಾರೆ. ಇದೇ ವೇಳೆ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರುತುರಾಜ್ ಗಾಯಕ್ವಾಡ್ 13 ಸ್ಥಾನ ಮೇಲೇರುವ ಮೂಲಕ ಅಗ್ರ ಹತ್ತರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟಿ20 ಬ್ಯಾಟರ್ಗಳ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ…
ಟಿ20 ಬೌಲರ್ಗಳ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಈ ಬಾರಿ ಭಾರತದ ಏಕೈಕ ಬೌಲರ್ ಮಾತ್ರ ಸ್ಥಾನ ಪಡೆದಿದ್ದಾರೆ. ಕಳೆದ ಬಾರಿ 9ನೇ ಸ್ಥಾನದಲ್ಲಿದ್ದ ಕುಲ್ದೀಪ್ ಯಾದವ್ ಈ ಬಾರಿ ಟಾಪ್-10 ನಿಂದ ಹೊರಬಿದ್ದಿದ್ದಾರೆ. ಇದಾಗ್ಯೂ ಅಕ್ಷರ್ ಪಟೇಲ್ 9ನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟಿ20 ಬೌಲರ್ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ.
ಟಿ20 ವಿಶ್ವಕಪ್ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟಿ20 ಆಲ್ರೌಂಡರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಅಲ್ಲದೆ ಶ್ರೀಲಂಕಾದ ಆಲ್ರೌಂಡರ್ ವನಿಂದು ಹಸರಂಗ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: Team India: ಕೊನೆಯ 10 ಓವರ್ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ