T20 World Cup 2022: ಪಂತ್ ಸತತ ವಿಫಲ: DK ಆಡುವುದು ಖಚಿತ..!

| Updated By: ಝಾಹಿರ್ ಯೂಸುಫ್

Updated on: Oct 13, 2022 | 7:35 PM

T20 World Cup 2022: ಅಭ್ಯಾಸ ಪಂದ್ಯದಲ್ಲೂ ರಿಷಭ್ ಪಂತ್ ಅವರಿಗೆ ಅವಕಾಶ ನೀಡುವ ಮೂಲಕ ಟೀಮ್ ಇಂಡಿಯಾ ಪ್ರಯೋಗಕ್ಕೆ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿತ್ತು.

T20 World Cup 2022: ಪಂತ್ ಸತತ ವಿಫಲ: DK ಆಡುವುದು ಖಚಿತ..!
Pant-DK
Follow us on

T20 World Cup 2022: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ (Team India) ಮಾಡಿದ ಮಹತ್ವದ ಪ್ರಯೋಗ ವಿಫಲವಾಗಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಎಡಗೈ ದಾಂಡಿಗನಿಗೆ ಅವಕಾಶ ನೀಡುವ ಸಲುವಾಗಿ ಟೀಮ್ ಇಂಡಿಯಾ ಅಭ್ಯಾಸ ಪಂದ್ಯಗಳಲ್ಲಿ ರಿಷಭ್ ಪಂತ್ (Rishabh Pant) ಅವರನ್ನು ಕಣಕ್ಕಿಳಿಸಿತ್ತು. ಆದರೆ ಆರಂಭಿಕನಾಗಿ ಅವಕಾಶ ಪಡೆದ ಪಂತ್ ವಿಫಲರಾಗಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ದಿನೇಶ್ ಕಾರ್ತಿಕ್ (Dinesh Karthik) ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಈ ಹಿಂದೆ ಏಷ್ಯಾಕಪ್​ನಲ್ಲಿ ಎಡಗೈ ದಾಂಡಿಗನಾಗಿ ರಿಷಭ್ ಪಂತ್ ಅವರಿಗೆ ಅವಕಾಶ ನೀಡಲಾಗಿತ್ತು. ಇದರಿಂದ ದಿನೇಶ್ ಕಾರ್ತಿಕ್ ಕೆಲ ಪಂದ್ಯಗಳಿಂದ ಹೊರಗುಳಿಯುವಂತಾಯಿತು. ಇದಾಗ್ಯೂ ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಪರಿಪೂರ್ಣ ಎಡಗೈ ದಾಂಡಿಗನನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಬಯಸಿತ್ತು.

ಇದೇ ಕಾರಣದಿಂದಾಗಿ ರಿಷಭ್ ಪಂತ್ ಅವರನ್ನು ಎರಡು ಅಭ್ಯಾಸ ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿಸುವ ನಿರ್ಧಾರಕ್ಕೆ ಬರಲಾಗಿದೆ. ಆದರೆ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ದ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿ ಔಟಾಗಿದ್ದ ಪಂತ್ 2ನೇ ಪಂದ್ಯದಲ್ಲೂ 9 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

ಇದನ್ನೂ ಓದಿ
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ರಿಷಭ್ ಪಂತ್ ಆಡಿರುವ ಕಳೆದ 6 ಟಿ20 ಪಂದ್ಯಗಳಲ್ಲಿ 30 ಕ್ಕಿಂತ ಹೆಚ್ಚಿನ ರನ್​ಗಳಿಸಿಲ್ಲ. ಇದಾಗ್ಯೂ ಕೇವಲ ಎಡಗೈ ಬ್ಯಾಟ್ಸ್​ಮನ್ ಎಂಬ ಕಾರಣಕ್ಕೆ ಪಂತ್ ಅವರಿಗೆ ಪದೇ ಪದೇ ಅವಕಾಶ ನೀಡುತ್ತಿರುವ ಬಗ್ಗೆ ಪ್ರಶ್ನೆಗಳೆದ್ದಿವೆ.

ಅತ್ತ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಅವರನ್ನು ಕಣಕ್ಕಿಳಿಸುವುದರಿಂದ ದಿನೇಶ್ ಕಾರ್ತಿಕ್ ಸ್ಥಾನಕ್ಕೆ ಕುತ್ತು ಬರುತ್ತಿತ್ತು. ಅಂದರೆ ಪಂತ್ ಅನ್ನು ಆಡಿಸಿದ್ರೆ ಓರ್ವ ಬೌಲರ್ ಅಥವಾ ಆಲ್​ರೌಂಡರ್​ ಅನ್ನು ಕೈ ಬಿಡಬೇಕಾಗಿತ್ತು. ಇದರಿಂದ ಕೇವಲ ಬ್ಯಾಟ್ಸ್​ಮನ್ ಆಗಿ ತಂಡದಲ್ಲಿರುತ್ತಿದ್ದ ಡಿಕೆ ಅವರನ್ನು ಕೈ ಬಿಡಲಾಗುತ್ತಿತ್ತು. ಇದೇ ಕಾರಣದಿಂದಾಗಿ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್​ಗೆ ಅವಕಾಶ ಸಿಕ್ಕಿರಲಿಲ್ಲ.

ಇದೀಗ ಅಭ್ಯಾಸ ಪಂದ್ಯದಲ್ಲೂ ರಿಷಭ್ ಪಂತ್ ಅವರಿಗೆ ಅವಕಾಶ ನೀಡುವ ಮೂಲಕ ಟೀಮ್ ಇಂಡಿಯಾ ಪ್ರಯೋಗಕ್ಕೆ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಈ ಪ್ರಯೋಗ ಫಲ ನೀಡಿಲ್ಲ. ಇದರಿಂದ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ದಿನೇಶ್ ಕಾರ್ತಿಕ್ ಸ್ಥಾನ ಖಚಿತವಾದಂತಾಗಿದೆ.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್