AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa: ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ನೋಡಿ ಮಾಹಿತಿ

ICC T20 World Cup 2022: ಗ್ರೂಪ್ 2 ರಲ್ಲಿರುವ ಬಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

India vs South Africa: ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ನೋಡಿ ಮಾಹಿತಿ
Team India T20 World Cup
TV9 Web
| Edited By: |

Updated on:Oct 28, 2022 | 10:35 AM

Share

ಕಾಂಗರೂಗಳ ನಾಡಿನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ (T20 World Cup 2022) ಭಾರತ ತಂಡ ಭರ್ಜರಿ ಶುಭಾರಂಭ ಮಾಡಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಮ್ ಇಂಡಿಯಾ (Team India) ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಪಾಕಿಸ್ತಾನ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಪಡೆ 4 ವಿಕೆಟ್​ಗಳ ರೋಚಕ ಗೆಲುವು ಸಾಧಿಸಿತು. ಕೊನೆಯ ಎಸೆತದ ವರೆಗೂ ನಡೆದ ಈ ಕಾದಾಟದಲ್ಲಿ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ತಂಡಕ್ಕೆ ಗೆಲುವು ತಂದಿಟ್ಟರು. ಗುರುವಾರ ನಡೆದ ದ್ವಿತೀಯ ಪಂದ್ಯದಲ್ಲೂ ನೆದರ್​ಲೆಂಡ್ಸ್ (India vs Netherlands) ವಿರುದ್ಧ 56 ರನ್​ಗಳ ಸುಲಭ ಜಯ ಕಂಡಿತು. ಇದೀಗ ಭಾರತ ತಂಡ ಮುಂದಿನ ಸವಾಲಿಗೆ ಸಜ್ಜಾಗಬೇಕಿದೆ. ಹಾಗಾದರೆ ಟೀಮ್ ಇಂಡಿಯಾ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ ಎಂಬುದನ್ನು ನೋಡೋಣ.

ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30 ಕ್ಕೆ ಈ ಕದನ ಶುರುವಾಗಲಿದೆ. ಆಫ್ರಿಕಾ ಆಡಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾದರೆ, ಮತ್ತೊಂದರಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ +5.200 ರನ್​ರೇಟ್​ನೊಂದಿಗೆ 3 ಅಂಕ ಪಡೆದು ಎರಡನೇ ಸ್ಥಾನಲ್ಲಿದೆ. ಭಾರತ ಆಡಿದ ಎರಡೂ ಪಂದ್ಯದಲ್ಲಿ ಜಯಿಸಿ +1.425 ರನ್​ರೇಟ್​ ಹೊಂದಿ 4 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ.

ಭಾರತ-ನೆದರ್​ಲೆಂಡ್ಸ್ ಪಂದ್ಯ ಹೇಗಿತ್ತು?:

ಇದನ್ನೂ ಓದಿ
Image
Rohit Sharma: ನೆದರ್​ಲೆಂಡ್ಸ್ ವಿರುದ್ಧ ಗೆದ್ದ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ಕೇಳಿ
Image
T20 World Cup 2022 Point Table: ಟೀಮ್ ಇಂಡಿಯಾ, ಜಿಂಬಾಬ್ವೆಗೆ ಜಯ: ಹೊಸ ಪಾಯಿಂಟ್ ಟೇಬಲ್ ಹೀಗಿದೆ
Image
Rohit Sharma: ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ದಾಖಲೆ ಉಡೀಸ್ ಮಾಡಿದ ಹಿಟ್​ಮ್ಯಾನ್
Image
IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಮೂವರು ಸ್ಟಾರ್ ಆಟಗಾರರು ಔಟ್..?

ಗುರುವಾರ ನೆದರ್​ಲೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು. ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಎಚ್ಚರಿಕೆಯ ಆಟವಾಡಿದ ಈ ಜೋಡಿ ಕೊನೆಯ ವರೆಗೂ ಬ್ಯಾಟಿಂಗ್ ನಡೆಸಿತು.

ಕೊಹ್ಲಿ 44 ಎಸೆತಗಳಲ್ಲಿ 3 ಫೋರ್, 2 ಸಿಕ್ಸರ್ ಬಾರಿಸಿ ಅಜೇಯ 62 ರನ್ ಗಳಿಸಿದರೆ, ಸೂರ್ಯ ಕುಮಾರ್ ಯಾದವ್ ಕೇವಲ 25 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಿತ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ನೆದರ್ಲೆಂಡ್ಸ್ ಪರ ಕ್ಲಾಸನ್ ಮತ್ತು ಮೀಕೆರನ್ ತಲಾ ಒಂದು ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು. ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು. ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

Published On - 9:31 am, Fri, 28 October 22

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ