AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು?

T20 World Cup 2026: ಐಸಿಸಿ ಟಿ20 ವಿಶ್ವಕಪ್ 2026 ಫೆಬ್ರವರಿ 7 ರಿಂದ ಭಾರತ ಮತ್ತು ಶ್ರೀಲಂಕಾದಲ್ಲಿ ಆರಂಭವಾಗಲಿದೆ. ಮೂರನೇ ಟ್ರೋಫಿ ಗೆಲ್ಲುವ ಗುರಿಯೊಂದಿಗೆ ಭಾರತ ತಂಡ, ಮೊದಲ ದಿನವೇ ಅಮೆರಿಕ ವಿರುದ್ಧ ಮುಂಬೈನ ವಾಂಖೆಡೆಯಲ್ಲಿ ಕಣಕ್ಕಿಳಿಯಲಿದೆ. ಲೀಗ್ ಹಂತದಲ್ಲಿ ಪ್ರತಿದಿನ 3 ಪಂದ್ಯಗಳು ನಡೆಯಲಿದ್ದು, ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋಹಾಟ್‌ಸ್ಟಾರ್‌ನಲ್ಲಿ ನೇರ ವೀಕ್ಷಿಸಬಹುದು. ಪ್ರಮುಖ ಪಂದ್ಯಗಳು, ವೇಳಾಪಟ್ಟಿ ಮತ್ತು ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿ.

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು?
T20 World Cup 2026
ಪೃಥ್ವಿಶಂಕರ
|

Updated on: Feb 06, 2026 | 10:44 PM

Share

ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸಲಿದೆ.

ಲೀಗ್ ಹಂತದಲ್ಲಿ ಪ್ರತಿ ದಿನ 3 ಪಂದ್ಯಗಳು

ಈ ಬಾರಿಯ ಟಿ20 ವಿಶ್ವಕಪ್​ನ ಲೀಗ್​ ಹಂತದಲ್ಲಿ ಪ್ರತಿ ದಿನ ಮೂರು ಪಂದ್ಯಗಳು ನಡೆಯಲಿವೆ. ಅಂದರೆ ಲೀಗ್ ಹಂತ ನಡೆಯಲಿರುವ 13 ದಿನಗಳಲ್ಲಿ ಪ್ರತಿದಿನ 3 ಪಂದ್ಯಗಳನ್ನು ಆಡಲಾಗುವುದು. ಪಂದ್ಯಾವಳಿಯ ಮೊದಲ ದಿನದಿಂದ (ಫೆಬ್ರವರಿ 7) ಫೆಬ್ರವರಿ 19 ರವರೆಗೆ, ಅಭಿಮಾನಿಗಳು ಪ್ರತಿದಿನ 3 ಪಂದ್ಯಗಳನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.

ಅದರಂತೆ ಪಂದ್ಯಾವಳಿಯ ಮೊದಲ ದಿನದಂದು ಒಟ್ಟು 6 ತಂಡಗಳು ಗೆಲುವಿಗಾಗಿ ಹೋರಾಡಲಿವೆ. ದಿನದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಬೆಳಿಗ್ಗೆ 11 ಗಂಟೆಗೆ ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಹಾಗೆಯೇ ದಿನದ ಎರಡನೇ ಪಂದ್ಯ ವೆಸ್ಟ್ ಇಂಡೀಸ್ ಮತ್ತು ಸ್ಕಾಟ್ಲೆಂಡ್ ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. ಈ ಎರಡು ಪಂದ್ಯಗಳ ಬಳಿಕ ದಿನದ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ಟಿ20 ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಲಭ್ಯವಿರುತ್ತವೆ. ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್/ಲ್ಯಾಪ್‌ಟಾಪ್ ಮತ್ತು ಟಿವಿಯಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಅಮೆರಿಕ ತಂಡ: ಮೊನಾಂಕ್ ಪಟೇಲ್ (ನಾಯಕ), ಜೆಸ್ಸಿ ಸಿಂಗ್, ಆಂಡ್ರೀಸ್ ಗೌಸ್, ಶೆಹನ್ ಜಯಸೂರ್ಯ, ಮಿಲಿಂದ್ ಕುಮಾರ್, ಶಯಾನ್ ಜಹಾಂಗೀರ್, ಸೈತೇಜ ಮುಕ್ಕಮಲ, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ನೋಸ್ತೂಶ್ ಕೆಂಜಿಗೆ, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್, ಮೊಹಮ್ಮದ್ ಮೊಹ್ಸಿನ್, ಶುಭಮ್ ರಂಜಾನೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ