ICC T20 World Cup India Squad: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಬುಮ್ರಾ ಎಂಟ್ರಿ, ಯಾರಿಗೆಲ್ಲ ಸ್ಥಾನ?

ICC T20 World Cup India Squad: ಆಸ್ಟ್ರೇಲಿಯಾದಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಆಯ್ಕೆ ಮಂಡಳಿ ಸಾಕಷ್ಟು ಚರ್ಚೆಯ ನಂತರ 15 ಆಟಗಾರರನ್ನು ಚುಟುಕು ಸಮರಕ್ಕೆ ಆಯ್ಕೆ ಮಾಡಿದೆ.

ICC T20 World Cup India Squad: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಬುಮ್ರಾ ಎಂಟ್ರಿ, ಯಾರಿಗೆಲ್ಲ ಸ್ಥಾನ?
Indian Cricket Team
Follow us
TV9 Web
| Updated By: ಪೃಥ್ವಿಶಂಕರ

Updated on:Sep 12, 2022 | 6:05 PM

ಆಸ್ಟ್ರೇಲಿಯಾದಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ (T20 World Cup) ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಆಯ್ಕೆ ಮಂಡಳಿ ಸಾಕಷ್ಟು ಚರ್ಚೆಯ ನಂತರ 15 ಆಟಗಾರರನ್ನು ಚುಟುಕು ಸಮರಕ್ಕೆ ಆಯ್ಕೆ ಮಾಡಿದೆ. ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ಟಿ20 ವಿಶ್ವಕಪ್​ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿದ್ದು, ಟೀಂ ಇಂಡಿಯಾ (Team India) ಕಳೆದ 9 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸಲು ಈಗಾಗಲೇ ತಯಾರಿ ಆರಂಭಿಸಿದೆ. ನಿರೀಕ್ಷೆಯಂತೆ ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿರುವ ತಂಡದ ನಾಯಕತ್ವ ರೋಹಿತ್ ಶರ್ಮಾ (Rohit Sharma) ಕೈಯಲ್ಲಿದ್ದು, ಉಪನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್​ಗೆ (KL Rahul) ಹಸ್ತಾಂತರಿಸಲಾಗಿದೆ. ಜೊತೆಗೆ ಇಂಜುರಿಯಿಂದ ತಂಡದಿಂದ ಹೊರಗಿದ್ದ ಜಸ್ಪ್ರೀತ್ ಬುಮ್ರಾ (Jasprit Bumrah) ಕೂಡ ತಂಡಕ್ಕೆ ಮರಳಿದ್ದಾರೆ.

ಟಿ20 ವಿಶ್ವಕಪ್ ಆಯ್ಕೆಗೂ ಮುನ್ನ ಕಳಪೆ ಫಾರ್ಮ್​ನಿಂದ ಹೆಣಗಾಡುತ್ತಿದ್ದ ರಿಷಬ್ ಪಂತ್ ಬಗ್ಗೆ ಹಲವು ಊಹಾಪೋಹಗಳು ಹಬ್ಬಿದ್ದವು. ಅಲ್ಲದೆ ಅವರ ಇತ್ತೀಚಿನ ಫಾರ್ಮ್ ಬಗ್ಗೆ ಪ್ರಶ್ನೆಗಳು ಎದ್ದಿದ್ದರಿಂದ ಅವರು ತಂಡದಿಂದ ಹೊರಗುಳಿಯಬಹುದು ಎಂದು ಊಹಿಸಲಾಗಿತ್ತು. ಆದರೆ ಆಯ್ಕೆಗಾರರು ಪಂತ್ ಮೇಲೆ ನಂಬಿಕೆ ಇಟ್ಟು ತಂಡದಲ್ಲಿ ಅವಕಾಶ ನೀಡಿದ್ದಾರೆ. ಅವರೊಂದಿಗೆ ದಿನೇಶ್ ಕಾರ್ತಿಕ್ ಅವರಿಗೂ ಟೀಂ ಇಂಡಿಯಾದಲ್ಲಿ ಅವಕಾಶ ನೀಡಲಾಗಿದೆ. ಆದರೆ ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ಬೌಲಿಂಗ್ ವಿಭಾಗ ವಿಫಲವಾಗಿದ್ದನ್ನು ಗಮನಿಸಿದ್ದ ಕ್ರಿಕೆಟ್ ಪಂಡಿತರು ಹಾಗೂ ಟೀಂ ಇಂಡಿಯಾ ಮಾಜಿ ಆಟಗಾರರು ಮೊಹಮ್ಮದ್ ಶಮಿಗೆ ತಂಡದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದರು. ಆದರೆ ಇದೆಲ್ಲದಕ್ಕೂ ಸೊಪ್ಪು ಹಾಕದ ಆಯ್ಕೆ ಮಂಡಳಿ ಟಿ20 ವಿಶ್ವಕಪ್‌ ತಂಡಕ್ಕೆ ಶಮಿ ಅವರನ್ನು ಆಯ್ಕೆ ಮಾಡಿಲ್ಲ.

ತಂಡದಲ್ಲಿ 15 ಆಟಗಾರರು

2013ರಲ್ಲಿ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ ಕೊನೆಯ ಬಾರಿಗೆ ಐಸಿಸಿ ಪ್ರಶಸ್ತಿ ಗೆದ್ದಿತ್ತು. ಇದಾದ ಬಳಿಕ ಧೋನಿ ಯುಗ ಅಂತ್ಯವಾಯಿತು. ಬಳಿಕ ವಿರಾಟ್ ಕೊಹ್ಲಿ ನಾಯಕತ್ವದ ಆಟವೂ ಕೊನೆಗೊಂಡಿತು. ಆದರೆ, ಭಾರತ ತಂಡಕ್ಕೆ ಐಸಿಸಿ ಪ್ರಶಸ್ತಿಗೆ ಮುತ್ತಿಕ್ಕಲಾಗಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಆ ಸುದೀರ್ಘ ಕಾಯುವಿಕೆಯನ್ನು ಕೊನೆಗಾಣಿಸುತ್ತಾರ ಎಂಬುದನ್ನು ಕಾದುನೋಡಬೇಕಿದೆ. ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯದ ಕಾರಣ ಏಷ್ಯಾಕಪ್‌ನಲ್ಲಿ ಆಡಿರಲಿಲ್ಲ. ಆದರೆ ಈಗ ಅವರು ಸಂಪೂರ್ಣ ಫಿಟ್ ಆಗಿದ್ದು, ತಂಡಕ್ಕೆ ಮರಳಿದ್ದಾರೆ.

ನಿರೀಕ್ಷೆಯಂತೆಯೇ ತಂಡ ಪ್ರಕಟ

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ಆಯ್ಕೆಗೂ ಮುನ್ನ ತಂಡದಲ್ಲಿ ಯಾರೆಲ್ಲ ಅವಕಾಶ ಪಡೆಯಲಿದ್ದಾರೆ ಎಂಬುದರ ಬಗ್ಗೆ ಹಲವು ಕ್ರಿಕೆಟ್ ಪಂಡಿತರು ತಮ್ಮ ಅಭಿಪ್ರಾಯ ಮಂಡಿಸಿದ್ದರು. ಪರಿಣಿತರ ನಿರೀಕ್ಷೆಯಂತೆಯೇ ಟೀಂ ಇಂಡಿಯಾ ಪ್ರಕಟವಾಗಿದ್ದು, ನಾಯಕ ರೋಹಿತ್ ಶರ್ಮಾ ಅವರಲ್ಲದೆ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಸ್ಟ್ಯಾಂಡ್‌ಬೈ ಲೀಸ್ಟ್​ನಲ್ಲಿ ಮೊಹಮ್ಮದ್ ಶಮಿ

15 ಆಟಗಾರರನ್ನು ಹೊರತುಪಡಿಸಿ ನಾಲ್ವರು ಆಟಗಾರರನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗಿದೆ. ಇವುಗಳಲ್ಲಿ ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್ ಮತ್ತು ದೀಪಕ್ ಚಹಾರ್ ಅವರ ಹೆಸರುಗಳು ಸೇರಿವೆ.

ಅ. 23 ರಂದು ಭಾರತದ ಮೊದಲ ಪಂದ್ಯ

T20 ವಿಶ್ವಕಪ್ 2022, ಅಕ್ಟೋಬರ್ 22 ರಿಂದ ನವೆಂಬರ್ 13 ರವರೆಗೆ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಅಕ್ಟೋಬರ್ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ.

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್

ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್ ಮತ್ತು ದೀಪಕ್ ಚಹಾರ್

Published On - 5:36 pm, Mon, 12 September 22

ಮನೆಯಲ್ಲಿ ಅಕ್ಷತೆಯನ್ನು ಹೇಗೆ ತಯಾರಿಸಬೇಕು? ವಿಡಿಯೋ ನೋಡಿ
ಮನೆಯಲ್ಲಿ ಅಕ್ಷತೆಯನ್ನು ಹೇಗೆ ತಯಾರಿಸಬೇಕು? ವಿಡಿಯೋ ನೋಡಿ
Daily horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Daily horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್