AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷಗಳ ನಂತರ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಕೂಲ್ ಕ್ಯಾಪ್ಟನ್ ಧೋನಿ! ಬಿಸಿಸಿಐ ಅಧಿಕೃತ ಘೋಷಣೆ

T20 World Cup: ಮಾಜಿ ವಿಶ್ವ ಚಾಂಪಿಯನ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ತಂಡದ ಸಿಬ್ಬಂದಿಯಲ್ಲಿ ಮಾರ್ಗದರ್ಶಕರಾಗಿ ಸೇರಿಸಿಕೊಂಡಿದೆ. ಮಹೇಂದ್ರ ಸಿಂಗ್ ಧೋನಿ 2007 ರಲ್ಲಿ ಭಾರತಕ್ಕೆ ಮೊದಲ ಟಿ 20 ವಿಶ್ವಕಪ್ ಗೆದ್ದುಕೊಟ್ಟಿದ್ದರು.

2 ವರ್ಷಗಳ ನಂತರ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಕೂಲ್ ಕ್ಯಾಪ್ಟನ್ ಧೋನಿ! ಬಿಸಿಸಿಐ ಅಧಿಕೃತ ಘೋಷಣೆ
ಮಹೇಂದ್ರ ಸಿಂಗ್ ಧೋನಿ
TV9 Web
| Edited By: |

Updated on:Sep 08, 2021 | 10:02 PM

Share

ಐಸಿಸಿ ಟಿ20 ವಿಶ್ವಕಪ್​ಗಾಗಿ ಬಿಸಿಸಿಐ 15 ಜನರ ತಂಡವನ್ನು ಪ್ರಕಟಿಸಿದೆ. ಆಟಗಾರರ ಜೊತೆಯಲ್ಲಿ, ಪ್ರಮುಖ ಘೋಷಣೆಯೊಂದನ್ನು ಬಿಸಿಸಿಐ ಮಾಡಿದೆ. ಇದು ಅಭಿಮಾನಿಗಳ ಸಂತೋಷವನ್ನು ಮಿತಿಯಿಲ್ಲದೆ ಹೆಚ್ಚಿಸಿದೆ. ಬಿಸಿಸಿಐ, ಮಾಜಿ ವಿಶ್ವ ಚಾಂಪಿಯನ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ತಂಡದ ಸಿಬ್ಬಂದಿಯಲ್ಲಿ ಮಾರ್ಗದರ್ಶಕರಾಗಿ ಸೇರಿಸಿಕೊಂಡಿದೆ. ಮಹೇಂದ್ರ ಸಿಂಗ್ ಧೋನಿ 2007 ರಲ್ಲಿ ಭಾರತಕ್ಕೆ ಮೊದಲ ಟಿ 20 ವಿಶ್ವಕಪ್ ಗೆದ್ದುಕೊಟ್ಟಿದ್ದರು.

ನಿರ್ಧಾರದ ಬಗ್ಗೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ನಾನು ದುಬೈನಲ್ಲಿ ಧೋನಿಯೊಂದಿಗೆ ಮಾತನಾಡಿದೆ. ಅವರು ನಮ್ಮ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ ಮತ್ತು ತಂಡವನ್ನು ಸೇರುವುದಾಗಿ ತಿಳಿಸಿದ್ದಾರೆ . ನಾನು ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಎಲ್ಲರೂ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಭಾರತದ ಮೊದಲ ಟಿ 20 ಪಂದ್ಯದ ಭಾಗವಾಗಿದ್ದರು. ಅವರು 2006 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪಾದಾರ್ಪಣೆ ಮಾಡಿದರು. ಮುಂದಿನ ವರ್ಷವೇ ಅವರನ್ನು ಟಿ 20 ವಿಶ್ವಕಪ್‌ ತಂಡದ ನಾಯಕನಾಗಿ ಆಯ್ಕೆ ಮಾಡಲಾಯಿತು. ದಕ್ಷಿಣ ಆಫ್ರಿಕಾದಲ್ಲಿ ನಡೆದ ಈ ವಿಶ್ವಕಪ್‌ನಲ್ಲಿ ಅವರು ಭಾರತವನ್ನು ಗೆಲುವಿನತ್ತ ಮುನ್ನಡೆಸಿದರು.

ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ ಈ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗ್ರೂಪ್ -2 ರಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ, ಭಾರತದೊಂದಿಗೆ ಪಾಕಿಸ್ತಾನ, ನ್ಯೂಜಿಲ್ಯಾಂಡ್ ಮತ್ತು ಅಫ್ಘಾನಿಸ್ತಾನ ತಂಡಗಳಿವೆ. ಆದರೆ ಅರ್ಹತಾ ಸುತ್ತಿನಿಂದ ಎರಡು ತಂಡಗಳು ಬರುತ್ತವೆ. ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 24 ರಂದು ಪಾಕಿಸ್ತಾನದ ವಿರುದ್ಧ ಆಡಬೇಕಿದೆ. ಇದರ ನಂತರ, ಅಕ್ಟೋಬರ್ 31 ರಂದು, ನ್ಯೂಜಿಲೆಂಡ್ ವಿರುದ್ಧ ಆಡಲಿದ್ದಾರೆ. ನವೆಂಬರ್ 3 ರಂದು ಅಫ್ಘಾನಿಸ್ತಾನವನ್ನು ಎದುರಿಸಲಿದ್ದಾರೆ. ನವೆಂಬರ್ 5 ಮತ್ತು 8 ರಂದು ಭಾರತವು ಉಳಿದ ಎರಡು ಪಂದ್ಯಗಳನ್ನು ಆಡಲಿದೆ.

ಟಿ 20 ವಿಶ್ವಕಪ್‌ಗಾಗಿ ಭಾರತ ತಂಡ ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ ಅಶ್ವಿನ್, ರಾಹುಲ್ ಚಾಹರ್, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ .

ಹೆಚ್ಚುವರಿ ಆಟಗಾರರು – ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್.

Published On - 9:52 pm, Wed, 8 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ