AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ಟಿ20 ರ‍್ಯಾಂಕಿಂಗ್ ಪ್ರಕಟ: 4 ಸ್ಥಾನ ಮೇಲೇರಿದ ಯಶಸ್ವಿ ಜೈಸ್ವಾಲ್

ICC T20I Rankings: ಐಸಿಸಿ ಪ್ರಕಟಿಸಿರುವ ನೂತನ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ನಾಲ್ವರು ಆಟಗಾರರು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಕೆಲ ವಾರಗಳ ಹಿಂದೆ ಅಗ್ರಸ್ಥಾನ ಅಲಂಕರಿಸಿದ್ದ ಟೀಮ್ ಇಂಡಿಯಾ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಈ ಬಾರಿ 4 ಸ್ಥಾನಗಳಲ್ಲಿ ಕುಸಿತ ಕಂಡಿದ್ದು, ಟಾಪ್-5 ಪಟ್ಟಿಯಿಂದ ಹೊರಬಿದ್ದಿದ್ದಾರೆ.

ICC T20I Rankings: ಟಿ20 ರ‍್ಯಾಂಕಿಂಗ್ ಪ್ರಕಟ: 4 ಸ್ಥಾನ ಮೇಲೇರಿದ ಯಶಸ್ವಿ ಜೈಸ್ವಾಲ್
Yashasvi Jaiswal
ಝಾಹಿರ್ ಯೂಸುಫ್
|

Updated on: Jul 17, 2024 | 2:53 PM

Share

ಐಸಿಸಿ ನೂತನ ಟಿ20 ಶ್ರೇಯಾಂಕ ಪಟ್ಟಿಯನ್ನು (ICC T20I Rankings) ಪ್ರಕಟಿಸಿದೆ. ಈ ಬಾರಿ ಟಿ20 ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕಳೆದ ಬಾರಿಯಂತೆ ಈ ಸಲ ಕೂಡ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಯಶಸ್ವಿಯಾಗಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ 4 ಸ್ಥಾನ ಜಿಗಿತ ಕಂಡಿದ್ದಾರೆ. ಅದರಂತೆ 6ನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಸೂರ್ಯಕುಮಾರ್ ಯಾದವ್ ಹಾಗೂ ಯಶಸ್ವಿ ಜೈಸ್ವಾಲ್ ಅವರ ಬಳಿಕ ರುತುರಾಜ್ ಗಾಯಕ್ವಾಡ್ ಅಗ್ರ ಹತ್ತರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ…

ಟಿ20 ಬ್ಯಾಟರ್​ಗಳ ಟಾಪ್​-10 ಪಟ್ಟಿ:

  1. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 844 ರೇಟಿಂಗ್
  2. ಸೂರ್ಯಕುಮಾರ್ ಯಾದವ್ (ಭಾರತ)- 797 ರೇಟಿಂಗ್
  3. ಫಿಲ್ ಸಾಲ್ಟ್ (ಇಂಗ್ಲೆಂಡ್)- 797 ರೇಟಿಂಗ್
  4. ಬಾಬರ್ ಆಝಂ (ಪಾಕಿಸ್ತಾನ್)- 755 ರೇಟಿಂಗ್
  5. ಮೊಹಮ್ಮದ್ ರಿಝ್ವಾನ್ (ಪಾಕಿಸ್ತಾನ್) 746 ರೇಟಿಂಗ್
  6. ಯಶಸ್ವಿ ಜೈಸ್ವಾಲ್ (ಭಾರತ)- 743 ರೇಟಿಂಗ್
  7. ಜೋಸ್ ಬಟ್ಲರ್ (ಇಂಗ್ಲೆಂಡ್)- 716 ರೇಟಿಂಗ್
  8. ರುತುರಾಜ್ ಗಾಯಕ್ವಾಡ್ (ಭಾರತ)- 684 ರೇಟಿಂಗ್
  9. ಬ್ರಾಂಡನ್ ಕಿಂಗ್ (ವೆಸ್ಟ್ ಇಂಡೀಸ್)- 656 ರೇಟಿಂಗ್
  10. ಜಾನ್ಸನ್ ಚಾರ್ಲ್ಸ್ (ವೆಸ್ಟ್ ಇಂಡೀಸ್)- 655 ರೇಟಿಂಗ್

ಟಿ20 ಬೌಲರ್​ಗಳ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಭಾರತದ ಯಾವುದೇ ಬೌಲರ್ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಕಳೆದ ಬಾರಿ ಟಾಪ್-10 ಸ್ಥಾನ ಪಡೆದಿದ್ದ ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ಈ ಬಾರಿ ಮೊದಲ ಹತ್ತರಿಂದ ಹೊರಬಿದ್ದಿದ್ದಾರೆ. ಅದರಂತೆ ಟಿ20 ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ.

ಟಿ20 ಬೌಲರ್​ಗಳ ಟಾಪ್-10 ಪಟ್ಟಿ:

  1. ಆದಿಲ್ ರಶೀದ್ (ಇಂಗ್ಲೆಂಡ್)- 718 ರೇಟಿಂಗ್
  2. ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)- 675 ರೇಟಿಂಗ್
  3. ವನಿಂದು ಹಸರಂಗ (ಶ್ರೀಲಂಕಾ)- 674 ರೇಟಿಂಗ್
  4. ರಶೀದ್ ಖಾನ್ (ಅಫ್ಘಾನಿಸ್ತಾನ್)- 668 ರೇಟಿಂಗ್
  5. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 662 ರೇಟಿಂಗ್
  6. ಅಕೀಲ್ ಹೊಸೈನ್ (ವೆಸ್ಟ್ ಇಂಡೀಸ್)- 659 ರೇಟಿಂಗ್
  7. ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 654 ರೇಟಿಂಗ್
  8. ಫಝಲ್​ಹಕ್ ಫಾರೂಖಿ (ಅಫ್ಘಾನಿಸ್ತಾನ್)- 645 ರೇಟಿಂಗ್
  9. ಮಹೀಶ್ ತೀಕ್ಷಣ (ಶ್ರೀಲಂಕಾ)- 644 ರೇಟಿಂಗ್
  10. ಅಲ್ಝಾರಿ ಜೋಸೆಫ್ (ವೆಸ್ಟ್ ಇಂಡೀಸ್)- 633 ರೇಟಿಂಗ್

ಇದನ್ನೂ ಓದಿ: RCB… ಅದೊಂದು ತಂಡವೇ ಅಲ್ಲ: ಮಾಜಿ ಆಟಗಾರ ಕಿಡಿ

6ನೇ ಸ್ಥಾನಕ್ಕೆ ಕುಸಿದ ಹಾರ್ದಿಕ್:

ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟಿ20 ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ 4 ಸ್ಥಾನ ಕುಸಿತ ಕಂಡಿದ್ದಾರೆ. ಈ ಮೂಲಕ ಆರನೇ ಸ್ಥಾನ ಅಲಂಕರಿಸಿದ್ದಾರೆ. ಹಾರ್ದಿಕ್ ಹೊರತಾಗಿ ಭಾರತದ ಯಾವುದೇ ಆಲ್​ರೌಂಡರ್ ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

ಟಿ20 ಆಲ್​​ರೌಂಡರ್​ಗಳ ಟಾಪ್-10 ಪಟ್ಟಿ:

  1. ವನಿಂದು ಹಸರಂಗ (ಶ್ರೀಲಂಕಾ)- 222 ರೇಟಿಂಗ್
  2. ಮಾರ್ಕಸ್ ಸ್ಟೋಯಿನಿಸ್ (ಆಸ್ಟ್ರೇಲಿಯಾ)- 211 ರೇಟಿಂಗ್
  3. ಸಿಕಂದರ್ ರಾಝ (ಝಿಂಬಾಬ್ವೆ)- 208 ರೇಟಿಂಗ್
  4. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 206 ರೇಟಿಂಗ್
  5. ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್)- 205 ರೇಟಿಂಗ್
  6. ಹಾರ್ದಿಕ್ ಪಾಂಡ್ಯ (ಭಾರತ)- 201 ರೇಟಿಂಗ್
  7. ದೀಪೇಂದ್ರ ಸಿಂಗ್ ಅರೀ (ನೇಪಾಳ)- 199 ರೇಟಿಂಗ್
  8. ಲಿಯಾಮ್ ಲಿವಿಂಗ್​ಸ್ಟೋನ್ (ಇಂಗ್ಲೆಂಡ್)- 187 ರೇಟಿಂಗ್
  9. ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 186 ರೇಟಿಂಗ್
  10. ಮೊಯೀನ್ ಅಲಿ (ಇಂಗ್ಲೆಂಡ್)- 174 ರೇಟಿಂಗ್
Follow Us
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ