T20I Rankings: ರ್ಯಾಂಕಿಂಗ್ನಲ್ಲೂ ಕೊಹ್ಲಿಯ ವಿಶ್ವ ದಾಖಲೆ ಮುರಿದ ಬಾಬರ್ ಆಜಂ
ICC T20I Rankings: 3ನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ಐಡೆನ್ ಮಾಕ್ರಾರ್ಮ್, ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್ನ ಡೇವಿಡ್ ಮಲಾನ್ ಇದ್ದಾರೆ. ಹಾಗೆಯೇ 5ನೇ ಸ್ಥಾನವನ್ನು ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಅಲಂಕರಿಸಿದ್ದು, 6ನೇ ಸ್ಥಾನದಲ್ಲಿ ನ್ಯೂಜಿಲೆಂಡ್ನ ಡೆವೊನ್ ಕಾನ್ವೇ ಕಾಣಿಸಿಕೊಂಡಿದ್ದಾರೆ.
ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಂ (Babar Azam)ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದಾರೆ. ನೂತನ ಐಸಿಸಿ ಶ್ರೇಯಾಂಕದಲ್ಲಿ (ICC T20I Rankings) ಬಾಬರ್ ಎಲ್ಲಾ ಮೂರು ಸ್ವರೂಪಗಳಲ್ಲಿ ಟಾಪ್- 5 ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲಿ ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ವಿಶ್ವದ ನಂಬರ್-1 ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದರೆ, ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ವಿಶೇಷ ಎಂದರೆ ಈ ಬಾರಿ ಬಾಬರ್ ಐಸಿಸಿ ರ‍್ಯಾಂಕಿಂಗ್ ಮೂಲಕ ವಿರಾಟ್ ಕೊಹ್ಲಿಯನ್ನು ದಾಖಲೆಯನ್ನು ಸಹ ಮುರಿದಿದ್ದಾರೆ. ಅಂದರೆ ಟಿ20 ರ್ಯಾಂಕಿಂಗ್ನಲ್ಲಿ ಅತ್ಯಧಿಕ ದಿನ ನಂಬರ್- 1 ಸ್ಥಾನ ಅಲಂಕರಿಸಿದ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆ ಇದೀಗ ಬಾಬರ್ ಆಜಂ ಪಾಲಾಗಿದೆ.
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕೊಹ್ಲಿ ಕಳೆದ ಒಂದು ದಶಕದಲ್ಲಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಒಟ್ಟು 1013 ದಿನಗಳ ಕಾಲ ನಂಬರ್ 1 ಆಗಿ ಕಾಣಿಸಿಕೊಂಡಿದ್ದರು. ಇದೀಗ ಬಾಬರ್ ಆಜಂ ಒಟ್ಟು 1014 ದಿನಗಳ ಕಾಲ ನಂಬರ್ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಶ್ರೇಯಾಂಕದಲ್ಲಿ ದಿನಗಳ ಲೆಕ್ಕದಲ್ಲಿ ಅತ್ಯಧಿಕ ದಿನ ಅಗ್ರಸ್ಥಾನ ಅಲಂಕರಿಸಿದ ಆಟಗಾರನಾಗಿ ಪಾಕಿಸ್ತಾನ್ ತಂಡದ ನಾಯಕ ಹೊರಹೊಮ್ಮಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಬಾಬರ್ ಆಜಂ ತಮ್ಮದಾಗಿಸಿಕೊಂಡಿದ್ದಾರೆ.
ನೂತನ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಬಾಬರ್ ಆಜಂ 818 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ (794 ರೇಟಿಂಗ್) ಇದ್ದಾರೆ. 3ನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ಐಡೆನ್ ಮಾಕ್ರಾರ್ಮ್, ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್ನ ಡೇವಿಡ್ ಮಲಾನ್ ಇದ್ದಾರೆ. ಹಾಗೆಯೇ 5ನೇ ಸ್ಥಾನವನ್ನು ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಅಲಂಕರಿಸಿದ್ದು, 6ನೇ ಸ್ಥಾನದಲ್ಲಿ ನ್ಯೂಜಿಲೆಂಡ್ನ ಡೆವೊನ್ ಕಾನ್ವೇ ಕಾಣಿಸಿಕೊಂಡಿದ್ದಾರೆ.
ಇನ್ನು ಟಾಪ್ 10 ನಲ್ಲಿ ಕಾಣಿಸಿಕೊಂಡಿರುವ ಏಕೈಕ ಭಾರತೀಯ ಆಟಗಾರ ಇಶಾನ್ ಕಿಶನ್ 7ನೇ ಸ್ಥಾನವನ್ನು ಅಲಂಕರಿಸಿದ್ದಾರೆ. 8ನೇ ಸ್ಥಾನದಲ್ಲಿ ಶ್ರೀಲಂಕಾದ ಪಾತುಂ ನಿಸ್ಸಂಕಾ, 9ನೇ ಸ್ಥಾನದಲ್ಲಿ ಸೌತ್ ಆಫ್ರಿಕಾದ ರಸ್ಸಿ ವಂಡರ್ ಡುಸ್ಸೆನ್ ಹಾಗೂ 10ನೇ ಸ್ಥಾನದಲ್ಲಿ ನ್ಯೂಜಿಲೆಂಡ್ನ ಮಾರ್ಟಿನ್ ಗಪ್ಟಿಲ್ ಇದ್ದಾರೆ.
ಹಾಗೆಯೇ ಪ್ರಸ್ತುತ ಟಿ20 ರ್ಯಾಂಕಿಂಗ್ನಲ್ಲಿ ವಿರಾಟ್ ಕೊಹ್ಲಿ 21ನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ 19ನೇ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ ಐರ್ಲೆಂಡ್ ವಿರುದ್ದ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ದೀಪಕ್ ಹೂಡಾ 414 ಸ್ಥಾನ ಜಿಗಿದು ಇದೀಗ 104ನೇ ಸ್ಥಾನಕ್ಕೆ ಬಂದಿದ್ದಾರೆ. ಇನ್ನು ಟಿ20ಯ ಟಾಪ್-10 ಬೌಲರ್‌ಗಳಲ್ಲಿ ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್ವುಡ್ ಅಗ್ರಸ್ಥಾನದಲ್ಲಿದ್ದಾರೆ, ಟಾಪ್ 10 ನಲ್ಲಿ ಭಾರತದ ಯಾವುದೇ ಬೌಲರ್ಗಳಿಲ್ಲ ಎಂಬುದೇ ಅಚ್ಚರಿ.
Published On - 3:58 pm, Wed, 29 June 22