ICC Test Rankings: ಟಾಪ್-3 ಗೆ ಸ್ಪೋಟಕ ದಾಂಡಿಗ ಹ್ಯಾರಿ ಬ್ರೂಕ್ ಎಂಟ್ರಿ
ICC Test Rankings: ಐಸಿಸಿ ಟೆಸ್ಟ್ ಬ್ಯಾಟರ್ಗಳ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಮೂವರು ಬ್ಯಾಟರ್ಗಳು ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಯುವ ಸ್ಪೋಟಕ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಕೂಡ ಒಬ್ಬರು ಎಂಬುದು ವಿಶೇಷ. ಹಾಗೆಯೇ ಇಂಗ್ಲೆಂಡ್ ತಂಡದ ಸ್ಪೋಟಕ ದಾಂಡಿಗ ಹ್ಯಾರಿ ಬ್ರೂಕ್ ಈ ಬಾರಿ 4 ಸ್ಥಾನ ಜಿಗಿತ ಕಂಡಿದ್ದಾರೆ.
ಐಸಿಸಿ ಟೆಸ್ಟ್ ಬ್ಯಾಟರ್ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದೆಡೆ ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ನ ಸ್ಪೋಟಕ ಬ್ಯಾಟ್ಸಮನ್ ಹ್ಯಾರಿ ಬ್ರೂಕ್ ಈ ಸಲ ಮೂರನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹ್ಯಾರಿ ಬ್ರೂಕ್ 64 ಎಸೆತಗಳಲ್ಲಿ ಬಿರುಸಿನ ಅರ್ಧಶತಕ ಬಾರಿಸಿದ್ದರು. ಇನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ನಲ್ಲಿ 132 ಎಸೆತಗಳಲ್ಲಿ 13 ಫೋರ್ಗಳೊಂದಿಗೆ 109 ರನ್ಗಳ ಭರ್ಜರಿ ಶತಕ ಸಿಡಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಹ್ಯಾರಿ ಬ್ರೂಕ್ ಟೆಸ್ಟ್ ಬ್ಯಾಟರ್ಗಳ ಪಟ್ಟಿಯಲ್ಲಿ ನಾಲ್ಕು ಸ್ಥಾನ ಮೇಲೇರಿದ್ದಾರೆ.
ಅಗ್ರ ಹತ್ತರಲ್ಲಿ ಭಾರತೀಯರು:
ಟಾಪ್-10 ಪಟ್ಟಿಯಲ್ಲಿ ಭಾರತದ ಮೂವರು ಬ್ಯಾಟರ್ಗಳು ಸ್ಥಾನ ಪಡೆದಿದ್ದಾರೆ. ಆದರೆ ಯಾರೂ ಕೂಡ ಟಾಪ್-5 ನಲ್ಲಿಲ್ಲ ಎಂಬುದು ವಿಶೇಷ. ಅದರಂತೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 7ನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಯಶಸ್ವಿ ಜೈಸ್ವಾಲ್ 8ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಹಾಗೆಯೇ ವಿರಾಟ್ ಕೊಹ್ಲಿ ಈ ಬಾರಿ 10ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಟೆಸ್ಟ್ ಬ್ಯಾಟರ್ನ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ.
ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?
ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿ:
- 1- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 859 ರೇಟಿಂಗ್
- 2- ಜೋ ರೂಟ್ (ಇಂಗ್ಲೆಂಡ್)- 852 ರೇಟಿಂಗ್
- 3- ಹ್ಯಾರಿ ಬ್ರೂಕ್ (ಇಂಗ್ಲೆಂಡ್)- 771 ರೇಟಿಂಗ್
- 4- ಬಾಬರ್ ಆಝಂ (ಪಾಕಿಸ್ತಾನ್)- 768 ರೇಟಿಂಗ್
- 5- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 768 ರೇಟಿಂಗ್
- 6- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 757 ರೇಟಿಂಗ್
- 7- ರೋಹಿತ್ ಶರ್ಮಾ (ಭಾರತ)- 751 ರೇಟಿಂಗ್
- 8- ಯಶಸ್ವಿ ಜೈಸ್ವಾಲ್ (ಭಾರತ)- 740 ರೇಟಿಂಗ್
- 9- ದಿಮುತ್ ಕರುಣರತ್ನೆ (ಶ್ರೀಲಂಕಾ)- 739 ರೇಟಿಂಗ್
- 10- ವಿರಾಟ್ ಕೊಹ್ಲಿ (ಭಾರತ)- 737 ರೇಟಿಂಗ್
Published On - 7:13 am, Thu, 25 July 24